ಕುತೂಹಲ ಮೂಡಿಸಿದ ಬಿಜೆಪಿ ಮೌನ
Team Udayavani, Jul 26, 2017, 7:40 AM IST
ಬೆಂಗಳೂರು: ವೀರಶೈವ- ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆಂಬ ಪ್ರಸ್ತಾಪದ ಬಗ್ಗೆ
ರಾಜ್ಯಾದ್ಯಂತ ಗಂಭೀರ ಚರ್ಚೆ ನಡೆಯುತ್ತಿದ್ದರೂ ಬಿಜೆಪಿ ಮುಖಂಡರು ತುಟಿ ಬಿಚ್ಚದೆ ಮೌನಕ್ಕೆ ಶರಣಾಗಿರುವುದು
ಕುತೂಹಲ ಮೂಡಿಸಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಪ್ರಸ್ತಾಪದಿಂದ ತಕ್ಷಣ ಪ್ರಚೋದನೆಗೆ ಒಳಗಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುವುದಕ್ಕಿಂತ ಸದ್ಯದ ಮಟ್ಟಿಗೆ ಮೌನವನ್ನೇ ಮುಂದುವರಿಸಲು ಬಿಜೆಪಿ ಮುಖಂಡರು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯಿಂದ ಪಕ್ಷ ಯಾವುದೇ ರೀತಿಯಿಂದಲೂ ಪ್ರಚೋದನೆಗೆ ಒಳಗಾಗಬಾರದು. ಈ ಬಗ್ಗೆ ಯಾರೊಬ್ಬರೂ ಬಹಿರಂಗ ಹೇಳಿಕೆ ನೀಡದಿರಲು ಬಿಜೆಪಿ ಹಿರಿಯ ಮುಖಂಡರು ನಿರ್ಧರಿಸಿದ್ದಾರೆ. ಮುಂದೆ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪ್ರಸ್ತಾಪಿಸಿರುವ ಈ ತಂತ್ರಕ್ಕೆ ತೆರೆಮರೆಯಲ್ಲೇ ಪ್ರತಿತಂತ್ರ ಹಣೆಯಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಾಮಾನ್ಯವಾಗಿ ಆಡಳಿತಾರೂಢ ಕಾಂಗ್ರೆಸ್ ಏನಾದರೂ ವಿವಾದಾತ್ಮಕ ವಿಚಾರ ಪ್ರಸ್ತಾಪಿಸಿದಾಗ ಬಿಜೆಪಿ ಮುಗಿ
ಬೀಳುತ್ತಿತ್ತು. ಆ ಪಕ್ಷದ ಮುಖಂಡರು ಪೈಪೋಟಿಗೆ ಬಿದ್ದವರಂತೆ ಪ್ರತಿಕ್ರಿಯೆ, ಪ್ರತ್ಯಾರೋಪ ಮಾಡುತ್ತಿದ್ದರು. ಆದರೆ, ವೀರಶೈವ- ಲಿಂಗಾಯಿತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ವಿಚಾರ ರಾಜ್ಯದಲ್ಲಿ ಸಂಚಲನ ಮೂಡಿಸಿ, ಪರ- ವಿರೋಧ ಚರ್ಚೆ ನಡೆಯುತ್ತಿದ್ದರೂ ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡದಿರುವುದು ಅಚ್ಚರಿ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.