“ಮನೆ ತೆರವು ಮಾಡಿದರೆ ಪೆಟ್ರೋಲ್ ಸುರಿದು ಆತ್ಮಹತ್ಯೆ”: ಅಧಿಕಾರಿಗಳಿಗೆ ಶಾಕ್ ಕೊಟ್ಟ ದಂಪತಿ!
Team Udayavani, Oct 12, 2022, 12:06 PM IST
ಕೆ.ಆರ್. ಪುರ: ಕೆಆರ್ ಪುರದಲ್ಲಿ ಮೂರನೇ ದಿನವೂ ತೆರವು ಕಾರ್ಯ ಮುಂದುವರೆದಿದೆ. ಮೂರನೇ ದಿನಕ್ಕೆ ತೆರವಿಗೆ ಬಂದ ಬಿಬಿಎಂಪಿ ಅಧಿಕಾರಿಗಳಿಗೆ ಮನೆ ತೆರವು ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ದಂಪತಿಗಳು ಬೆದರಿಸಿರುವ ಘಟನೆ ಬಸವನಪುರ ಮುಖ್ಯರಸ್ತೆಯ ಎಸ್.ಆರ್.ಲೇಔಟ್ ನಲ್ಲಿ ನಡೆದಿದೆ.
ಸೋನಾ ಸೇನ್ ಮತ್ತು ಸುನಿಲ್ ಸಿಂಗ್ ಎಂಬ ದಂಪತಿಗಳು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ತಮ್ಮ ಮನೆಯನ್ನು ತೆರವು ಮಾಡಲು ಬಂದ ಅಧಿಕಾರಿಗಳ ಮುಂದೆ ಪೆಟ್ರೋಲ್ ಕ್ಯಾನ್ ಹಿಡಿದು, ನಮ್ಮ ಮನೆ ತೆರವು ಮಾಡಿದರೆ ಮೈ ಮೇಲೆ ಪೆಟ್ರೋಲ್ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಅಧಿಕಾರಿಗಳ ತಲೆನೋವು ಮಾಡಿದ್ದಾರೆ.
ನಾವು ಇಲ್ಲಿಯವರೇ. ಇಲ್ಲಿ ಹುಟ್ಟಿ ಇಲ್ಲೇ ಬೆಳೆದಿದ್ದೇವೆ. ಮನೆ ಕಟ್ಟುವಾಗ ಇಲ್ಲದ ರಾಜಕಾಲುವೆ ಈಗ ಎಲ್ಲಿಂದ ಬಂತು? ನಾವೇನು ಪಾಕಿಸ್ತಾನದಿಂದ ಬಂದವರಾ? ನಾವೂ ಕರ್ನಾಟಕದ ಜನರೇ ನಮಗೆ ಇಷ್ಟೊಂದು ತೊಂದರೆ ಕೊಡುತ್ತಿದ್ದೀರಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದರು.
ಬೆಂಕಿ ಹಚ್ಚಿಕೊಂಡು ಅನಾಹುತ ಮಾಡಿಕೊಳ್ಳಬೇಡಿ ಎಂದು ಒಂದೆಡೆ ಸ್ಥಳೀಯರು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನೊಂದೆಡೆ ನಮ್ಮ ಕನಸಿನ ಮನೆ ಡೆಮಾಲಿಷ್ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ದಂಪತಿಗಳು ಪಟ್ಟು ಹಿಡಿದಿದ್ದಾರೆ.
ಪೊಲೀಸರು ನಿಮಗೆ ನ್ಯಾಯ ಕೊಡಿಸುತ್ತೇವೆ ದುಡುಕಬೇಡಿ ಎಂದು ಮನವೊಲಿಸಲು ಹರಸಾಹಸ ಪಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.