HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Team Udayavani, Jan 6, 2025, 11:27 AM IST
ಬೆಂಗಳೂರು: ಚೀನಾದಲ್ಲಿ ಹೊಸ ಸೋಂಕು ಎಚ್‌ಎಂಪಿವಿ ಹಬ್ಬುತ್ತಿರುವ ಆತಂಕದ ನಡುವೆ ಕರ್ನಾಟಕದಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎಂಟು ತಿಂಗಳ ಮಗುವಿನಲ್ಲಿ ಶಂಕಿತ ಸೋಂಕಿನ ಲಕ್ಷಣಗಳು ಪತ್ತೆಯಾಗಿದೆ.
ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸಿ ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯಕ್ಕೆ ಸೂಚಿಸಿದೆ.
ಎಚ್ ಎಂಪಿವಿ ಸೋಂಕು ಮಾರಣಾಂತಿಕವೇ?
ಹ್ಯೂಮನ್ ಮೆಟಾನ್ಯುಮೋ ವೈರಸ್ ಮೊದಲ ಬಾರಿಗೆ ಚೀನಾದಲ್ಲಿ 2004ರಲ್ಲಿ ಡಚ್ ಸ್ಕಾಲರ್ ವೊಬ್ಬರ ಆರೋಗ್ಯ ತಪಾಸಣೆ ವೇಳೆ ಪತ್ತೆಯಾಗಿತ್ತು. ಇದೊಂದು ಶ್ವಾಸಕೋಶಕ್ಕೆ ಸಂಬಂಧಪಟ್ಟ ಸೋಂಕು. ಈ ಎಚ್ ಎಂಪಿವಿ ವೈರಸ್ ಮಕ್ಕಳು ಹಾಗೂ ವಯಸ್ಕರಿಗೂ ಹರಡುತ್ತದೆ.
ಇದು ಸಾಮಾನ್ಯವಾದ ಶೀತ, ಕೆಮ್ಮು, ಜ್ವರ, ಮೂಗು ಕಟ್ಟುವುದು, ಸೀನುವಿಕೆ, ತಲೆ ನೋವಿನಂತಹ ಲಕ್ಷಣ ಹೊಂದಿರುತ್ತದೆ. ಜತೆಗೆ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಳ್ಳುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರಲ್ಲಿ ಇದು ಗಂಭೀರ ಸ್ವರೂಪಕ್ಕೆ ತಿರುಗಿದಲ್ಲಿ ಸಾವು ಕೂಡಾ ಸಂಭವಿಸಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಎಚ್ ಎಂಪಿವಿ ಸೋಂಕು ಪೀಡಿತ ಮಕ್ಕಳ ಸಾವಿನ ಸಂಖ್ಯೆ ಕೇವಲ ಶೇ.1ರಷ್ಟು. ಆದರೆ ಎಚ್ ಎಂಪಿವಿಗೆ ಈವರೆಗೂ ಸಮರ್ಪಕವಾದ ಲಸಿಕೆ ಕಂಡುಹಿಡಿದಿಲ್ಲ. ಸೋಂಕು ಪೀಡಿತರ ರೋಗಲಕ್ಷಣದ ಆಧಾರದ ಮೇಲೆ ಔಷಧ ನೀಡುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಆದರೆ ಎಚ್ ಎಂಪಿವಿ ಸೋಂಕಿನ ಕುರಿತು ಚೀನಾ ಸರ್ಕಾರ ಮಾತ್ರ ಅಧಿಕೃತವಾಗಿ ಯಾವ ಮಾಹಿತಿಯನ್ನೂ ಹಂಚಿಕೊಂಡಿಲ್ಲ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.