ನಾಳೆಯೇ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ದತೆ ಮಾಡುವಂತೆ ಸೂಚನೆ
Team Udayavani, Jul 27, 2021, 2:30 PM IST
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬಳಿಕ ನೂತನ ಸಿಎಂ ಆಯ್ಕೆಗಾಗಿ ಭಾರೀ ಕಸರತ್ತುಗಳು ನಡೆಯುತ್ತಿದೆ. ದೆಹಲಿ ಮತ್ತು ಬೆಂಗಳೂರಿನಲ್ಲೂ ಹಲವು ಸಭೆಗಳು ನಡೆಯುತ್ತಿದ್ದು, ಮುಂದಿನ ಸಿಎಂ ಯಾರಾಗಬಹುದು ಎಂಬ ಕುತೂಹಲ ಮಾತ್ರ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ.
ಗುರುವಾರ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಇಂದಿನ ಬೆಳವಣಿಗೆಗಳ ಬಳಿಕ ಇಂದು ಸಂಜೆಯೇ ನೂತನ ಸಿಎಂ ಹೆಸರನ್ನು ಪ್ರಕಟ ಮಾಡುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ:ದೆಹಲಿಯಲ್ಲಿ ಸರಣಿ ಸಭೆಯಾಗುತ್ತಿದೆ, ಎರಡ್ಮೂರು ದಿನದಲ್ಲಿ ಸಿಎಂ ಆಯ್ಕೆಯಾಗಲಿದೆ: ಬೊಮ್ಮಾಯಿ
ಇದಕ್ಕೆ ಪುಷ್ಠಿ ನೀಡುವಂತೆ ಬುಧವಾರವೇ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯಪಾಲರ ಕಚೇರಿಯಿಂದ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ ಮತ್ತು ದೆಹಲಿಗೆ ತೆರಳಿದ್ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಸಂಜೆ ನಗರದ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಸಭೆ ಏರ್ಪಡಿಸಲಾಗಿದೆ. ಅಲ್ಲಿಯೇ ನೂತನ ಸಿಎಂ ಆಯ್ಕೆ ನಡೆಯಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.