Janatha Darshan ಜನಸ್ಪಂದನ ಮಹತ್ವದ ಹೆಜ್ಜೆ: ಡಿಸಿಎಂ ಡಿ.ಕೆ.ಶಿವಕುಮಾರ್‌

Team Udayavani, Nov 27, 2023, 10:10 PM IST

Janatha Darshan ಜನಸ್ಪಂದನ ಮಹತ್ವದ ಹೆಜ್ಜೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಮಹತ್ವದ ಹೆಜ್ಜೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಣ್ಣಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ ನಿಂತ ನೀರಿನಂತಾಗಿ ಆಡಳಿತ ಯಂತ್ರ ಜಡ್ಡುಗಟ್ಟಿತ್ತು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಚುರುಕು ನೀಡಲಾಗಿದೆ. ಹಿಂದಿನ ಬಿಜೆಪಿ ಸರಕಾರದ ದುರಾಡಳಿತದಿಂದ ಜನರು ತತ್ತರಿಸಿ ಹೋಗಿದ್ದರು. ಅವರ ಸಮಸ್ಯೆಗಳಿಗೆ ಪರಿಹಾರ ಸಿಗದೆ ಹೈರಾಣಾಗಿದ್ದರು. ಈಗ ಆ ಪರಿಸ್ಥಿತಿ ಬದಲಾಗಿದೆ. ಅದರ ಮುಂದಿನ ಹೆಜ್ಜೆಯಾಗಿ ಜನ ಸ್ಪಂದನ ಕಾರ್ಯಕ್ರಮವು ಆಡಳಿತದಲ್ಲಿ ಬಹು ದೊಡ್ಡ ಬದಲಾವಣೆಗೆ ಕಾರಣವಾಗಲಿದೆ ಎಂದಿದ್ದಾರೆ.

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನಸ್ಪಂದನ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಕಂಡಿದೆ. ಸಮಸ್ಯೆಯನ್ನು ಹೊತ್ತು ಬಂದಿದ್ದ ನೂರಾರು ಜನರಿಗೆ ಸ್ಥಳದಲ್ಲೇ ಪರಿಹಾರ ಸಿಕ್ಕಿದೆ. ಉಳಿದ ಸಮಸ್ಯೆಗಳನ್ನು ಆಯಾ ಇಲಾಖೆ ಮುಖ್ಯಸ್ಥರು ಕಾಲಮಿತಿಯಲ್ಲಿ ಬಗೆಹರಿಸಿ ವಾಸ್ತವ ಸಂಗತಿಯನ್ನು ಅರ್ಜಿದಾರರಿಗೆ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ಎಲ್ಲ ಸಚಿವರು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಚುನಾವಣ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಜನರ ಮನೆ ಬಾಗಿಲಿಗೆ ಆಡಳಿತ ಎಂಬ ಮಾತನ್ನು ಈಡೇರಿಸಿದ ಸಂತೃಪ್ತ ಭಾವ ತಮಗಿದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಆಡಳಿತಕ್ಕೆ ವೇಗ ನೀಡಿ ಸರಕಾರದ ಎಲ್ಲ ಯೋಜನೆಗಳ ಲಾಭ ನೂರಕ್ಕೆ ನೂರರಷ್ಟು ಫ‌ಲಾನುಭವಿಗಳಿಗೆ ತಲುಪಿಸುವಂತೆ ಎಚ್ಚರ ವಹಿಸಲಾಗುವುದು ಎಂದರು.

ಸರಕಾರದ ಆಶಯಗಳಿಗೆ ತಕ್ಕಂತೆ ನಮ್ಮ ಯೋಜನೆ ಮತ್ತು ಕಾರ್ಯಕ್ರಮಗಳು ಅನುಷ್ಠಾನಗೊಂಡಿವೆಯೇ ಎಂಬುದನ್ನು ತಿಳಿದುಕೊಳ್ಳಲು ಸಮೀಕ್ಷೆ ನಡೆಸುವ ಆಲೋಚನೆಯೂ ಇದೆ. ಈ ಬಗ್ಗೆ ಸಿಎಂ ಅವರ ಜತೆ ಸಮಾಲೋಚನೆ ನಡೆಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಇಂದು ಬಹುದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡ ಜನರಿಗೆ ಇಲಾಖಾವಾರು ಉತ್ತರವನ್ನು ಕಾಲಮಿತಿಯಲ್ಲಿ ನೀಡುವ ಬಗ್ಗೆ ಸಿಎಂ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆಯೂ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಲಾಗುವುದು ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.