ಅಕಾಡೆಮಿ ಅಧ್ಯಕ್ಷರ ಪದಗ್ರಹಣಕ್ಕೆ ಜೂ. 13ರ ಮುಹೂರ್ತ ನಿಗದಿ?
ಅಧ್ಯಕ್ಷರಿಲ್ಲದ ಒಂದೂವರೆ ವರ್ಷದ ವನವಾಸ ಅಂತ್ಯ ; ನೀತಿ ಸಂಹಿತೆ ಹಿನ್ನೆಲೆಯಲ್ಲಿ 3 ತಿಂಗಳಿಂದ ಅಧಿಕಾರ ಸ್ವೀಕಾರ ತಡ
Team Udayavani, Jun 8, 2024, 6:18 AM IST
ಬೆಂಗಳೂರು: ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 13 ಅಕಾಡೆಮಿ ಮತ್ತು 2 ಪ್ರಾಧಿಕಾರಗಳಲ್ಲಿ ಈಗ ಕಲರವ ಶುರುವಾಗಿದೆ. ಎರಡು ತಿಂಗಳ ಹಿಂದೆ ನೇಮಕಗೊಂಡಿದ್ದ ಹೊಸ ಅಧ್ಯಕ್ಷರ ಅಧಿಕಾರ ಸ್ವೀಕಾರಕ್ಕೆ ಸಿದ್ಧತೆ ನಡೆದಿದೆ.
ವಿಧಾನ ಪರಿಷತ್ತು ಚುನಾವಣೆ ನೀತಿ ಸಂಹಿತೆ ಪೂರ್ಣಗೊಂಡ ಬಳಿಕ ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರ ಪದಗ್ರಹಣ ನಡೆಯಲಿದೆ. ಆ ನಿಟ್ಟಿನಲ್ಲಿ ಚಟುವಟಿಕೆಗಳು ಕನ್ನಡ ಭವನದಲ್ಲಿ ಸಾಗಿದ್ದು, ಜೂ. 13ರಂದು ಅಧಿಕಾರ ಸ್ವೀಕರಿಸುವ ನಿರೀಕ್ಷೆಯಿದೆ.
ಇದರೊಂದಿಗೆ ಅಧ್ಯಕ್ಷರಿಲ್ಲದೆ ಒಂದೂವರೆ ವರ್ಷದ ವನವಾಸ ಅಂತ್ಯವಾಗಲಿದೆ. ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಅಧಿಕಾರ ಪೂರ್ಣಗೊಳಿಸಿದ ಅಧ್ಯಕ್ಷರು ಮತ್ತು ಸದಸ್ಯರು ರಾಜೀನಾಮೆ ನೀಡಿದ್ದರು. ಆದರೆ ಆ ಬಳಿಕ ಹೊಸ ಅಧ್ಯಕ್ಷರ ನೇಮಕ ಮಾಡುವ ಗೋಜಿಗೆ ಸರಕಾರ ಹೋಗಿರಲಿಲ್ಲ. ಆ ಹಿನ್ನೆಲೆಯಲ್ಲಿ ಸಾಧಕರಿಗೆ ಪ್ರಶಸ್ತಿ ಘೋಷಣೆ ಆಗದೆ ಕಾರ್ಯ ಚಟುವಟಿಕೆಗಳು ಸ್ಥಗಿತವಾಗಿತ್ತು. ಘೋಷಣೆ ಆಗಿದ್ದ ಪ್ರಶಸ್ತಿಯನ್ನು ಸಾಧಕರಿಗೆ ಪ್ರದಾನಿಸದೆ ಇರುವ ಸರಕಾರದ ಕ್ರಮ ಸಾಹಿತ್ಯ ವಲಯದಲ್ಲಿ ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಕೆಲವು ತಿಂಗಳ ಬಳಿಕ ವಿವಿಧ ಪ್ರಾಧಿಕಾರ ಮತ್ತು ಅಕಾಡೆಮಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು.
ಈಗ ಲೋಕಸಭಾ ಚುನಾವಣೆಯ ನೀತಿ ಸಂಹಿತೆಯನ್ನು ಹಿಂಪಡೆಯಲಾಗಿದೆ. ಆದರೆ ಪದವೀಧರ/ಶಿಕ್ಷಕ ಕ್ಷೇತ್ರಗಳ ಚುನಾವಣ ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಜೂನ್ 12ರ ವರೆಗೂ ಅಧಿಕಾರ ಸ್ವೀಕಾರಕ್ಕೆ ಕಾಯಬೇಕಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಚಿವರ ಆಗಮನದ ನಿರೀಕ್ಷೆ
ಜೂ.13ರಂದು ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರದ ಅಧ್ಯಕ್ಷರ ಮತ್ತು ಸದಸ್ಯರು ಅಧಿಕಾರ ಸ್ವೀಕರಿಸಲಿದ್ದಾರೆ. ಆ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಆಹ್ವಾನ ನೀಡಿ ಅವರ ಸಮ್ಮುಖದಲ್ಲಿ ವಿಶೇಷ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳುವ ಇರಾದೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊಂದಿದೆ ಎಂದು ಕನ್ನಡ ಭವನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರನ್ನು ಸಂಪರ್ಕಿಸುವ ಕೆಲಸ ನಡೆದಿದೆ. ಆದರೆ ಸಚಿವರು ಕಾರ್ಯಕ್ರಮಕ್ಕೆ ಬರುವ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಸಚಿವರನ್ನು ಆಹ್ವಾನಿಸುವ ನಿಟ್ಟಿನಲ್ಲೆ ಕನ್ನಡ ಭವನದ ಕಾರ್ಯ ಚಟುವಟಿಕೆಗಳು ನಡೆದಿವೆ ಎಂದು ತಿಳಿಸಿದ್ದಾರೆ.
ಜೂ. 13ರಂದು ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಅಂದು ನಾನು ಕೂಡ ಅಧಿಕಾರ ಸ್ವೀಕರಿಸುತ್ತೇನೆ. ಲೋಕಸಭೆ ಮತ್ತು ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಧಿಕಾರ ಸ್ವೀಕಾರಕ್ಕೆ ಅಡ್ಡಿಉಂಟಾಗಿತ್ತು.
-ಡಾ| ಎಲ್.ಎನ್.ಮುಕುಂದರಾಜ್, ಸಾಹಿತ್ಯ ಅಕಾಡೆಮಿ ನಿಯೋಜಿತ ಅಧ್ಯಕ್ಷ
– ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.