ಸರ್ಕಾರದಿಂದ ನೇಕಾರರ ಕಡೆಗಣನೆ: ಶ್ರೀ


Team Udayavani, Mar 15, 2021, 8:22 PM IST

ghhgdfh

ಚಿತ್ರದುರ್ಗ: ರಾಜ್ಯದಲ್ಲಿ 60 ರಿಂದ 80 ಲಕ್ಷ ನೇಕಾರರಿದ್ದರೂ, ವಿಧಾನ ಸೌಧದಲ್ಲಿ ನಮ್ಮ ಪರವಾಗಿ ಧ್ವನಿ ಎತ್ತುವವರು ಇಲ್ಲದೇ ಸರ್ಕಾರದ ಸೌಲಭ್ಯಗಳಿಂದ ವಂಚಿರಾಗಿದ್ದೇವೆ ಎಂದು ರಾಣಿಬೆನ್ನೂರು ತುಮ್ಮಿನಕಟ್ಟೆ ಪದ್ಮಶಾಲಿ ಗುರುಮಠದ ಶ್ರೀ ಪ್ರಭುಲಿಂಗ ಸ್ವಾಮೀಜಿ ತಿಳಿಸಿದರು.

ನಗರದ ಕ್ರೀಡಾ ಭವನದಲ್ಲಿ ಭಾನುವಾರ ಕಲಾ ನೇಕಾರ ಸಂಸ್ಥೆಯ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮದು ಹಿಂದುಳಿದ ಸಮಾಜ. ನಮ್ಮ ಪರವಾಗಿ ಮಾತನಾಡುವವರು ಇಲ್ಲ. ನಮ್ಮಲ್ಲಿ ಜನಸಂಖ್ಯೆ ಹೆಚ್ಚಾಗಿ ಇದ್ದರು ಸಹ ಒಗ್ಗಟು ಇಲ್ಲದೆ ಸರ್ಕಾರದ ಸೌಲಭ್ಯ ಪಡೆಯುವಲ್ಲಿ ಹಿಂದೆ ಬಿದ್ದಿದ್ದೇವೆ. ನಮ್ಮ ಪರವಾಗಿ ವಿಧಾನಸೌಧದಲ್ಲಿ ಧ್ವನಿಯನ್ನು ಎತ್ತುವವರು ಇಲ್ಲವಾಗಿದ್ದಾರೆ. ಇದರಿಂದಾಗಿ ನಮ್ಮ ಸಮಾಜದವರು ಹಿಂದೆ ಉಳಿದಿದ್ದಾರೆ. ರಾಜಕೀಯ ಶಕ್ತಿ ಇಲ್ಲವಾದರೆ ಏನು ಪಡೆಯಲು ಸಾಧ್ಯವಿಲ್ಲ ಎಂಬುದು ಈಗ ತಿಳಿಯುತ್ತಿದೆ ಎಂದ ಶ್ರೀಗಳು, ಸರ್ಕಾರವು ಸಹಾ ನಮ್ಮನ್ನು ಕಡೆಗಣಿಸುತ್ತಿದೆ. ಬೇರೆಯವರಿಗೆ ನೀಡಿದ ಸಹಾಯವನ್ನು ನಮ್ಮ ಸಮಾಜಕ್ಕಾಗಲಿ, ಶ್ರೀಮಠಕ್ಕೆ ಆಗಲಿ ನೀಡಿಲ್ಲ. ಈ ಸಾಲಿನ ಆಯವ್ಯಯದಲ್ಲಿ ನೇಕಾರ ಸಮಾಜಕ್ಕೆ ಯಾವ ಸಹಾಯವನ್ನು ಮುಖ್ಯಮಂತ್ರಿಗಳು ಮಾಡಿಲ್ಲ. ಇದರ ಬಗ್ಗೆ ಅತಿ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುವುದು ಎಂದರು.

