ಸುವರ್ಣ ಸೌಧದಲ್ಲಿ ಮಾಹಿತಿ ಆಯೋಗದ ಪೀಠ ಕಾರ್ಯಾರಂಭ


Team Udayavani, Jun 20, 2020, 7:44 AM IST

geethu

ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ರಾಜ್ಯಮಟ್ಟದ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು ಎಂಬ ಇಲ್ಲಿನ ಜನರ ಬಹುದಿನಗಳ ಬೇಡಿಕೆ ಮತ್ತು  ಸರ್ಕಾರದ ಆಶಯದಂತೆ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠವು ಕಾರ್ಯಾರಂಭಿಸಿದೆ.

ಪೀಠದ ಕಾರ್ಯಾರಂಭದ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ  ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರಾದ ಗೀತಾ ಬಿ.ವಿ., ಆಯೋಗದ ಬೆಳಗಾವಿ ಪೀಠದ ನ್ಯಾಯಾಲಯ ಕಲಾಪ ಜೂ.22 ರಿಂದ ಆರಂಭಗೊಳ್ಳಲಿದೆ ಎಂದು ಪ್ರಕಟಿಸಿದರು. ಈ ಮೊದಲು ನಿರ್ಧಾರವಾದಂತೆ ಆಯೋಗದ  ಬೆಳಗಾವಿ ಪೀಠವು ಮಾರ್ಚ್‌ 3 ರಂದೇ ಕಾರ್ಯಾರಂಭ ಮಾಡಬೇಕಿತ್ತು. ಆದರೆ ಕೋವಿಡ್‌ 19 ಹಿನ್ನೆಲೆಯಲ್ಲಿ ವಿಳಂಬವಾಯಿತು. ಈಗ ಎಲ್ಲವೂ ಸಿದ್ಧವಾಗಿದ್ದು ಸರ್ಕಾರ ಮತ್ತು ಉತ್ತರ ಕರ್ನಾಟಕದ ಜನರ ಆಶೋತ್ತರದಂತೆ ಸುವರ್ಣ  ವಿಧಾನಸೌಧದಲ್ಲಿ ಕಾರ್ಯ ಕಲಾಪ ಆರಂಭಿಸಲಾಗುತ್ತಿದೆ ಎಂದರು.

ಪೀಠಕ್ಕೆ 7 ಜಿಲ್ಲೆಯ ವ್ಯಾಪ್ತಿ: ಮಾಹಿತಿ ಆಯೋಗದ ಬೆಳಗಾವಿ ಪೀಠದ ವ್ಯಾಪ್ತಿಯಲ್ಲಿ ಬೆಳಗಾವಿ ವಿಭಾಗದ 7 ಜಿಲ್ಲೆಗಳು ಬರಲಿವೆ. ಪೀಠದ ವ್ಯಾಪ್ತಿಯಲ್ಲಿ ಒಟ್ಟಾರೆ 4 ಸಾವಿರ ಪ್ರಕರಣಗಳು ಬಾಕಿ ಉಳಿದಿದ್ದು ಅದ್ಯತೆಯ ಮೇರೆಗೆ ಎಲ್ಲವನ್ನೂ  ಇತ್ಯರ್ಥಗೊಳಿಸಲಾಗುವುದು ಎಂದರು. ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಪ್ರಕರಣಗಳನ್ನು ಪೀಠ ನಿರ್ವಹಿಸಲಿದೆ.

4 ಸಾವಿರ ಪ್ರಕರಣಗಳು ಇರುವುದರಿಂದ ಕೋವಿಡ್‌ 19 ಹಿನ್ನೆಲೆಯಲ್ಲಿ ಆರಂಭದಲ್ಲಿ ಕಡಿಮೆ ಸಂಖ್ಯೆಯ ಪ್ರಕರಣಗಳನ್ನು ಕೈಗೆತ್ತಿಕೊಂಡು ಹಳೆಯ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ನೀಡಲಾಗುವುದು. ಅಧಿಕಾರಿಗಳು, ಮೇಲ್ಮನವಿದಾರರ ಸಮ್ಮುಖದಲ್ಲಿ ತ್ವರಿತವಾಗಿ ಪ್ರಕರಣಗಳ ವಿಲೇವಾರಿ ಮಾಡುವ ಚಿಂತನೆ ಇದೆ ಎಂದು ಹೇಳಿದ ಅವರು, ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನದ ಸಂದರ್ಭದಲ್ಲಿ ಮಾಹಿತಿ ಆಯೋಗದ ಬೆಳಗಾವಿ ಪೀಠದ ಕಾರ್ಯಕಲಾಪಗಳು  ನಡೆಯುವುದಿಲ್ಲ.

ಈ  ಅವಧಿಯಲ್ಲಿ ಪೀಠದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಗಾರ ಆಯೋಜಿಸಲಾಗುವುದು ಎಂದರು. ಅಧಿವೇಶನ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ಕಲಾಪ ನಡೆಸಲಾಗುವುದು. ಪೀಠದ ಕಾರ್ಯ ಕಲಾಪಗಳ ಸುಗಮ ನಿರ್ವಹಣೆಗೆ  ಶಾಖಾಧಿಕಾರಿ ಹಾಗೂ ಅಧೀನ ಕಾರ್ಯದರ್ಶಿಗಳ ಅಗತ್ಯವಿದ್ದು, ಆದಷ್ಟು ಬೇಗ ಅಧಿಕಾರಿಗಳನ್ನು ನಿಯೋಜಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ಮೂರು ಬಸ್‌ ವ್ಯವಸ್ಥೆ: ಸುವರ್ಣ ವಿಧಾನಸೌಧ ನಗರದಿಂದ ದೂರದಲ್ಲಿರುವುದರಿಂದ ಸದ್ಯಕ್ಕೆ ಪ್ರತಿದಿನ 3 ಬಸ್‌ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ. ಕಲಾಪಕ್ಕೆ ಬರಬೇಕಾದರೆ ಸಮನ್ಸ್‌ ಪ್ರತಿ ತೋರಿಸಿದರೆ ಮಾತ್ರ ಸುವರ್ಣ ವಿಧಾನಸೌಧದ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.

ಟಾಪ್ ನ್ಯೂಸ್

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.