ಅಕ್ರಮ ಅದಿರು ಸಾಗಾಟ: ಅನಿಲ್ ಲಾಡ್ ಅರ್ಜಿ ವಜಾ
Team Udayavani, Sep 28, 2019, 3:00 AM IST
ಬೆಂಗಳೂರು: ಪರವಾನಗಿ ಇಲ್ಲದೆ ಬೇಲೆಕೇರಿ ಬಂದರಿನಿಂದ 50 ಸಾವಿರ ಮೆಟ್ರಿಕ್ ಟನ್ ಕಬ್ಬಿಣದ ಅದಿರು ರಫ್ತು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಪ್ರಕರಣ ರದ್ದುಗೊಳಿಸಬೇಕೆಂದು ಕೋರಿ ಮಾಜಿ ಸಚಿವ ಅನಿಲ್ ಲಾಡ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣ ರದ್ದುಕೋರಿ ಅನಿಲ್ ಲಾಡ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪುನ್ನು ಶುಕ್ರವಾರ ಪ್ರಕಟಿಸಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್ ವಾದ ಮಂಡಿಸಿ, ಅರ್ಜಿದಾರ ಅನಿಲ್‌ಲಾಡ್ ಇತರ ಆರೋಪಿಗಳ ಜತೆ ಸೇರಿ 2008ರ ಜ.1ರಿಂದ 2010ರ ಮೇ 31ರವರೆಗೆ 14,342.530 ಮೆಟ್ರಿಕ್ ಟನ್ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ಅಂದಾಜು 25 ಕೋಟಿ ರೂ.ಗಳನ್ನು ನಷ್ಟ ಮಾಡಿದ್ದಾರೆ. ಹಾಗಾಗಿ, ಪ್ರಕರಣ ರದ್ದುಗೊಳಿಸಬಾರದೆಂದು ಮನವಿ ಮಾಡಿದ್ದರು. ಇದನ್ನು ನ್ಯಾಯಾಲಯ ಮಾನ್ಯ ಮಾಡಿದೆ.
ಪ್ರಕರಣವೇನು?: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ, 2012ರ ಸೆ.13ರಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾಜ್‌ಶೀಟ್ ಸಲ್ಲಿಸಿತ್ತು. ಪ್ರಕರಣದಲ್ಲಿ ಅನಿಲ್ ಲಾಡ್ ಗಣಿ ಉದ್ಯಮಿ ಜನಾರ್ದನ ರೆಡ್ಡಿ, ಸತೀಶ್ ಸೈಲ್, ಅಂದಿನ ಅರಣ್ಯಾಧಿಕಾರಿ ಎನ್.ಕೆ.ಶುಕ್ಲಾ, ಖಾರದಪುಡಿ ಮಹೇಶ್, ಸ್ವಸ್ತಿಕ್ ನಾಗರಾಜ್ ಸೇರಿ 50 ಕ್ಕೂ ಹೆಚ್ಚು ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.