577 PSI ಹುದ್ದೆಗಳಿಗೆ ಸ್ವತಂತ್ರ ಪ್ರಭಾರ ವ್ಯವಸ್ಥೆ
Team Udayavani, Aug 17, 2023, 11:23 PM IST
ಬೆಂಗಳೂರು: ಪಿಎಸ್‌ಐ ನೇಮಕಾತಿ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಇರುವುದರಿಂದ 577 ಪಿಎಸ್‌ಐ ಹುದ್ದೆಗಳಿಗೆ ಸ್ವತಂತ್ರ ಪ್ರಭಾರ ವ್ಯವಸ್ಥೆ ಮಾಡಲು ಸರಕಾರ ನಿರ್ಧರಿಸಿದೆ.
ರಾಜ್ಯದಲ್ಲಿ 2020-21ರಲ್ಲಿ 545 ಹಾಗೂ 2021-22 ರಲ್ಲಿ 402 ಪಿಎಸ್‌ಐ (ಸಿವಿಲ್) ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳು ವಾಗ ಹಲವು ಆರೋಪಗಳು ಕೇಳಿಬಂದಿದ್ದವು. ಒಂದೆಡೆ ಈ ಹಗರಣದ ತನಿಖೆ ನಡೆಯುತ್ತಿದ್ದು, ಇನ್ನೊಂದೆಡೆ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ.
ಇದರಿಂದ 1 ಸಾವಿರದಷ್ಟು ಪಿಎಸ್‌ಐ ಹುದ್ದೆಗಳು ಖಾಲಿ ಆಗಿದ್ದು, ಎಎಸ್‌ಐಗಳನ್ನೇ ಪಿಎಸ್‌ಐಗಳಾಗಿ ಮುಂಭಡ್ತಿ ನೀಡುವ ಮೂಲಕ ಹುದ್ದೆಗಳ ಭರ್ತಿಗೆ ಕ್ರಮ ವಹಿಸುವುದಾಗಿ ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹೇಳಿದ್ದರು.
ಅದರಂತೆ ಈಗ ಸರಕಾರ ಆದೇಶ ಹೊರಡಿಸಿದ್ದು, ಒಟ್ಟು 577 ಪಿಎಸ್‌ಐ ಹುದ್ದೆಗಳನ್ನು ತಾತ್ಕಾಲಿಕವಾಗಿ 6 ತಿಂಗಳವರೆಗೆ ಸ್ವತಂತ್ರ ಪ್ರಭಾರ ವ್ಯವಸ್ಥೆ ಮೂಲಕ ತುಂಬಲು ಕ್ರಮ ಕೈಗೊಂಡಿದೆ.
ಮುಂಭಡ್ತಿ ಪ್ರಕ್ರಿಯೆ ಅಲ್ಲ
ನಿಯಮ 32ರ ಅನ್ವಯ ಮಾಡಲಾಗುವ ಸ್ವತಂತ್ರ ಪ್ರಭಾರ ವ್ಯವಸ್ಥೆಯು ಕ್ರಮಬದ್ಧ ಮುಂಭಡ್ತಿ ಪ್ರಕ್ರಿಯೆ ಅಲ್ಲ. ಯಾವುದೇ ಸಂದರ್ಭದಲ್ಲಾದರೂ ಆದೇಶ ಹಿಂಪಡೆಯಬಹುದು. ನೇರ ನೇಮಕಾತಿ ಪ್ರಕ್ರಿಯೆ ನಡೆದ ಕೂಡಲೇ ಈ ವ್ಯವಸ್ಥೆ ರದ್ದಾಗಲಿದೆ. ಸ್ವತಂತ್ರ ಪ್ರಭಾರ ನಿರ್ವಹಿಸಿದ ದಿನಾಂಕದಿಂದ ಪೂರ್ವಾನ್ವಯ ಮುಂಭಡ್ತಿಗೂ ಅವಕಾಶಗಳಿಲ್ಲ. ಹಕ್ಕೊತ್ತಾಯವನ್ನೂ ಮಾಡುವಂತಿಲ್ಲ ಎಂದು ಷರತ್ತು ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.