ಪರಿಹಾರ ಮೊತ್ತ 3 ಪಟ್ಟು ಹೆಚ್ಚಿಸಿ: ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸರಕಾರದ ನಿರ್ಧಾರ
Team Udayavani, Aug 2, 2022, 7:20 AM IST
ಬೆಂಗಳೂರು: ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಕೇಂದ್ರ ಸರಕಾರ ನೀಡು ತ್ತಿರುವ ಎನ್‌ಡಿಆರ್‌ಎಫ್ ಪರಿಹಾರದ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು ಎಂದು ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.
ಹಲವು ವರ್ಷಗಳ ಹಿಂದೆ ನಿಗದಿಪಡಿಸಿರುವ ಪರಿಹಾರ ಮೊತ್ತ ಈಗ ಆಗುತ್ತಿರುವ ನಷ್ಟಕ್ಕೆ ಹೋಲಿಸಲಾಗದು. ಹೀಗಾಗಿ ಮೊತ್ತ ವನ್ನು ಮೂರು ಪಟ್ಟು ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು. ಸದ್ಯವೇ ದಿಲ್ಲಿಗೆ ತೆರಳಿ ಈ ಕುರಿತು ಗೃಹ, ಹಣಕಾಸು ಮತ್ತು ಕೃಷಿ ಸಚಿವರನ್ನು ಭೇಟಿ ಮಾಡವುದಾಗಿ ಕಂದಾಯ ಸಚಿವ ಆರ್. ಅಶೋಕ್ ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯ ಸರಕಾರವು ಕೇಂದ್ರದ ಎನ್‌ಡಿಆರ್‌ಎಫ್ ಪರಿಹಾರ ಮೊತ್ತಕ್ಕೆ ಅಷ್ಟೇ ಮೊತ್ತ ಸೇರಿಸಿ ನೀಡುತ್ತಿದೆ. ಮನೆ ಸಂಪೂರ್ಣ ಕುಸಿದರೆ ದೇಶದಲ್ಲೇ ಎಲ್ಲೂ ನೀಡದ 5 ಲಕ್ಷ ರೂ. ನೀಡಲಾಗುತ್ತಿದೆ. ಕೇಂದ್ರ ಸರಕಾರವು ಎನ್‌ಡಿಆರ್‌ಎಫ್ ಮೊತ್ತ ಹೆಚ್ಚಿಸಿದರೆ ರಾಜ್ಯ ಸರಕಾರಕ್ಕೆ ಹೊರೆ ಕಡಿಮೆಯಾಗುತ್ತದೆ ಎಂದರು.
ಬಗರ್‌ಹುಕುಂ ಸಾಗುವಳಿ ಜಮೀನು ಅರ್ಜಿ 57 ಸಲ್ಲಿಕೆ ಅವಕಾಶವನ್ನು ಇನ್ನೂ ಒಂದು ವರ್ಷ ವಿಸ್ತರಿಸಲು ತೀರ್ಮಾನಿಸಲಾಗಿದೆ. ಜನಪ್ರತಿನಿಧಿಗಳ ಒತ್ತಡದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಅಧಿವೇಶನದಲ್ಲಿ ಇದಕ್ಕಾಗಿ ತಿದ್ದುಪಡಿ ತರಲಾಗುವುದು ಎಂದು ಹೇಳಿದರು.
ಅಕ್ರಮ-ಸಕ್ರಮಕ್ಕೆ ಅರ್ಜಿ
ರಾಜ್ಯಾದ್ಯಂತ ನಕ್ಷೆ ಉಲ್ಲಂಘನೆ ಮತ್ತು ಅನುಮೋದನೆ ಇಲ್ಲದ ಬಡಾ ವಣೆಗಳಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳ ಸಕ್ರಮಕ್ಕೆ ಸದ್ಯದಲ್ಲೇ ಅರ್ಜಿ ಕರೆಯಲಾಗುವುದು. ಇದರಿಂದ ಸರಕಾರಕ್ಕೆ 20 ಸಾವಿರ ಕೋಟಿ ರೂ.ಗಳಷ್ಟು ಆದಾಯ ಬರಲಿದೆ. ನ್ಯಾಯಾಲಯಗಳಲ್ಲಿ ಈ ಕುರಿತು ಇರುವ ಅರ್ಜಿ ಶೀಘ್ರದಲ್ಲೇ ಇತ್ಯರ್ಥಗೊಳ್ಳಲಿದ್ದು, ಅನಂತರ ದಂಡ ನಿಗದಿಪಡಿಸಿ ಅರ್ಜಿ ಸ್ವೀಕರಿಸ ಲಾಗುವುದು. ಜತೆಗೆ ಈಗಾಗಲೇ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಸರಕಾರಿ ನಿವೇಶಗಳಲ್ಲಿ ನಿರ್ಮಿಸಿರುವ 2,000 ಸಾ.ಚ. ಅಡಿ ವರೆಗಿನ ವಸತಿ ಕಟ್ಟಡ ಸಕ್ರಮಕ್ಕೆ ತೀರ್ಮಾನಿಸ ಲಾಗಿದೆ. ಇದರಿಂದ ಬೆಂಗಳೂರಿನ 6 ಲಕ್ಷ ಸೇರಿ ರಾಜ್ಯದ 20 ಲಕ್ಷ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.