ರಾಜ್ಯದಲ್ಲಿ ಎಫ್ ಪಿಒಗಳಿಗೆ ಹೆಚ್ಚಿದ ಬೇಡಿಕೆ: ಬ್ರ್ಯಾಂಡ್‌ ಸೃಷ್ಟಿಗೆ ರಾಜ್ಯ ಸರಕಾರ ಪ್ರಯತ್ನ

Team Udayavani, Jul 1, 2022, 6:30 AM IST

ರಾಜ್ಯದಲ್ಲಿ ಎಫ್ ಪಿಒಗಳಿಗೆ ಹೆಚ್ಚಿದ ಬೇಡಿಕೆ: ಬ್ರ್ಯಾಂಡ್‌ ಸೃಷ್ಟಿಗೆ ರಾಜ್ಯ ಸರಕಾರ ಪ್ರಯತ್ನ

ಬೆಂಗಳೂರು: ರೈತನೂ ಉದ್ದಿಮೆದಾರನಾಗಬೇಕು ಹಾಗೂ ಆದಾಯ ದ್ವಿಗುಣಗೊಳ್ಳಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ರಾಜ್ಯದಲ್ಲಿ ರೈತ ಉತ್ಪಾದಕ ಸಂಸ್ಥೆ (ಎಫ್ ಪಿಒ)ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ರಾಜ್ಯದಲ್ಲಿ  ನಿರೀಕ್ಷೆಗೂ ಮೀರಿ ಎಫ್ಪಿಒಗಳ ಸ್ಥಾಪನೆಯಾಗುತ್ತಿವೆ.

ಕೇಂದ್ರ ಸರಕಾರ ರಾಷ್ಟ್ರೀಯ ಕೃಷಿ ವಿಕಾಸ್‌ ಯೋಜನೆ ಅಡಿಯಲ್ಲಿ  ದೇಶಾದ್ಯಂತ ರೈತ ಉತ್ಪಾದಕ ಸಂಸ್ಥೆಗಳನ್ನು ರಚಿಸಿ ಉತ್ತೇಜನ ನೀಡಲಾಗುತ್ತಿದ್ದು, ರಾಜ್ಯಕ್ಕೆ  ಹಂಚಿಕೆಯಾಗಿರುವ 192 ಎಫ್ಪಿಒಗಳ ರಚನೆ ಈಗಾಗಲೇ ಪೂರ್ಣಗೊಂಡಿದ್ದು, ಹೆಚ್ಚುವರಿಯಾಗಿ ಇನ್ನೂ 150 ಎಫ್ಪಿಒಗಳಿಗೆ ಬೇಡಿಕೆ ಇಡಲಾಗಿದ್ದು, ಶೀಘ್ರವೇ ರಾಜ್ಯಕ್ಕೆ ಹೊಸ ಎಫ್ಪಿಒ ದೊರೆಯಲಿವೆ.

ನಿರೀಕ್ಷೆಗೂ ಮೀರಿದ ಬೇಡಿಕೆ:

ಕೇಂದ್ರ ಸರಕಾರ ಈ ಯೋಜನೆಯನ್ನು ಜಾರಿಗೆ ತಂದ ಆರಂಭದಲ್ಲಿ ತೋಟಗಾರಿಕೆ ಇಲಾಖೆಯವರಿಗೆ ಮಾತ್ರ ಎಫ್ಪಿಒಗಳ ಸ್ಥಾಪನೆಗೆ ಅವಕಾಶ  ನೀಡಲಾಗುತಿತ್ತು. ಆದರೆ, ಅದು ನಿರೀಕ್ಷಿತ ಯಶಸ್ಸು ಕಾಣದ ಹಿನ್ನೆಲೆಯಲ್ಲಿ  ಈಗಾಗಲೇ ರಾಜ್ಯ ಸರಕಾರ ಅಳವಡಿಸಿಕೊಂಡಿರುವ ಒಂದು ಜಿಲ್ಲೆ ಒಂದು ಉತ್ಪನ್ನದ ಮಾದರಿಯಲ್ಲಿ  ಆಯಾ ಪ್ರಾದೇಶಿಕತೆ ಆಧಾರದಲ್ಲಿ  ಮೀನುಗಾರಿಕೆ, ಪಶು ಸಂಗೋಪನೆ, ನೇಕಾರರು, ನಬಾರ್ಡ್‌ ಮೂಲಕ ಎಫ್ಪಿಒಗಳ ರಚನೆ ಅವಕಾಶ ಕಲ್ಪಿಸಿದ್ದರಿಂದ ರಾಜ್ಯದಲ್ಲಿ  ಎಫ್ಪಿಒಗಳಿಗೆ ಬೇಡಿಕೆ ಹೆಚ್ಚಿದ್ದು, ನಿರೀಕ್ಷೆಗೂ ಮೀರಿ ರೈತರು ಈ ಯೋಜನೆಯ ಲಾಭ ಪಡೆಯಲು ಮುಂದಾಗುತ್ತಿದ್ದಾರೆ. ಅನೇಕ ಎಫ್ಪಿಒಗಳ ಮೂಲಕ ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ವಿದೇಶಗಳಿಗೂ ರಪು¤ ಮಾಡುವ ಮೂಲಕ ಹೆಚ್ಚಿನ ಆದಾಯ ಗಳಿಸುತ್ತಿದ್ದಾರೆ.

