ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಾಣ ಮಾಡಲಾಗಿದೆ: ಸಚಿವ ಜಗದೀಶ್ ಶೆಟ್ಟರ್
Team Udayavani, Sep 11, 2020, 5:53 PM IST
ಬೆಂಗಳೂರು: ರಾಜ್ಯದಲ್ಲಿ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಉಪಕ್ರಮಗಳ ಅನುಷ್ಠಾನಕ್ಕೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ಅಲ್ಲದೆ, ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯದಲ್ಲಿ ಕ್ರಾಂತಿಕಾರಿ ನೀತಿಗಳನ್ನು ಜಾರಿಗೊಳಿಸಲಾಗಿದ್ದು, ಒಟ್ಟಾರೆಯಾಗಿ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಾಣ ಮಾಡಲಾಗಿದೆ ಎಂದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ತಿಳಿಸಿದರು.
ಇಂದು ಬೆಂಗಳೂರಿನಲ್ಲಿ ಕೈಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ Building the Future – Interactive Session on Encouraging Domestic Scale Up of Indian Construction Equipment Ecosystem ವೆಬಿನಾರ್ ನಲ್ಲಿ ಭಾಗವಹಿಸಿ ʼಕೈಗಾರಿಕೆ ಮತ್ತು ಆರ್ಥಿಕಾಭಿವೃದ್ದಿಯತ್ತ ಕರ್ನಾಟಕ ರಾಜ್ಯದ ದೃಷ್ಟಿಯʼ ಬಗ್ಗೆ ಮಾಹಿತಿಯನ್ನು ನೀಡಿದರು.
ಕರ್ನಾಟಕ ರಾಜ್ಯವನ್ನು ಹೂಡಿಕೆ ಸ್ನೇಹಿ ರಾಜ್ಯವನ್ನಾಗಿಸುವತ್ತ ಸರಕಾರ ಕ್ರಾಂತಿಕಾರಿ ಕ್ರಮಗಳನ್ನ ಕೈಗೊಂಡಿದೆ. ಇದರಿಂದಾಗಿ ಕರ್ನಾಟಕ ರಾಜ್ಯದ ಜಿಎಸ್‌ಡಿಪಿ [GSDP] 201 ಬಿಲಿಯನ್ ನಷ್ಟಿದೆ. ಅಲ್ಲದೆ, ರಾಜ್ಯ ರಫ್ತಿನ ಪ್ರಮಾಣ 100 ಬಿಲಿಯನ್ ನಷ್ಟಿದ್ದು ದೇಶದಲ್ಲಿ ನಂ೧ ಸ್ಥಾನವನ್ನು ಹೊಂದಿದ್ದೇವೆ. ನೀತಿ ಆಯೋಗದ ಇಂಡಿಯಾ ಇನ್ನೋವೇಷನ್ ಇಂಡೆಕ್ಸ್ ನಲ್ಲಿ ನಂ.೧ ಸ್ಥಾನಲ್ಲಿದ್ದು ದೇಶದಲ್ಲೇ ಹೆಚ್ಚಿನ ಪ್ರಮಾಣದ ಆರ್&ಡಿ ಕೇಂದ್ರಗಳನ್ನು ಹೊಂದಿದ್ದೇವೆ. ಚೆನ್ನೈ ಹಾಗೂ ಬೆಂಗಳೂರು ಇಂಡಸ್ಟ್ರೀಯಲ್ ಕಾರಿಡಾರ್ ಹಾಗೂ ಬೆಂಗಳೂರು ಮುಂಬಯಿ ಎಕನಾಮಿಕ್ ಕಾರಿಡಾರ್ ಹೀಗೆ ಎರಡು ಇಂಡಸ್ಟ್ರೀಯಲ್ ಕಾರಿಡಾರ್ ಹೊಂದಿರುವ ಎಕೈಕ ರಾಜ್ಯವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಾಗಿರುವ ವಿದ್ಯುತ್ ಶಕ್ತಿ, ಮಾನವ ಸಂಪನ್ಮೂಲ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳು ಲಭ್ಯವಿವೆ. ಅಲ್ಲದೆ, ರಾಜ್ಯದಲ್ಲಿ 16-35 ವರ್ಷದ ಒಳಗಿನ 20 ಮಿಲಿಯನ್ ಯುವಜನರಿದ್ದಾರೆ. ಅವರಿಗೆ ಅಗತ್ಯವಿರುವ ಕೌಶಲ್ಯಾಭಿವೃದ್ದಿಯನ್ನು ನೀಡುವಲ್ಲಿ ಸರಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.
ಕಳೆದ ಕೆಲವು ತಿಂಗಳಿನಲ್ಲಿ ಕಾರ್ಮಿಕ ಕಾನೂನು, ಭೂಸುಧಾರಣಾ ನೀತಿ ಯಲ್ಲಿ ಅಮೂಲಾಗ್ರ ಬದಲಾವಣೆಯನ್ನು ತಂದಿದ್ದೇವೆ. ಅಲ್ಲದೆ, ಹೊಸದಾಗಿ ಘೋಷಣೆ ಮಾಡಿರುವ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯಗಳ ಅಧಿನಿಯಮದಿಂದಾಗಿ ಕೈಗಾರಿಕೆಗಳನ್ನು ಸ್ಥಾಪಿಸುವಲ್ಲಿದ್ದ ಹಲವಾರು ಅಡೆತಡೆಗಳನ್ನು ನಿವಾರಿಸಲಾಗಿದೆ. ಡಿಐಪಿಟಿ ನಿರ್ದೇಶನದಂತೆ ಇಲಾಖೆಯಲ್ಲಿ ಈಗಾಗಲೇ ಬ್ಯೂಸಿನೆಸ್ ರಿಫಾರ್ಮ್ಸ್ ಆಕ್ಷನ್ ಪಾಯಿಂಟ್ಸ್ ಗಳನ್ನು ಅಳವಡಿಸಿಕೊಳ್ಳಲಾಗಿದೆ. ಈ ಮೂಲಕ ರಾಜ್ಯದಲ್ಲಿ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಉಪಕ್ರಮಗಳತ್ತ ಹೆಚ್ಚಿನ ಗಮನ ನೀಡಲಾಗಿದೆ. ಇವುಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇದೇ ಸಂಧರ್ಭದಲ್ಲಿ ಭರವಸೆ ನೀಡಿದರು.
ವೆಬಿನಾರ್ ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಇನ್‌ವೆಸ್ಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಓ ದೀಪಕ್ ಬಾಗ್ಲಾ, ಐಸಿಇಎಂಎ ನ ಅಧ್ಯಕ್ಷರಾದ ಸಂದೀಪ್ ಸಿಂಗ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.