ಇತ್ತೀಚಿನ ದಿನಗಳಲ್ಲಿ ವಿವಿಧ ಸಮಾಜದವರು ತಮ್ಮ ಸಮಾಜದ ಮೀಸಲಾತಿಗಾಗಿ ಪಾದಯಾತ್ರೆ ಮಾಡಿದ್ದಾರೆ. ನಮ್ಮ ಸಮಾಜವೂ ಸಹ ಸರ್ಕಾರದ ವಿವಿಧ ರೀತಿಯ ಸೌಲಭ್ಯ ಪಡೆಯುವುದಕ್ಕಾಗಿ ಬಾಗಲಕೋಟೆಯಿಂದ ಪಾದಯಾತ್ರೆ ಪ್ರಾರಂಭಿಸುವ ಬಗ್ಗೆ ಆಲೋಚನೆ ಮಾಡುತ್ತಿದೆ ಎಂದು ತಿಳಿಸಿದ ಶ್ರೀ ಪ್ರಭುಲಿಂಗ ಸ್ವಾಮಿಗಳು, ಸರ್ಕಾರ ಅಧಿಕಾರಕ್ಕೆ ಬರುವಾಗ ಮುಖ್ಯಮಂತ್ರಿಗಳು ನೇಕಾರ ಮತ್ತು ರೈತ ಎರಡು ಕಣ್ಣುಗಳಿದ್ದಂತೆ ಎಂದು ಯಡಿಯೂರಪ್ಪ ಹೇಳಿದ್ದರು. ಆದರೆ ಅಧಿಕಾರ ಬಂದ ಮೇಲೆ ನಮ್ಮನ್ನು ಮರೆತ್ತಿದ್ದಾರೆ. ಇವರನ್ನು ಎಚ್ಚರಿಸುವ ಕಾರ್ಯವನ್ನು ಸಮಾಜದ ವತಿಯಿಂದ ಮಾಡಬೇಕಿದೆ ಎಂದು ಹೇಳಿದರು. ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು.

ಚಿತ್ರ ಸಾಹಿತಿ ಡಾ.ವಿ. ನಾಗೇಂದ್ರ ಪ್ರಸಾದ್‌ ಅಧ್ಯಕ್ಷತೆ ವಹಿಸಿದ್ದರು. ಕಲಾ ನೇಕಾರ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ.ಎನ್‌. ನಾಗೇಶ್‌ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಪ್ರಾಕಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೇಕಾರ ಕಲಾವಿದರು, ಜಿಲ್ಲೆಯಲ್ಲಿ ನಗರಸಭೆ, ಪುರಸಭೆಗೆ ಮತ್ತು ಗ್ರಾಪಂಗೆ ಆಯ್ಕೆಯಾದ ಜನಪ್ರತಿನಿಧಿಗಳನ್ನು ಅಭಿನಂದಿಸಿದ್ದು, ಜಿಲ್ಲೆಯ ನೇಕಾರ ಸಮುದಾಯಗಳ ಅಧ್ಯಕ್ಷರು ಹಾಗೂ ಮುಖಂಡರನ್ನು ಗೌರವಿಸಲಾಯಿತು. ಕೋಲಂನಳ್ಳಿ ಪೀತಾಂಬರ ರಾಘವೇಂದ್ರ, ಪದ್ಮಶಾಲಿ ಕಾಚಾಪುರ, ರಂಗಪ್ಪ ಪಟ್ಟಸಾನಿ, ಸಮಾಜದ ಮುಖಂಡರಾದ ಎಸ್‌.ಎನ್‌. ಶಿವರುದ್ರಪ್ಪ, ಎಸ್‌. ನರಸಿಂಹಮೂರ್ತಿ, ಪದ್ಮಶಾಲಿ ಸಮಾಜದ ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯ ಪೊರಾಳ್‌ ವೆಂಕಟಸ್ವಾಮಿ, ಎಚ್‌. ರಾಮಸ್ವಾಮಿ ಹಾಗೂ ಪಟ್ಟಸಾಲೆ ಸಮಾಜದ ಎನ್‌.ಟಿ. ತಿಪ್ಪೇಸ್ವಾಮಿ, ಎಸ್‌.ಟಿ. ಮಹಾಂತೇಶ, ಎನ್‌. ಎಂ. ಮಂಜುನಾಥ ಮತ್ತು ಎನ್‌.ಎಂ. ಚನ್ನಬಸಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.