ರಾಜ್ಯ ಸರಕಾರದಿಂದಲೂ ಸ್ಥಾಪನೆ :

ರಾಜ್ಯದಲ್ಲಿ ಕೇಂದ್ರ ಸರಕಾರ ನೀಡುವ ಎಫ್ ಪಿಒಗಳ ಜತೆಗೆ ರಾಜ್ಯ ಸರಕಾರವೂ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ  750 ಅಮೃತ ಎಫ್ಪಿಒಗಳ ರಚನೆಗೆ ಮುಂದಾಗಿದ್ದು, ಪ್ರತಿ ವರ್ಷ 250 ಎಫ್ಪಿಒಗಳ ಸ್ಥಾಪನೆಗೆ ಗುರಿ ನಿಗದಿಪಡಿಸಲಾಗಿದ್ದು, ಈಗಾಗಲೇ 324 ಎಫ್ಪಿಒಗಳ ರಚನೆ ಮಾಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 1096 ಎಫ್ಪಿಒಗಳ ರಚನೆ ಮಾಡಲಾಗಿದೆ.

5 ವರ್ಷ ಕೇಂದ್ರದ ಬೆಂಬಲ :

ರೈತ ಉತ್ಪಾದಕ ಸಂಸ್ಥೆ ಸ್ಥಾಪಿಸಲು ಕೇಂದ್ರ ಸರಕಾರ ಐದು ವರ್ಷಗಳವರೆಗೆ ಸುಮಾರು 50 ಲಕ್ಷ ರೂ.ಗಳವರೆಗೂ ಎಲ್ಲ ರೀತಿಯ ಸಹಾಯಧನ ನೀಡುತ್ತದೆ. ಸಂಸ್ಥೆಯ ಕಚೇರಿ ಸ್ಥಾಪನೆ, ಬಾಡಿಗೆ, ಸಿಬಂದಿಗಳ ಸಂಬಳ, ಕಚೇರಿಗೆ ಬೇಕಾಗುವ ಪೀಠೊಪಕರಣ ಸೇರಿ ಅಗತ್ಯ ಎಲ್ಲ ಸೌಕರ್ಯಗಳನ್ನು ಮಾಡಿಕೊಳ್ಳಲು ಕೇಂದ್ರ ಸರಕಾರವೇ ನೆರವು ನೀಡುತ್ತಿದೆ. ರಾಜ್ಯ ಸರಕಾರದ ಯೋಜನೆ ಅಡಿ ಆರಂಭವಾಗುವ ಎಫ್ಪಿಒಗಳಿಗೆ ರಾಜ್ಯ ಸರಕಾರ 30 ಲಕ್ಷ ರೂ. ಸಹಾಯಧನ ನೀಡಲಿದೆ.

ರೈತ ಮೋರ್ಚಾದಿಂದ ಜಾಗೃತಿ :

ರಾಜ್ಯದಲ್ಲಿ  ಆರಂಭದಲ್ಲಿ ಎಫ್ಪಿಒಗಳ ಸ್ಥಾಫ‌ನೆ ಮಾಡಿಕೊಳ್ಳುವಂತೆ ರೈತರಿಗೆ ಮನವಿ ಮಾಡಿದ್ದರೂ, ಸರಿಯಾದ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಬಿಜೆಪಿ ರೈತ ಮೋರ್ಚಾ ಪ್ರತಿ ಜಿಲ್ಲೆಗಳಿಗೂ ತೆರಳಿ ರೈತರಿಗೆ ಈ ಯೋಜನೆಯ ಪ್ರಯೋಜನಗಳನ್ನು ತಿಳಿಸಿ, ಕಾರ್ಯಕರ್ತರ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ, ಎಫ್ಪಿಒಗಳ ಸ್ಥಾಪನೆಗೆ ರೈತರು ಆಸಕ್ತಿ ತೋರುವಂತೆ ಮಾಡಿದ್ದಾರೆ.

ರಾಜ್ಯದಲ್ಲಿ ಎಫ್ಪಿಒಗಳ ಮೂಲಕ ಮಾರಾಟವಾಗುವ ಎಲ್ಲ ಉತ್ಪನ್ನಗಳಿಗೂ ಏಕ ರೂಪದ ಬ್ರ್ಯಾಂಡ್‌ ಮತ್ತು ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಬ್ರ್ಯಾಂಡ್‌ ಹೆಸರು ಮತ್ತು ಲಾಂಛನ ರೂಪಿಸಲು ಸಾರ್ವಜನಿಕರಿಂದ ಸ್ಪರ್ಧೆಗೆ ಆಹ್ವಾನಿಸಿದ್ದು, ಸೂಕ್ತ ಬ್ರ್ಯಾಂಡ್‌ ಹೆಸರು ಮತ್ತು ಲಾಂಛನ ಮೂಲಕ ಹೆಚ್ಚಿನ ಮಾರುಕಟ್ಟೆ ಒದಗಿಸಲು ಸರಕಾರ ಪ್ರಯತ್ನ ನಡೆಸಿದೆ.

ರೈತರ ಉತ್ಪನ್ನಗಳಿಗೆ ಸರಿಯಾದ ಪ್ಯಾಕಿಂಗ್‌ ಮಾಡಿ, ಬ್ರ್ಯಾಂಡ್‌ ಮಾಡಿ ಮಾರಿದರೆ, ಅವರ ಆದಾಯವೂ ಹೆಚ್ಚಾಗುತ್ತದೆ. ರಾಜ್ಯದಲ್ಲಿ ಎಫ್ ಪಿಒ ಗಳ ಸ್ಥಾಪನೆಗೆ ರೈತರು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಇನ್ನೂ ಹೆಚ್ಚು ಎಫ್ಪಿಒಗಳ ಸ್ಥಾಪನೆ ಸರಕಾರ ಅಗತ್ಯ ಸಹಾಯ ಮಾಡಲಿದೆ.-ಬಿ.ಸಿ. ಪಾಟೀಲ್‌, ಕೃಷಿ ಸಚಿವ

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.