ಪ್ರಾಣಿಗಳ ಮೇಲಿನ ದೌರ್ಜನ್ಯಕ್ಕೆ ಜೈಲು ಶಿಕ್ಷೆ: ಎಚ್ಚರಿಕೆ
Team Udayavani, Sep 29, 2022, 1:32 PM IST
ಬೆಂಗಳೂರು: ಪ್ರಾಣಿಗಳ ಮೇಲಿನ ದೌರ್ಜನ್ಯ ಕಂಡುಬಂದಲ್ಲಿ ಜೈಲು ಶಿಕ್ಷೆ ವಿಧಿಸುವುದಾಗಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಎಚ್ಚರಿಕೆ ನೀಡಿದೆ.
ರಾಜ್ಯಾದ್ಯಂತ ಪ್ರಾಣಿಗಳ ಮೇಲೆ ದೌರ್ಜನ್ಯ ಮತ್ತು ಕ್ರೌರ್ಯಗಳು ಹೆಚ್ಚಾಗುತ್ತಿರುವ ಪ್ರಕರಣಗಳು ಸಾಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ವರದಿಯಾಗುತ್ತಿದೆ.
ಬೀದಿ ನಾಯಿಗಳ ಆರೈಕೆದಾರರು, ಪೀಡರ್ಸ್ ಗಳಿಗೆ ಕಿರುಕುಳ ಮತ್ತು ಅನ್ಯಾಯಕ್ಕೆ ಒಳಗಾಗುತ್ತಿರುವ ಬಗ್ಗೆ ವಿವಿಧ ದೂರುಗಳು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ಸ್ವೀಕೃತಗೊಂಡಿವೆ ಪ್ರಾಣಿ ಕಲ್ಯಾಣ ಮಂಡಳಿ ಪ್ರಕಟಣೆ ತಿಳಿಸಿದೆ.
ಇತ್ತೀಚೆಗೆ ಬೆಳಗಾವಿ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಈ ರೀತಿಯ ಪ್ರಕರಣಗಳು ದಾಖಲಾಗಿದೆ. ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1960 ರ ಪ್ರಕಾರ ಪ್ರಾಣಿಗಳಿಗೆ ನೋವು, ಯಾತನೆ, ತೊಂದರೆ/ದೌರ್ಜನ್ಯ ಮಾಡುವುದು ನಿಷಿದ್ಧ. ಭಾರತೀಯ ದಂಡ ಸಂಹಿತೆ ಅನುಚ್ಛೇದ 428 ಮತ್ತು 429 ರ ಪ್ರಕಾರ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಹೇಳಿದೆ.
ಇದನ್ನೂ ಓದಿ:ಟೆಕ್ಕಿ, ಉಪನ್ಯಾಸಕರು ಟು ಸರ್ಕಾರಿ ಉದ್ಯೋಗಿಗಳು…ಇದು ಬಂಧಿತ PFI ಮುಖಂಡರ ಹಿನ್ನೆಲೆ!
ಬೀದಿ ನಾಯಿಗಳನ್ನು ಹೊಡೆಯುವುದು ಓಡಿಸುವುದು, ಎಸೆಯುವುದು ಮತ್ತು ಕೊಲ್ಲುವುದು ಶಿಕ್ಷಾರ್ಹ ಅಪರಾಧ. ಆದರೆ ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ನಿಯಮ 2001 ರನ್ವಯ ಪ್ರಾಣಿ ಸಂತಾನಹರಣ ಚಿಕಿತ್ಸೆಗೆ ಒಳಪಡಿಸಿದ ನಂತರ ಲಸಿಕೆ ನೀಡಿ, ಅವುಗಳ ಮೂಲ ಸ್ಥಾನಕ್ಕೆ ಬಿಡುವುದು. ಬೀದಿ ನಾಯಿಗಳು, ಬಿಡಾಡಿ ದನಗಳಿಗೆ ಆರೈಕೆ ಮಾಡುವುದು, ಆಹಾರ ನೀಡುವುದು ಹಾಗೂ ಕರುಣೆ ತೋರುವುದು ಸಂವಿಧಾನದ ಪ್ರಕಾರ ನಾಗರಿಕರ ಜವಾಬ್ದಾರಿಯಾಗಿರುತ್ತದೆ.
ಪ್ರಾಣಿಗಳ ಮೇಲಿನ ಎಲ್ಲಾ ದೌರ್ಜನ್ಯಗಳನ್ನು ದಾಖಲೆ ಮಾಡಿ, ನಿಯಮಾನುಸಾರ ಕ್ರಮ ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಿರಲು ತಿಳಿಸಿದೆ. ಈ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ಪೊಲೀಸ್ ಕಂಟ್ರೋಲ್ ರೂಂ 112 ಅಥವಾ ಪಶುಸಂಗೋಪನಾ ಸಹಾಯವಾಣಿ ಸಂಖ್ಯೆ 8277100200 ಗೆ ಸಂಪರ್ಕಿಸಬೇಕು ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.