Illegal; ಗಣಿಗಾರಿಕೆ ತನಿಖೆ ವಿಸ್ತರಣೆ: ಈ ವರೆಗೆ 29 ಸಾವಿರ ಕೋಟಿ ರೂ. ಮರಳಿ ವಸೂಲಿ
ಇನ್ನೂ 113 ಗಣಿ ರಫ್ತು ಪ್ರಕರಣಗಳ ವಿಚಾರಣೆ ಬಾಕಿ
Team Udayavani, Oct 11, 2024, 8:00 AM IST
ಬೆಂಗಳೂರು: ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆಯ ತನಿಖಾ ತಂಡದ ಅವಧಿಯನ್ನು ಇನ್ನೂ 1 ವರ್ಷ ವಿಸ್ತರಿಸಲು ಸಂಪುಟ ಸಭೆ ತೀರ್ಮಾನಿಸಿದೆ.
ಇನ್ನೂ 113 ಗಣಿ ರಫ್ತು ಪ್ರಕರಣಗಳ ವಿಚಾರಣೆ ಬಾಕಿ ಇದೆ. 6 ಪ್ರಕರಣಗಳು ತನಿಖಾ ಹಂತದಲ್ಲಿದ್ದರೆ, 8 ಪ್ರಕರಣಗಳಲ್ಲಿ ಸಿಆರ್‌ಪಿಸಿ 173 (8) ತನಿಖೆ ಮಾಡಬೇಕಿದೆ. ಎರಡು ಪ್ರಕರಣಗಳಿಗೆ ಹೈಕೋರ್ಟ್ ತಡೆಯಾಜ್ಞೆ ಇದೆ. ಇನ್ನು ಅದಿರು ಮೌಲ್ಯಮಾಪನ ಸಮಿತಿ ವರದಿ ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದರು.
ತಂಡವು ಕಳೆದ ಒಂದು ದಶಕದಿಂದ ತನಿಖೆ ನಡೆಸು ತ್ತಿದ್ದು, ಇದುವರೆಗೆ ಸುಮಾರು 29 ಸಾವಿರ ಕೋಟಿ ರೂ. “ರಿಕವರಿ’ ಮಾಡುವಲ್ಲಿ ಸರಕಾರ ಯಶಸ್ವಿಯಾಗಿದೆ ಎಂದರು.
ಈ ಮಧ್ಯೆ ಸಂಪುಟ ಸಭೆಯಲ್ಲಿ ಕೈಗೊಂಡಿರುವ ತೀರ್ಮಾನದಂತೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಸೃಜನೆಗೊಂಡಿರುವ ವಿಶೇಷ ತನಿಖಾ ತಂಡ ಅವಧಿಯನ್ನು 2024 ಜುಲೈ 1ರಿಂದಲೇ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ವಿಸ್ತರಿಸಿ ಆದೇಶವನ್ನು ಕೂಡ ಹೊರಡಿಸಿದೆ.
ಕಾನೂನು ಆಯೋಗಕ್ಕೆ ಪದಾಧಿಕಾರಿಗಳ ನೇಮಕ ರಾಜ್ಯ ಕಾನೂನು ಆಯೋಗದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಗಕ್ಕೆ ಶೀಘ್ರ ಹೊಸ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲಾಗುವುದು ಎಂದು ಎಚ್.ಕೆ. ಪಾಟೀಲ್ ತಿಳಿಸಿದರು. ಈ ಸಂಬಂಧದ ಅಧಿಕಾರವನ್ನು ಸಂಪೂರ್ಣವಾಗಿ ಮುಖ್ಯಮಂತ್ರಿಗೆ ನೀಡಲಾಗಿದೆ. ಆದಷ್ಟು ಬೇಗ ಆಯೋಗಕ್ಕೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲಿದ್ದಾರೆ ಎಂದರು.
ಅಂಗನವಾಡಿ ಕಾರ್ಯಕರ್ತೆಯರ
ಸಮವಸ್ತ್ರಕ್ಕೆ 13.75 ಕೋಟಿ ರೂ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಿಸಲು ರಾಜ್ಯ ಸಚಿವ ಸಂಪುಟ 13.75 ಕೋಟಿ ರೂ. ನೀಡಲು ಗುರುವಾರ ನಡೆದ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ ಸುಮಾರು 1.35 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮವಸ್ತ್ರ ಲಭಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.