ಜ್ಞಾನಾಧಾರಿತ ‘ಸೂಪರ್ ಪವರ್’ ಭಾರತದ ಸಂಕಲ್ಪ: ಅಮಿತ್ ಶಾ
ಕೆಲವೇ ವರ್ಷಗಳಲ್ಲಿ ಅಮೆರಿಕ- ಇಸ್ರೇಲ್ ಮಟ್ಟಕ್ಕೆ ಬೆಳೆಯಲಿದ್ದೇವೆ
Team Udayavani, May 3, 2022, 1:31 PM IST
ಬೆಂಗಳೂರು: ಭಾರತವನ್ನು ಸಶಕ್ತವಾಗಿ ಕಟ್ಟಿ ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಾಪಿಸುವುದು ಮತ್ತು ಯುವಜನರಿಗೆ ಉಜ್ವಲ ಅವಕಾಶಗಳನ್ನು ಒದಗಿಸಬೇಕೆನ್ನುವುದೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಂಕಲ್ಪವಾಗಿದೆ. ಈ ಕ್ರಾಂತಿಕಾರಕ ಬದಲಾವಣೆಗಳನ್ನು ತರಲೆಂದೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದ್ದು, ಭಾರತವನ್ನು ಜ್ಞಾನಾಧಾರಿತ ‘ಸೂಪರ್ ಪವರ್’ ಮಾಡಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದರು.
ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಇಲ್ಲಿ ಸ್ಥಾಪಿಸಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯವನ್ನು ಮಂಗಳವಾರ ಅಧಿಕೃತವಾಗಿ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಸಂಭವಿಸುತ್ತಿರುವ ಶೈಕ್ಷಣಿಕ ಕ್ರಾಂತಿಯಲ್ಲಿ ಭಾರತೀಯ ಪ್ರಾದೇಶಿಕ ಭಾಷೆಗಳಿಗೆ ಮಹತ್ವದ ಸ್ಥಾನವಿದೆ. ಎನ್ಇಪಿಯನ್ನು ಕರ್ನಾಟಕವು ದೇಶದ ಮೊದಲ ರಾಜ್ಯವಾಗಿ ಜಾರಿಗೆ ತರುವ ಹೊಣೆಯನ್ನು ಸ್ವೀಕರಿಸಿರುವುದು ಶ್ಲಾಘನೀಯ ನಡೆ. ವಿದ್ಯಾರ್ಥಿಗಳೇ ದೇಶದ ಭವಿಷ್ಯವಾಗಿದ್ದು, ಅವರಲ್ಲಿ ದೇಶಭಕ್ತಿಯ ಸಂಸ್ಕಾರವನ್ನು ಬೆಳೆಸಬೇಕಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಇದು ಕೇಂದ್ರ ಸರಕಾರದ ಪ್ರತಿಜ್ಞೆಯಾಗಿದೆ ಎಂದರು.
ಒಂದು ದೇಶ ದೊಡ್ಡ ದೊಡ್ಡ ಸಾಧನೆಗಳನ್ನು ಮಾಡಲು ವ್ಯಕ್ತಿಗಳ ಚಿಕ್ಕಚಿಕ್ಕ ಸಂಕಲ್ಪಗಳು ನಿರ್ಣಾಯಕ ಕೊಡುಗೆ ಕೊಡುತ್ತವೆ. ಈ ನಿಟ್ಟಿನಲ್ಲಿ, ದೇಶವನ್ನು ಪ್ರೀತಿಸುವಂತಹ ಶಿಕ್ಷಣವನ್ನು ಎನ್ಇಪಿ ಅಡಿಯಲ್ಲಿ ಒದಗಿಸಲಾಗುವುದು. ಇದು ಸಂಪೂರ್ಣ ಭಾರತೀಯ ದೃಷ್ಟಿಕೋನವನ್ನು ಹೊಂದಿದೆ. ದೇಶದ ಪ್ರಗತಿಯ ದೃಷ್ಟಿಯಿಂದ ಮುಂದಿನ 25 ವರ್ಷಗಳಿಗೆ ಅತಿಶಯ ಮಹತ್ವವಿದ್ದು, ಭಾರತವು ವಿಶ್ವಗುರು ಎನಿಸಿಕೊಳ್ಳುವುದು ನಿಶ್ಚಿತ ಎಂದು ಅವರು ಪ್ರತಿಪಾದಿಸಿದರು.
