ಪರಿಣಾಮಕಾರಿ ಎಸ್.ಒ.ಪಿ ಅನುಷ್ಠಾನ ಮತ್ತು ಐ.ಇ.ಸಿ ಮೂಲ️ಕ ಕೋವಿಡ್ ನಿಯಂತ್ರಿಸಿ- ಮುಖ್ಯಮಂತ್ರಿ

Team Udayavani, Oct 14, 2020, 7:38 PM IST

ಪರಿಣಾಮಕಾರಿ ಎಸ್.ಒ.ಪಿ ಅನುಷ್ಥಾನ ಮತ್ತು ಐ.ಇ.ಸಿ ಮೂಲ️ಕ ಕೋವಿಡ್ ನಿಯಂತ್ರಿಸಿ- ಮುಖ್ಯಮಂತ್ರಿ

ಬೆಂಗಳೂರು: ಪ್ರಮಾಣೀಕೃತ ಕಾರ್ಯಾಚರಣೆ ವಿಧಾನಗಳ (ಎಸ್.ಒ.ಪಿ) ಪರಿಣಾಮಕಾರಿ ಜಾರಿ ಮತ್ತು ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳನ್ನು ವ್ಯಾಪಕಗೊಳಿಸುವ ಮೂಲ️ಕ ಕೋವಿಡ್ 19 ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ️.ಎಸ್.ಯಡಿಯೂರಪ್ಪ ಹೇಳಿದರು.

ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಲ️ಯವಾರು ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ವೀಡಿಯೋ ಸಂವಾದವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಬೆಂಗಳೂರಿನಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೊಡಿಸಲು ಮಧ್ಯವರ್ತಿಗಳು ಹಣ ಪಡೆಯುತ್ತಿರುವ ಬಗ್ಗೆ ಹಾಗೂ ಮನೆ ಆರೈಕೆಯಲ್ಲಿದ್ದು ಶುಶ್ರೂಷೆ ಪಡೆಯುತ್ತಿರುವುವರ ಹೆಸರಲ್ಲಿ ಆಸ್ಪತ್ರೆಯಲ್ಲಿರುವುದಾಗಿ ಸುಳ್ಳು ಬಿ️ಲ್ಲುಗಳನ್ನು ಸಲ್ಲಿಸುತ್ತಿರುವ ಬಗ್ಗೆಯೂ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ನಿಗಾ ವಹಿಸಿ ತಕ್ಷಣವೇ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಹೋಮ್ ಐಸೊಲೇಷನ್‍ನಲ್ಲಿ ಇರುವವರ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದರ ಮೂಲ️ಕ ಟೆಲಿಮಾನಿಟರಿಂಗ್ ಮೂಲ️ಕ ನಿರಂತರ ನಿಗಾ ವಹಿಸುವುದು ಅತಿ ಮುಖ್ಯ. ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಗಳನ್ನು ಕಡಿಮೆ ಮಾಡಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗಳನ್ನು ಮಾಡಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ. ಇದಕ್ಕೆ ಹೆಚ್ಚಿನ ಒತ್ತು ನೀಡಿ ಎಂದು ಮುಖ್ಯಮಂತ್ರಿಗಳು ಹೇಳಿದರು.

ಬೆಂಗಳೂರು ನಗರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಲು ಪೋಲಿಸರೊಂದಿಗೆ ವಲ️ಯ ಉಸ್ತುವಾರಿ ಅಧಿಕಾರಿಗಳು ಸಮನ್ವಯ ಸಾಧಿಸಿ ಸೂಕ್ತ ಕ್ರಮ ಜರುಗಿಸಬೇಕು. ಹಬ್ಬಗಳು ಪ್ರಾರಂಭವಾಗುತ್ತಿರುವುದರಿಂದ ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.

ಕೋವಿಡ್ 19 ಕುರಿತ ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳನ್ನು ಹೆಚ್ಚು ಮಾಡಬೇಕಾಗಿ ಆರೋಗ್ಯ ಸಚಿವ ಡಾ: ಕೆ.ಸುಧಾಕರ್ ಸೂಚಿಸಿದರು. ಆಸ್ಪತ್ರೆಯಿಂದ ಮನೆಗೆ ಮರಳುವವರಲ್ಲಿ ಪುನ: ಸೋಂಕು ಕಾಣಿಸಿಕೊಂಡಿರುವ ಪ್ರಕರಣಗಳೂ ಇರುವುದರಿಂದ ಅವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕಾಗಿದೆ ಎಂದು ತಿಳಿಸಿದರು.

