Industrial ಪ್ರದೇಶಗಳಿಗೆ 290 ದಶಲಕ್ಷ ಲೀಟರ್ ನೀರು ಅಗತ್ಯ: ಎಂ.ಬಿ. ಪಾಟೀಲ್
ಪರಿಹಾರೋಪಾಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವರ ಸಭೆ
Team Udayavani, Feb 5, 2024, 10:12 PM IST
ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ಪ್ರದೇಶಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಇದನ್ನು ಬಗೆಹರಿಸಲು ನಿತ್ಯ 290 ದಶಲಕ್ಷ ಲೀಟರ್ (ಎಂಎಲ್‌ಡಿ) ನೀರಿನ ಅಗತ್ಯವಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಅಭಿಪ್ರಾಯಪಟ್ಟರು.
ಕೈಗಾರಿಕಾ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಖನಿಜ ಭವನದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾರ್ಯಸಾಧುವಾದ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ್, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳ ಕೈಗಾರಿಕಾ ಪ್ರದೇಶಗಳು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿವೆ ಎಂದರು.
ಇದಲ್ಲದೆ, ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಪ್ರತಿದಿನ 45 ಎಂಎಲ್‌ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ. ಇದನ್ನು ಹಿಡಕಲ್ ಜಲಾಶಯದಿಂದ ಪೂರೈಸಬಹುದು. ಹಾಗೆಯೇ, ವಿಜಯಪುರ ಕೈಗಾರಿಕಾ ಪ್ರದೇಶಕ್ಕೆ ಕೂಡ ಕೃಷ್ಣಾ ಜಲಾಶಯದಿಂದ ನಿತ್ಯವೂ ಇಷ್ಟೇ ಪ್ರಮಾಣದ ಕುಡಿಯುವ ನೀರು ಪೂರೈಸಬೇಕಾಗಿದೆ.
ಕಲಬುರಗಿ ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ಮತ್ತು ಭೀಮಾ ನದಿಗಳಿಂದ ದಿನವೂ 7 ಎಂಎಲ್ ಡಿ, ಬಳ್ಳಾರಿ ಕೈಗಾರಿಕಾ ಪ್ರದೇಶಕ್ಕೆ ತುಂಗಭದ್ರಾ ಅಣೆಕಟ್ಟೆಯಿಂದ 13 ಎಂಎಲ್ ಡಿ, ರಾಯಚೂರು ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ನದಿಯಿಂದ 13 ಎಂಎಲ್ ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ. ಒಟ್ಟಾರೆ ಪ್ರತಿನಿತ್ಯ 290 ಎಂ.ಎಲ್.ಡಿ ನೀರು ಈ ಜಿಲ್ಲೆಗಳಿಗೆ ಬೇಕಾಗಿದೆ. ಇದನ್ನು ಬಗೆಹರಿಸದೆ ಹಾಗೆಯೇ ಬಿಟ್ಟರೆ ರಾಜ್ಯದ ಕೈಗಾರಿಕಾ ಬೆಳವಣಿಗೆಯೇ ಹಿನ್ನಡೆ ಕಾಣಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಹಳೆ ಮೈಸೂರು ಭಾಗದಲ್ಲಿರುವ ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಈಗಾಗಲೇ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಅದನ್ನು ಕೈಗಾರಿಕಾ ಉದ್ದೇಶಕ್ಕೆ ಬಳಸಲಾಗುತ್ತಿದೆ. ಆದರೆ, ಇಲ್ಲೆಲ್ಲ ಕುಡಿಯುವ ನೀರಿನ ವಿಪರೀತ ಅಭಾವವಿದೆ. ಆದ್ದರಿಂದ, ಎಲ್ಲೆಲ್ಲಿ ಎಷ್ಟು ನೀರಿನ ಲಭ್ಯತೆ ಇದೆ, ಇಲ್ಲಿಗೆಲ್ಲ ಯಾವ್ಯಾವ ಮೂಲಗಳಿಂದ ಕುಡಿಯುವ ನೀರನ್ನು ಪೂರೈಸಬಹುದು ಎಂದು ಕಂಡುಕೊಳ್ಳಬೇಕು. ಈ ಸಂಬಂಧವಾಗಿ ಇನ್ನೊಂದು ವಾರದಲ್ಲಿ ಮತ್ತೂಂದು ಸಭೆ ನಡೆಸಲಾಗುವುದು ಎಂದು ಅವರು ನುಡಿದರು.
ಕೈಗಾರಿಕೆಗಳಿಗೆ ಕುಡಿಯುವ ನೀರು ಪೂರೈಕೆ ಪ್ರಾಥಮಿಕ ಜವಾಬ್ದಾರಿಯಾಗಿದೆ. ರಾಜ್ಯದ ಉದ್ಯಮಗಳ ಬೆಳವಣಿಗೆಯ ದೃಷ್ಟಿಯಿಂದ ಇದು ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದೆ. ಇದನ್ನು ವಿವಿಧ ಇಲಾಖೆಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಪಾಟೀಲ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.