Karnataka ಮದ್ರಸಾಗಳಲ್ಲಿ ಕನ್ನಡ, ಇಂಗ್ಲಿಷ್ ಶಿಕ್ಷಣಕ್ಕೆ ಸೂಚನೆ
Team Udayavani, Aug 28, 2023, 11:30 PM IST
ಬೆಂಗಳೂರು: ಮದ್ರಸಾಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಸಹಿತ ವಿಜ್ಞಾನ, ಗಣಿತ ವಿಷಯಗಳನ್ನು ಕಲಿಸಲು ವಸತಿ ಹಾಗೂ ಅಲ್ಪಸಂಖ್ಯಾಕರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
ಅಲ್ಪಸಂಖ್ಯಾಕರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಮದ್ರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸಹಿತ ಇತರ ಭಾಷೆ ಕಲಿಸಲು ಕ್ರಮ ಕೈಗೊಳ್ಳಲು ನಿರ್ದೇಶಿಸಿದರು.
ರಾಜ್ಯದಲ್ಲಿ 1,265 ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದ್ರಸಾಗಳಿದ್ದು, ಆ ಪೈಕಿ 100 ಮದ್ರಸಾಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಬೇಕು. ಮುಂದಿನ ವರ್ಷದಿಂದ ಎಲ್ಲ ಮದ್ರಸಾಗಳಲ್ಲಿ ಇದನ್ನು ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಅಲ್ಪಸಂಖ್ಯಾಕರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಅಜಾದ್ ಮಾದರಿ ಶಾಲೆಗಳ 9,10 ಹಾಗೂ 12 ನೇ ತರಗತಿಯ ಒಂದು ಲಕ್ಷ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ಧಪಡಿಸಿರುವ ವಿಜ್ಞಾನ ಮತ್ತು ಗಣಿತ ಸಹಿತ ವಿವಿಧ ವಿಷಯಗಳ ಕೈಪಿಡಿ ಹಾಗೂ ನಿರ್ದೇಶನಾಲಯದ ಯೋಜನೆಗಳ ಕೈಪಿಡಿಯನ್ನು ಸಚಿವರು ಇದೇ ವೇಳೆ ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.