ಮಂಡ್ಯದ ಐದು ರೂಪಾಯಿ ವೈದ್ಯ ಖ್ಯಾತಿಯ ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ
Team Udayavani, Oct 14, 2022, 10:13 AM IST
ಬೆಂಗಳೂರು: ತಮ್ಮ ಕ್ಲಿನಿಕ್ ಗೆ ಬರುವ ರೋಗಿಗಳಿಗೆ ಕೇವಲ ಐದು ರೂಪಾಯಿ ಶುಲ್ಕ ಪಡೆದು ಚಿಕಿತ್ಸೆ ನೀಡುತ್ತಿರುವ ಮಂಡ್ಯದ ಪ್ರಸಿದ್ದ ವೈದ್ಯ ಶಂಕರೇಗೌಡ ಅವರಿಗೆ ಸಿಎನ್‌ಎನ್ ನ್ಯೂಸ್18 ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್ ದಿ ಇಯರ್-2022’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸಾಮಾಜಿಕ ಬದಲಾವಣೆ ವಿಭಾಗದಲ್ಲಿ ಡಾ.ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್-2022’ ಪ್ರಶಸ್ತಿ ನೀಡಲಾಗಿದೆ. ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
‘ನಾನು 1982ರಿಂದ ಅಭ್ಯಾಸ ಮಾಡುತ್ತಿದ್ದೇನೆ. ಅಂದಿನಿಂದ ಇಂದಿನವರೆಗೆ ಐದು ರೂಪಾಯಿ ಶುಲ್ಕ ಹಾಕುತ್ತೇನೆ. ನಮ್ಮಲ್ಲಿ ಯಾವ ಜ್ಞಾನವಿದೆಯೋ ಅದನ್ನು ಎಲ್ಲರಿಗೂ ಸಮಾನವಾಗಿ ನೀಡಬೇಕು. ಹಾಗಾಗಿ ನನ್ನ ಜ್ಞಾನವನ್ನು ನನ್ನ ಶಿಕ್ಷಣಕ್ಕೆ ಕಾರಣರಾದ ನನ್ನ ಜನರಿಗೆ ನೀಡಬೇಕು ಎನ್ನುವ ಉದ್ದೇಶದಿಂದ ಪದವಿ ಪಡೆದ ನಂತರ ನನ್ನ ಊರಿನಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದೆ ಎಂದು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೈದ್ಯ ಡಾ.ಶಂಕರೇಗೌಡ ಹೇಳಿದರು.
ಇದನ್ನೂ ಓದಿ:ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ತಲ್ವಾರ್ ದಾಳಿ ಯತ್ನ
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿಗಳಿಸಿರುವ ಮಂಡ್ಯದ ವೈದ್ಯ ಶ್ರೀ ಶಂಕರೇಗೌಡರಿಗೆ ಇಂಡಿಯನ್ ಆಫ್ ದಿ ಇಯರ್-2022’ ಪ್ರಶಸ್ತಿ ಲಭಿಸಿರುವುದು ಅತ್ಯಂತ ಅಭಿನಂದನಾರ್ಹ ಸಂಗತಿಯಾಗಿದೆ. ಗ್ರಾಮೀಣ ಭಾಗದ ಜನರ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮೆಚ್ಚುಗೆ ಸೂಚಿಸಿದ್ದಾರೆ.
5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿಗಳಿಸಿರುವ ಮಂಡ್ಯದ ವೈದ್ಯ ಶ್ರೀ ಶಂಕರೇಗೌಡರಿಗೆ @CNNNews18 ನ #IndianOfTheYear ಪ್ರಶಸ್ತಿ ಲಭಿಸಿರುವುದು ಅತ್ಯಂತ ಅಭಿನಂದನಾರ್ಹ ಸಂಗತಿಯಾಗಿದೆ. ಗ್ರಾಮೀಣ ಭಾಗದ ಜನರ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. https://t.co/Kcb3yvuFF4
— Basavaraj S Bommai (@BSBommai) October 14, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.