ಕಳೆದ ಎಂಟು ವರ್ಷಗಳಿಂದ ಈಚೆಗೆ ದೇಶದ ಗ್ರಾಮೀಣ ಭಾಗದಲ್ಲಿ 410 ಉನ್ನತ ಶಿಕ್ಷಣ ಸಂಸ್ಥೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ. ಜತೆಗೆ ಜಮ್ಮು-ಕಾಶ್ಮೀರದ ಲಡಾಖ್ ಮತ್ತು ಈಶಾನ್ಯ ಭಾರತ ಸೇರಿದಂತೆ ಉದ್ದಗಲಕ್ಕೂ ಕೇಂದ್ರೀಯ ವಿವಿ, ಏಮ್ಸ್, ಐಐಟಿಗಳು, ವೈದ್ಯಕೀಯ ಕಾಲೇಜುಗಳು ಮತ್ತು ಹೊಸ ಜ್ಞಾನಶಾಖೆಗಳ ವಿ.ವಿ.ಗಳನ್ನು ಆರಂಭಿಸಲಾಗಿದೆ. ಈ ಮೂಲಕ ದೇಶದ ಎಲ್ಲಾ ಭಾಗಗಳನ್ನೂ ಸಮಾನವಾಗಿ ಕಾಣಲಾಗುತ್ತಿದೆ ಎಂದು ಅಮಿತ್ ಶಾ ವಿವರಿಸಿದರು.
ಇದನ್ನೂ ಓದಿ:ಯಾರೂ ಹಗಲು ಕನಸು ಕಾಣಬೇಡಿ..; ಸ್ವಪಕ್ಷೀಯರಿಗೆ ಸಚಿವ ಅಶೋಕ್ ಟಾಂಗ್
ಪ್ರಧಾನಿ ಮೋದಿ ತಮ್ಮ ದಕ್ಷ ನೀತಿಗಳ ಮೂಲಕ ದೇಶವನ್ನು ಉತ್ಪಾದನಾ ಹಬ್ ಆಗಿ ಬೆಳೆಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ, ಭಯೋತ್ಪಾದನೆ ಮತ್ತಿತರ ಪಿಡುಗುಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ ಭಾರತವು ಅಮೆರಿಕ ಮತ್ತು ಇಸ್ರೇಲ್ ದೇಶಗಳ ಮಟ್ಟಕ್ಕೆ ಬೆಳೆದು, ಬೆಳಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಇದು ಪರಿವರ್ತನೆಯ ಪರ್ವಕಾಲವಾಗಿದೆ. ಜನಸಂಖ್ಯೆಯಲ್ಲಿ ಶೇ.46ರಷ್ಟಿರುವ ಯುವಜನರನ್ನು ದೇಶದ ಆಸ್ತಿಯೆಂದು ಭಾವಿಸಲಾಗಿದೆ. ಯುವಜನರಿಗೆ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಇವೇ ಸರಕಾರದ ಮೂಲಮಂತ್ರಗಳಾಗಿವೆ. ಕ್ಯಾಂಪಸ್ ಸಂದರ್ಶನ, ಸ್ವ-ಉದ್ಯೋಗಕ್ಕೆ ಒತ್ತು ಕೊಡುವುದರ ಜತೆಗೆ ಪ್ರತೈಕ ಉದ್ಯೋಗ ನೀತಿಯನ್ನೇ ರಾಜ್ಯದಲ್ಲಿ ರೂಪಿಸಲಾಗಿದೆ’ ಎಂದರು.