ವಲ️ಯವಾರು ಆರ್ ಟಿಪಿಸಿಆರ್ ಪರೀಕ್ಷಾ ವರದಿ, ಮಾಸ್ಕ್ ಧರಿಸುವಿಕೆ ವರದಿಯನ್ನು ಪರಿಶೀಲಿಸಿದರಲ️್ಲದೆ, ಹೋಮ್ ಐಸೊಲೇಷನ್ ಬಗ್ಗೆ ಹೆಚ್ಚಿನ ನಿಗಾ ವಹಿಸಲು ಹಾಗೂ ಸಂಪರ್ಕ ಪತ್ತೆಗೆ ಒತ್ತು ನೀಡಲು ಸೂಚನೆ ನೀಡಿದರು.
ಸೋಂಕಿತರ ವಿಳಾಸಗಳು ತಪ್ಪಾಗಿರುವುದು ಮತ್ತು ಮೊಬೈಲ್ ಸಂಖ್ಯೆಗಳು ಸ್ವಿಚ್ ಆಫ್ ಆಗಿರುವುದರಿಂದ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚುವುದು ಕಷ್ಟಕರವಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಸಕ್ರಿಯ ಪ್ರಕರಣಗಳಿಗಿಂತ ಗುಣಮುಖರಾಗಿರುವವರ ಸಂಖ್ಯೆ ಹೆಚ್ಚಿದೆ. ನಗರದಲ್ಲಿ ಈವರೆಗೆ 20 ಲ️ಕ್ಷದ ಮೇಲೆ ತಪಾಸಣೆಗಳಾಗಿವೆ. ಪ್ರತಿ ದಿನ ಸರಿಸುಮಾರು 47 ಸಾವಿರ ತಪಾಸಣೆಗಳಾಗುತ್ತಿದೆ. ವಲ️ಯವಾರು – ಸಾವಿನ ಪ್ರಮಾಣ ನಾಲ್ಕೂ ವಲ️ಯಗಳಲ್ಲಿ ಕಡಿಮೆಯಾಗುತ್ತಿದ್ದು, ನಿಗದಿತ ಗುರಿಗಿಂತ ಹೆಚ್ಚಿನ ತಪಾಸಣೆ ಮಾಡಲಾಗುತ್ತಿದೆ ಎಂದು ಬಿ️.ಬಿ️.ಎಂ.ಪಿ ಆಯುಕ್ತರು ಸಭೆಗೆ ತಿಳಿಸಿದರು.

ಆರ್.ಆರ್.ನಗರದಲ್ಲಿ ಪ್ರತಿ ಸೋಂಕಿತ ವ್ಯಕ್ತಿಗೆ ಕನಿಷ್ಠ 10 ಸಂಪರ್ಕ ಪತ್ತೆಯನ್ನು ಮಾಡಲಾಗುತ್ತಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸಲಾಗಿದೆ. ಉಪಚುನಾವಣೆ ಇರುವುದರಿಂದ ಸಾಮಾಜಿಕ ಅಂತರವನ್ನು ಕಾಪಾಡಲ️ು ಪ್ರತ್ಯೇಕ ಎಸ್.ಒ.ಪಿ ಯನ್ನು ರೂಪಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವರು ಅಭಿಪ್ರಾಯಪಟ್ಟರು. 525 ಐ.ಸಿ.ಯು ಬೆಡ್‍ಗಳು ನಗರದ ಆಸ್ಪತ್ರೆಗಳಲ್ಲಿ ಲ️ಭ್ಯವಿದೆ. ವೆಂಟಿಲೇಟರ್‍ಗಳು ಹಾಗೂ ಐ.ಸಿ.ಯು ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸಬೇಕಿದೆ ಎಂದರು.

ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಷಿಜನ್ ಘಟಕಗಳ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದ್ದು, ಬೆಡ್ ಆಕ್ಯುಪೆನ್ಸಿ ವಿವರಗಳನ್ನು ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ವಿವರಿಸಿದರು ರಾಜ್ಯದ ಒಟ್ಟು ಕೋವಿಡ್ 19 ಪ್ರಕರಣಗಳ ಪೈಕಿ ಅತಿ ಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿವೆ. ನಿರಂತರವಾಗಿ ಈ ನಿಟ್ಟಿನಲ್ಲಿ ಗಮನಹರಿಸುತ್ತಿರುವುದರಿಂದ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಬಿ️ಬಿ️ಎಂಪಿ ಆಯುಕ್ತರು ಹೇಳಿದರು.

ಉಪಮುಖ್ಯಮಂತ್ರಿ ಡಾ: ಸಿ.ಎನ್.ಅಶ್ವತ್ಥ್‍ನಾರಾಯಣ್, ಸಚಿವ ಎಸ್.ಟಿ.ಸೋಮಶೇಖರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ.ರಮಣರೆಡ್ಡಿ, ಬಿ️.ಬಿ️.ಎಂ.ಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.