ಅಕ್ರಮ ಹಿನ್ನಲೆ : 54,289 ಪಿಎಸ್ ಐ ಅಭ್ಯರ್ಥಿಗಳಿಗೆ ಮರು ಪರೀಕ್ಷೆಯ ಶಾಕ್!
ಆರೋಪಿಗಳು ಬಿಟ್ಟು ಉಳಿದೆಲ್ಲವರಿಗೂ ಮರು ಪರೀಕ್ಷೆ ; ವ್ಯಾಪಕ ಆಕ್ರೋಶ
Team Udayavani, Apr 29, 2022, 12:21 PM IST
ಬೆಂಗಳೂರು : ಪ್ರಸಕ್ತ ಸಾಲಿನ ಪಿಎಸ್ ಐ ಪರೀಕ್ಷೆಯಲ್ಲಿ ಭಾರೀ ಅಕ್ರಮ ಬೆಳಕಿಗೆ ಬಂದಿರುವ ಹಿನ್ನಲೆಯಲ್ಲಿ 54,289 ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಸರಕಾರ ತೀರ್ಮಾನ ಕೈಗೊಂಡಿದೆ. ಈ ಬಗ್ಗೆ ಪರೀಕ್ಷಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.
ಪರೀಕ್ಷಾ ಅಕ್ರಮದಲ್ಲಿ ಸಿಕ್ಕಿ ಬಿದ್ದಿರುವ ಆರೋಪಿಗಳು ಬಿಟ್ಟು ಉಳಿದೆಲ್ಲವರಿಗೂ ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.
545 ಪಿಎಸ್ ಐ ಹುದ್ದೆಗೆ ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಶೀಘ್ರ ಮರು ಪರೀಕ್ಷೆ ದಿನಾಂಕ ಪ್ರಕಟ ಮಾಡಾಲಾಗುವುದು ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ
ಸರಕಾರದ ನಿರ್ಧಾರಕ್ಕೆ ಪರೀಕ್ಷೆ ಬರೆದ ಹಲವರು ಆಕ್ರೋಶ ಹೊರ ಹಾಕಿದ್ದು, ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಪಿಎಸ್ಐ ಪರೀಕ್ಷೆ ಅಕ್ರಮ: ಕೊನೆಗೂ ಸಿಐಡಿ ಬಲೆಗೆ ಬಿದ್ದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ
ಈಗಾಗಲೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಹಲವು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಸಿಐಡಿ ತನಿಖೆ ಚುರುಕು ಗೊಳಿಸಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.