ಮೇಕೆದಾಟು ಯೋಜನೆ ಅನುಷ್ಠಾನ: ತ.ನಾ. ನಿರ್ಣಯಕ್ಕೆ ಬೆಲೆ ಇಲ್ಲ: ಸಿದ್ದರಾಮಯ್ಯ
Team Udayavani, Mar 22, 2022, 6:50 AM IST
ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನ ವಿಚಾರದಲ್ಲಿ ತಮಿಳುನಾಡು ವಿಧಾನಸಭೆ ಕೈಗೊಂಡಿರುವ ನಿರ್ಣಯ ಒಪ್ಪಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ತಮಿಳುನಾಡು ತಕರಾರಿಗೆ ನಾವು ಬೆಲೆ ಕೊಡುವ ಆವಶ್ಯಕತೆ ಇಲ್ಲ. ಸುಪ್ರೀಂಕೋರ್ಟ್ ತೀರ್ಪು ಪ್ರಕಾರ ನಮ್ಮ ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು. ವಿಳಂಬ ಮಾಡುತ್ತ ಹೋದರೆ ಖ್ಯಾತೆ ಹೆಚ್ಚಾಗುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿ 2018ರಲ್ಲಿ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದೆ. ಒಂದು ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ತಮಿಳುನಾಡಿಗೆ ಬಿಡುವಂತೆ ಆದೇಶ ಮಾಡಿದೆ. ಇದರ ನಿರ್ವಹಣೆಗೆ ಕಾವೇರಿ ನೀರು ನಿರ್ವಹಣ ಪ್ರಾಧಿಕಾರ ಅಸ್ತಿತ್ವದಲ್ಲಿದೆ. ಇಷ್ಟು ಪ್ರಮಾಣದ ನೀರು ಪಡೆಯುವುದು ಮಾತ್ರ ತಮಿಳುನಾಡಿಗಿರುವ ಹಕ್ಕು. ಈ ತೀರ್ಪು ಬಂದ ಮೇಲೆ ಸುಮಾರು 400 ಟಿಎಂಸಿಗೂ ಅಧಿಕ ನೀರು ಹೆಚ್ಚುವರಿಯಾಗಿ ತಮಿಳುನಾಡಿಗೆ ಹರಿದು ಹೋಗಿದೆ. ಹಾಗಾಗಿ ಕೇಂದ್ರ ಸರಕಾರ ಕೂಡಲೇ ಪರಿಸರ ಅನುಮತಿ ಕೊಡಬೇಕು. ಇದು ನಮ್ಮ ಪಾಲಿನ ನೀರು, ವ್ಯರ್ಥವಾಗಿ ತಮಿಳುನಾಡಿಗೆ ಹೋಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರಿಶೀಲನೆಗೆ ತಜ್ಞರ ಸಮಿತಿ: ಬಿ.ಸಿ. ನಾಗೇಶ್
ತಮಿಳುನಾಡು ಮತ್ತು ಕರ್ನಾಟಕದ ನಡುವೆ ವಿವಾದವೇ ಇಲ್ಲ. ಈ ವಿಚಾರ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಇತ್ಯರ್ಥವಾಗಿದೆ. ಕೇಂದ್ರ ಸರಕಾರ ಇಚ್ಛಾಶಕ್ತಿ ಮತ್ತು ಒಕ್ಕೂಟ ಧರ್ಮದ ಪಾಲನೆ ಮಾಡಬೇಕು. ಬಹಳ ಹಿಂದೆಯೇ ಪರಿಸರ ಅನುಮತಿ ಕೊಡಬೇಕಿತ್ತು, ಕೂಡಲೇ ಈ ಕೆಲಸ ಮಾಡಿ ಎಂದು ಮುಖ್ಯಮಂತ್ರಿಗಳು ನಡೆಸಿದ ಸರ್ವ ಪಕ್ಷ ಸಭೆಯಲ್ಲಿ ಹೇಳಿದ್ದೇವೆ, ಅವರು ಕೂಡ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.