ಕಲ್ಯಾಣ ಕರ್ನಾಟಕದಲ್ಲಿ ನಂಜುಂಡಪ್ಪ ವರದಿ ಜಾರಿ: ಅರ್ಜಿ ವಜಾಗೊಳಿಸಿದ ಹೈಕೋರ್ಟ್
Team Udayavani, Jun 13, 2024, 10:06 PM IST
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಡಾ.ಡಿ.ಎಂ. ನಂಜುಂಡಪ್ಪ ವರದಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ವಿಚಾರವಾಗಿ ಬೀದರ್ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಗುರುನಾಥ ವದ್ದೆ 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸರ್ಕಾರದ ಪರ ವಕೀಲರು, ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ರಾಜ್ಯದಲ್ಲಿ ಈಗಾಗಲೇ ಡಾ. ಡಿ.ಎಂ. ನಂಜುಡಪ್ಪ ವರದಿ ಜಾರಿಯಲ್ಲಿದೆ. 2007-08ರಿಂದ ಈ ವರದಿ ಅನುಷ್ಠಾನಕ್ಕೆ ತರಲಾಗುತ್ತಿದ್ದು, ಪ್ರತಿ ವರ್ಷ ಬಜೆಟ್ನಲ್ಲಿ ಹಣ ಮೀಸಲಿಡಲಾಗುತ್ತದೆ. ಅಲ್ಲದೇ ಇಂತಹದ್ದೆ ಅರ್ಜಿಯನ್ನು 20214ರಲ್ಲಿ ಸಲ್ಲಿಸಲಾಗಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಸರ್ಕಾರದ ಪರ ವಕೀಲರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ವರದಿಯ ಶಿಫಾರಸುಗಳು ಈಗಾಗಲೇ ಜಾರಿಯಲ್ಲಿವೆ ಮತ್ತು 2014ರಲ್ಲಿ ಇಂಥದ್ದೆ ಅರ್ಜಿ ಸಲ್ಲಿಕೆಯಾಗಿತ್ತು. ಇದು ಗೊತ್ತಿದ್ದೂ ಅನಗತ್ಯವಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.