ಕಾರಾಗೃಹ ಇಲಾಖೆ ಹೆಸರು ಬದಲು
Team Udayavani, Jul 30, 2019, 3:00 AM IST
ಬೆಂಗಳೂರು: ಕಾರಾಗೃಹ ಮತ್ತು ಬಂದೀಖಾನೆ ಇಲಾಖೆಯನ್ನು “ಕಾರಾಗೃಹ ಮತ್ತು ಸುಧಾರಣಾ ಸೇವೆಗಳು’ ಎಂದು ಮರು ನಾಮಕರಣ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ “ಮಾದರಿ ಕಾರಾಗೃಹ ಕೈಪಿಡಿ’-2016ರ ಪ್ರಕಾರ ಕಾರಾಗೃಹ ಮತ್ತು ಬಂದೀಖಾನೆ ಇಲಾಖೆ ಬದಲಿಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು (ಡಿಪಾರ್ಟ್‌ಮೆಂಟ್ ಆಫ್ ಪ್ರಿಸನ್ಸ್ ಆಂಡ್ ಕರೆಕ್ಷನಲ್ ಸರ್ವಿಸಸ್) ಎಂದು ಮರು ನಾಮಕರಣ ಮಾಡಲಾಗಿದೆ.
ಅಲ್ಲದೆ, ಇನ್ಮುಂದೆ ಕಾರಾಗೃಹ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಎಂದು ಉಲ್ಲೇಖೀಸುವ ಬದಲು ಮಹಾನಿರ್ದೇಶಕರು ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಎಂದು ನಮೂದಿಸುವಂತೆ ಸೂಚಿಸಲಾಗಿದೆ. ಈಗಾಗಲೇ ದೇಶದ ಕೆಲ ರಾಜ್ಯಗಳಲ್ಲಿ ಕಾರಾಗೃಹ ಮತ್ತು ಬಂದೀಖಾನೆ ಇಲಾಖೆಯ ಹೆಸರನ್ನು ಮರುನಾಮಕರಣ ಮಾಡಲಾಗಿದೆ.
ಅದರಂತೆ ರಾಜ್ಯದಲ್ಲಿಯೂ ಮಾಡಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ಉಲ್ಲೇಖೀಸಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲು ಸೇರುವ ಕೈದಿಗಳನ್ನು ಕಾರಾಗೃಹಗಳಲ್ಲಿ ಪರಿವರ್ತನೆ ಮಾಡಲಾಗುತ್ತದೆ. ಹೀಗಾಗಿ ಬಂದೀಖಾನೆ ಎಂಬ ಪದದ ಬದಲಿಗೆ ಸುಧಾರಣಾ ಸೇವೆಗಳು ಎಂದು ಬದಲಿಸಲಾಗಿದೆ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.