ವಿವಿಧ ಅಕಾಡೆಮಿ, ಪ್ರಾಧಿಕಾರದ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ
Team Udayavani, Jun 13, 2024, 10:40 PM IST
ಬೆಂಗಳೂರು: ಸರಿಸುಮಾರು ಒಂದೂವರೆ ವರ್ಷದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 11 ಅಕಾಡೆಮಿ ಮತ್ತು 2 ಪ್ರಾಧಿಕಾರಗಳ ನೂತನ ಅಧ್ಯಕ್ಷರು ಗುರುವಾರ ಅಧಿಕಾರ ಸ್ವೀಕರಿಸಿದ್ದು, ಕನ್ನಡ ಭವನದಲ್ಲಿ ಈಗ ಕಲರವ ಆರಂಭವಾಗಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಎಲ್.ಎನ್.ಮುಕುಂದರಾಜ್, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾಗಿ ಕೆ.ವಿ.ನಾಗರಾಜ ಮೂರ್ತಿ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಗೊಲ್ಲಹಳ್ಳಿ ಶಿವಪ್ರಸಾದ್, ಬಂಜಾರ ಭಾಷಾ ಸಂಸ್ಕೃತಿ ಅಕಾಡೆಮಿ ಅಧಕ್ಷರಾಗಿ ಡಾ| ಎ.ಆರ್.ಗೋವಿಂದಸ್ವಾಮಿ ಅಧಿಕಾರ ಸ್ವೀಕರಿಸಿದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ತಲ್ಲೂರು ಶಿವರಾಮ ಶೆಟ್ಟಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಮೈಸೂರು ಮಾನಸಾ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ಶುಭಾ ಧನಂಜಯ, ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ ಅಧ್ಯಕ್ಷರಾಗಿ ಎಂ.ಸಿ ರಮೇಶ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ| ಚನ್ನಪ್ಪಕಟ್ಟಿ ಅಧಿಕಾರ ಸ್ವೀಕಾರ ಮಾಡಿದರು.
ಜೂ.19ಕ್ಕೆ ಪ.ಸ.ಕುಮಾರ್ ಅಧಿಕಾರ ಸ್ವೀಕಾರ:
ಕರ್ನಾಟಕ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿ ಡಾ| ಪ.ಸ.ಕುಮಾರ್ ಅವರು ಜೂ.19ಕ್ಕೆ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಗುರುವಾರ ಲಲಿತ ಕಲಾ ಅಕಾಡೆಮಿಗೆ ಭೇಟಿ ನೀಡಿದ ಅವರು ಸಿಬಂದಿ ಜತೆಗೆ ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದರು.
ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಅಧಿಕಾರ ಸ್ವೀಕಾರ:
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯರಾಗಿ ಬೆಳಗಾವಿಯ ಕನ್ನಡ ಪರ ಹೋರಾಟಗಾರ ಅಶೋಕ್ ಚಂದರಗಿ, ಕನ್ನಡಪರ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ, ರಾಯಚೂರಿನ ಭಗತ್ ರಾಜ್, ಕಾಸರಗೋಡಿನ ಎ.ಆರ್. ಸುಬ್ಬಯ್ಯಕಟ್ಟೆ, ಬೀದರ್‌ನ ಡಾ| ಸಂಜೀವ ಕುಮಾರ್ ಅತಿವಾಳೆ, ವಿಜಯಪುರದ ಡಾ| ಎಂ.ಎಸ್. ಮದಬಾವಿ, ಕೊಪ್ಪಳದ ಶಿವರೆಡ್ಡಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.