ಶೇ.75.38 ಮಕ್ಕಳಲ್ಲಿ ಲಸಿಕೆ ಪಡೆಯದೇ ರೋಗ ನಿರೋಧಕ ಶಕ್ತಿ ಹೆಚ್ಚಳ
Team Udayavani, Sep 9, 2022, 8:00 AM IST
ಬೆಂಗಳೂರು: ರಾಜ್ಯದಲ್ಲಿ 6ರಿಂದ 14 ವರ್ಷದ 5,358 ಮಕ್ಕಳಲ್ಲಿ ನಡೆಸಿರುವ ಕೋವಿಡ್ ಸಿರೋ ಸಮೀಕ್ಷೆಯಲ್ಲಿ ಶೇ.75.38 ಮಕ್ಕಳಿಗೆ ಕೋವಿಡ್ ಸೋಂಕು ತಗಲಿ ಹೋಗಿದ್ದು, ಲಸಿಕೆ ಪಡೆಯದಿದ್ದರೂ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುವ ಅಂಶಗಳು ಪತ್ತೆಯಾಗಿವೆ.
ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸಿನ ಮೇರೆಗೆ ಜೂನ್ ತಿಂಗಳಿನಲ್ಲಿ ಆರೋಗ್ಯ ಇಲಾಖೆಯು ಲಸಿಕೆ ಪಡೆಯದ 5,358 ಮಕ್ಕಳಲ್ಲಿ ಕೋವಿಡ್ ಸಿರೋ ಸಮೀಕ್ಷೆ ನಡೆಸಿತ್ತು. 6 -14 ವರ್ಷ, 9 – 11 ವರ್ಷ ಹಾಗೂ 12 -14 ವರ್ಷ ಎಂದು ಮೂರು ಗುಂಪುಗಳಾಗಿ ಮಾಡಿ, ಭೌಗೋಳಿಕವಾಗಿಯೂ ನಗರ ಪ್ರದೇಶ, ಕೊಳಚೆ ಪ್ರದೇಶ ಮತ್ತು ಗ್ರಾಮೀಣ ಪ್ರದೇಶ ಎಂದು ವಿಂಗಡಿಸಿ ಅಧ್ಯಯನ ನಡೆಸಲಾಯಿತು.
6 – 8 ವರ್ಷ (ಶೇ.68.52), 9 – 11ವರ್ಷ (ಶೇ.79.07) ಹಾಗೂ 12 – 14 ವರ್ಷ (ಶೇ.77.83) ಸೋಂಕಿನಿಂದ ರೋಗ ನಿರೋಧಕ ಶಕ್ತಿ ಹೊಂದಿರುವುದು ಸಿರೋ ಸಮೀಕ್ಷೆಯಲ್ಲಿ ತಿಳಿದು ಬಂದಿದೆ. ಈ ಪೈಕಿ ಬಾಲಕಿಯರಲ್ಲಿ (ಶೇ.77.83), ಬಾಲಕರಲ್ಲಿ (ಶೇ.73.02), ನಗರ ಪ್ರದೇಶ (ಶೇ.77.96), ಗ್ರಾಮೀಣ ಪ್ರದೇಶ (ಶೇ.71.98), ಕೊಳಚೆ ಪ್ರದೇಶ (ಶೇ.77.02) ಮಕ್ಕಳಲ್ಲಿ ಸೋಂಕಿನಿಂದ ರೋಗ ನಿರೋಧಕ ಶಕ್ತಿ ವೃದ್ದಿಯಾಗಿದೆ.
ಚಿಕ್ಕಮಗಳೂರು ಶೇ.100 ರಷ್ಟು ಪ್ರತಿಕಾಯ ಹೊಂದಿರುವ ಜಿಲ್ಲೆಯಾಗಿದೆ. ಉಳಿದಂತೆ ಬಾಗಲಕೋಟೆ ಶೇ. 91.12, ಉತ್ತರ ಕನ್ನಡ ಶೇ. 89.61, ಗದಗ ಶೇ. 88.62, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶೆ. 86.88.ಅತೀ ಹೆಚ್ಚು ಪ್ರತಿಕಾಯ ಹೊಂದಿರುವ ಜಿಲ್ಲೆಗಳಾಗಿವೆ. ಕಲಬುರಗಿ ಶೇ. 43.24, ಯಾದಗಿರಿ ಶೇ. 48.20, ಉಡುಪಿ ಶೇ. 52.31, ಹಾವೇರಿ ಶೇ. 59.47 ಹಾಗೂ ರಾಮನಗರ ಶೇ. 62.72. ಕಡಿಮೆ ಪ್ರತಿಕಾಯ ಹೊಂದಿರುವ ಜಿಲ್ಲೆಗಳಾಗಿವೆ ಎಂಬುದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.