![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 9, 2023, 2:55 PM IST
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ಹುಲಿ ಗಣತಿ ಡೇಟಾವನ್ನು ಬಿಡುಗಡೆ ಮಾಡಿದ್ದು. ಅವರು ‘ಅಮೃತ್ ಕಾಲ’ ಸಮಯದಲ್ಲಿ ಹುಲಿ ಸಂರಕ್ಷಣೆಗಾಗಿ ಸರ್ಕಾರದ ದೃಷ್ಟಿಕೋನ ಮತ್ತು ಇಂಟರ್ನ್ಯಾಷನಲ್ ಬಿಗ್ ಕ್ಯಾಟ್ಸ್ ಅಲೈಯನ್ಸ್ (ಐಬಿಸಿಎ) ಅನ್ನು ಸಹ ಪ್ರಾರಂಭಿಸಿದ್ದಾರೆ.
ಮೈಸೂರಿನಲ್ಲಿ ಭಾನುವಾರ ಕರಾಮುವಿ ಘಟಿಕೋತ್ಸವ ಭವನದಲ್ಲಿ ನಡೆದ ‘ಪ್ರಾಜೆಕ್ಟ್ ಟೈಗರ್’ 50 ವರ್ಷಗಳನ್ನು ಪೂರೈಸಿದ ಸಮಾರಂಭದಲ್ಲಿ 2022 ರಲ್ಲಿ ಭಾರತದ ಹುಲಿಗಳ ಸಂಖ್ಯೆ 3,167 ಎಂದು ಪ್ರಧಾನಿ ಮೋದಿ ಘೋಷಿಸಿದರು.
ಸಂರಕ್ಷಣಾ ಚಟುವಟಿಕೆಗಳಲ್ಲಿ ತೊಡಗಿರುವ ಮುಂಚೂಣಿ ಕ್ಷೇತ್ರ ಸಿಬಂದಿ ಮತ್ತು ಸ್ವ-ಸಹಾಯ ಗುಂಪುಗಳೊಂದಿಗೆ ಸಂವಾದ ನಡೆಸಿದರು.
” ಹುಲಿಗಳ ಮತ್ತು ಸಂರಕ್ಷಣೆಯಲ್ಲಿ ಪ್ರಾಜೆಕ್ಟ್ ಟೈಗರ್ ಮುಂದಿದೆ. ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಪ್ರಾಜೆಕ್ಟ್ ಟೈಗರ್ ಯಶಸ್ಸು ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಹೆಮ್ಮೆಯ ವಿಷಯವಾಗಿದೆ. ಭಾರತವು 75 ಸ್ವಾತಂತ್ರ್ಯ ವರ್ಷಗಳನ್ನು ಪೂರೈಸಿದೆ ಮತ್ತು ಅದೇ ಸಮಯದಲ್ಲಿ,ವಿಶ್ವದ ಹುಲಿಗಳ ಸಂಖ್ಯೆ 75% ಭಾರತದಲ್ಲಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
ಅಂಕಿಅಂಶಗಳ ಪ್ರಕಾರ, 2006 ರಲ್ಲಿ 1,411, 2010 ರಲ್ಲಿ 1,706, 2014 ರಲ್ಲಿ 2,226, 2018 ರಲ್ಲಿ 2,967 ಮತ್ತು 2022 ರಲ್ಲಿ 3,167 ಹುಲಿಗಳ ಸಂಖ್ಯೆ ಇದೆ.
“ನಾವೆಲ್ಲರೂ ಬಹಳ ಮುಖ್ಯವಾದ ಮೈಲಿಗಲ್ಲು, 50 ವರ್ಷಗಳ ಪ್ರಾಜೆಕ್ಟ್ ಟೈಗರ್ ಅನ್ನು ನೋಡುತ್ತಿದ್ದೇವೆ. ಭಾರತವು ಹುಲಿಗಳನ್ನು ಉಳಿಸಿದೆ ಮಾತ್ರವಲ್ಲದೆ ಅದು ಪ್ರವರ್ಧಮಾನಕ್ಕೆ ಬರಲು ಅತ್ಯುತ್ತಮ ಪರಿಸರ ವ್ಯವಸ್ಥೆಯನ್ನು ನೀಡಿದೆ ಎಂದರು.
“ನಾವು ಪರಿಸರ ಮತ್ತು ಆರ್ಥಿಕತೆಯ ನಡುವಿನ ಸಂಘರ್ಷವನ್ನು ನಂಬುವುದಿಲ್ಲ, ಆದರೆ ಪ್ರಾಣಿಗಳ ಸಹ-ಅಸ್ತಿತ್ವಕ್ಕೆ ಪ್ರಾಮುಖ್ಯತೆ ನೀಡುತ್ತೇವೆ” ಎಂದರು.
ಪ್ರಧಾನಿ ಬಂಡೀಪುರದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಮೈಸೂರಿನ ಓವಲ್ ಮೈದಾನದ ಹೆಲಿಪ್ಯಾಡ್ ಗೆ ಆಗಮಿಸಿ, ಬಳಿಕ ರಸ್ತೆ ಮೂಲಕ ಕೆಎಸ್ಓಯು ಘಟಿಕೋತ್ಸವ ಭವನಕ್ಕೆ ತೆರಳಿದರು.
ಸಮಾರಂಭದಲ್ಲಿ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಕೇಂದ್ರದ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವರಾದ ಅಶ್ವಿನಿ ಕುಮಾರ್ ಚೌಬೆ ಪ್ರಧಾನ ಮಂತ್ರಿಯವರನ್ನು ಸ್ವಾಗತಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.