ನೃಪತುಂಗ ವಿ.ವಿ.ಕ್ಕೆ ಕೇಂದ್ರ ಸರಕಾರವು 55 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಇದಕ್ಕೆ ಅಗತ್ಯವಿರುವ ಬಾಕಿ ಹಣವನ್ನು ರಾಜ್ಯ ಸರಕಾರ ಒದಗಿಸಲಿದೆ. ಕಾಲದ ಜತೆಯಲ್ಲಿ ಬದಲಾವಣೆಗೆ ತೆರೆದುಕೊಳ್ಳದೆ ಹೋದರೆ ಅವಕಾಶಗಳು ಕೈ ತಪ್ಪಿ ಹೋಗಲಿವೆ. ಹೀಗಾಗಿ, ರಾಜ್ಯದಲ್ಲಿ ಎನ್ಇಪಿ ಜಾರಿಗೊಳಿಸುತ್ತಿದ್ದು, ಪೂರ್ವ ಪ್ರಾಥಮಿಕ ಹಂತದಿಂದ ಹಿಡಿದು ಸ್ನಾತಕೋತ್ತರ ಮಟ್ಟದವರೆಗೂ ಇನ್ನುಮುಂದೆ ಸಮಗ್ರ ಪರಿವರ್ತನೆ ಕಾಣಿಸಿಕೊಳ್ಳಲಿದೆ. ನೃಪತುಂಗ ವಿ.ವಿ.ವು ಎನ್ಇಪಿ ನೀತಿಯನ್ನು ಸಂಪೂರ್ಣವಾಗಿ ಅಳವಡಿಸಿಕೊಂಡಿದೆ ಎಂದು ಅವರು ನುಡಿದರು.
ಇದನ್ನೂ ಓದಿ:ಮೋದಿ ವಿದೇಶ ಪ್ರವಾಸದ ಬಳಿಕ ರಾಜ್ಯದ ರಾಜಕೀಯ ನಿರ್ಧಾರ: ಯತ್ನಾಳ
ಪ್ರಾಸ್ತಾವಿಕವಾಗಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, `ನವಭಾರತ ನಿರ್ಮಾಣಕ್ಕಾಗಿ ನವಕರ್ನಾಟಕವು ತನ್ನ ಮೌಲಿಕ ಕೊಡುಗೆ ನೀಡಲಿದೆ. ಕಳೆದ ಎರಡು ವರ್ಷಗಳಲ್ಲಿ 6 ವಿ.ವಿ.ಗಳನ್ನು ಸ್ಥಾಪಿಸಲಾಗಿದ್ದು, ಸದ್ಯದಲ್ಲೇ ಇನ್ನೂ 7 ವಿ.ವಿ.ಗಳು ಅಸ್ತಿತ್ವಕ್ಕೆ ಬರಲಿವೆ. ಒಟ್ಟಿನಲ್ಲಿ ಒಂದು ಜಿಲ್ಲೆಗೆ ಒಂದು ವಿ.ವಿ.ಯಾದರೂ ಇರುವಂತೆ ಮುಂದಡಿ ಇಡಲಾಗುವುದು’ಎಂದರು.
ಇ-ಬೀಟ್ ಪೊಲೀಸ್ ಪಹರೆ, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಚಾಲನೆ: ಅಮಿತ್ ಶಾ ಅವರು ಇದೇ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಇ-ಬೀಟ್ (ಸ್ಮಾರ್ಟ್ ಪೊಲೀಸಿಂಗ್) ವ್ಯವಸ್ಥೆಗೂ ಚಾಲನೆ ನೀಡಿದರು. ಜತೆಗೆ, ಬಳ್ಳಾರಿಯ ವಿಧಿವಿಜ್ಞಾನ ಪ್ರಯೋಗಾಲಯವನ್ನೂ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, `ಗುಜರಾತಿನಲ್ಲಿರುವ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಒಂದು ಕ್ಯಾಂಪಸ್ಸನ್ನು ರಾಜ್ಯದಲ್ಲಿ ತೆರೆಯಲು ಕೇಂದ್ರ ಸರಕಾರವನ್ನು ಕೋರಲಾಗಿದ್ದು, 50 ಎಕರೆ ಜಮೀನನ್ನು ಮೀಸಲಿಡಲಾಗಿದೆ. ಇದಕ್ಕೆ ಶಾ ಅವರು ಭಾಗಶಃ ಒಪ್ಪಿಗೆಯನ್ನೂ ಸೂಚಿಸಿದ್ದಾರೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.