IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ
Team Udayavani, May 3, 2024, 6:42 AM IST
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಮುಂದುವರಿದಿದ್ದು, ಬೆಂಗಳೂರು, ಬೀದರ್ ಸಹಿತ 19 ಜಿಲ್ಲೆಗಳಿಗೆ ಮೇ 3ರಂದು ಬಿಸಿ ಗಾಳಿ ಮುನ್ಸೂಚನೆ ನೀಡಲಾಗಿದೆ. ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಮೇ 5ರ ವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಜನಸಾಮಾನ್ಯರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಮೇ 5, 6ರಂದು ರಾಜ್ಯದ ವಿವಿಧೆಡೆ ಮಳೆ
ರಾಜ್ಯದ ವಿವಿಧೆಡೆ ಗುರುವಾರ ಮಳೆಯಾಗಿದ್ದು, ಜೂನ್ ಮೊದಲ ವಾರದ ಬಳಿಕವೇ ಹೆಚ್ಚಿನ ಮಳೆ ನಿರೀಕ್ಷಿಸಬಹುದಾಗಿದೆ. ಅಲ್ಲಿವರೆಗೆ ತುಂತುರು ಮಳೆಯಷ್ಟೆ ಬೀಳಲಿದೆ. ಮೇ 5ರಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಮೇ 7ರಂದು ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಕೆಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳವರೆಗೆ ಹಗುರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಳೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಳೆಯಾಗಿದೆ. ಕಳೆದ 6 ತಿಂಗಳಿನಿಂದ ತಾಪಮಾನದಿಂದ ಬೆಂಗಳೂರು ಬೆಂದ ಕಾಳೂರಾಗಿ ಮಾರ್ಪಟ್ಟಿತ್ತು. ಬೆಂಗಳೂರಿಗರು ಉಷ್ಣಾಂಶದ ತೀವ್ರ ತೆಗೆ ಕಂಗೆಟ್ಟು ಹೋಗಿದ್ದರು. ಗುರುವಾರ ಸುರಿದ ಮಳೆಯಿಂದ ಬಿಸಿಲಿನ ಬೇಗೆಯಿಂದ ಬಳಲಿದವರು ಖುಷಿಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.