ಸಿದ್ದು ವಿರುದ್ಧದ ವಿಚಾರಣೆಗೆ ಮಧ್ಯಂತರ ತಡೆ
Team Udayavani, Sep 24, 2019, 3:05 AM IST
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾ ಲ ಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧದ ಪ್ರಕರಣ ಹಾಗೂ ಆ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯು ತ್ತಿರುವ ವಿಚಾರಣೆ ರದ್ದು ಕೋರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯು ನ್ಯಾ. ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಯದ ವಿಚಾರಣೆಗೆ ನಾಲ್ಕು ವಾರಗಳ ಮಧ್ಯಂತರ ತಡೆ ನೀಡಿತು. ಅಲ್ಲದೇ ದೂರುದಾರ ಎನ್. ಗಂಗರಾಜು ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಮೈಸೂರಿನ ವಿಜಯನಗರ 2ನೇ ಹಂತದ ಬಡಾವಣೆ ನಿರ್ಮಾಣಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಸ್ವಾಧೀನಪಡಿಸಿಕೊಂಡಿದ್ದ 535 ಎಕರೆ ಜಮೀನಿನಲ್ಲಿ 30 ಗುಂಟೆ ಜಮೀನು ಡಿನೋಟಿಫೈ ಮಾಡಲಾದ ಪ್ರಕರಣದಲ್ಲಿ ಸಿದ್ದರಾಮಯ್ಯ ಆರೋಪ ಎದುರಿಸುತ್ತಿದ್ದಾರೆ.
ಡಿನೋಟಿಫೈ ಮಾಡಲಾದ 30 ಗುಂಟೆ ಜಮೀನು ಪೈಕಿ 10 ಗುಂಟೆ ಖರೀದಿಸಿ ಸಿದ್ದರಾಮಯ್ಯ ಅಲ್ಲಿ ಮನೆ ನಿರ್ಮಿಸಿ, ಬಳಿಕ ಆ ಮನೆಯನ್ನು ಮಾರಾಟ ಮಾಡಿ ದ್ದಾರೆಂದು ಆರೋಪಿಸಿ ಗಂಗರಾಜು ಎಂಬುವರು ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು.
ಇದನ್ನು ಪ್ರಶ್ನಿಸಿ ದೂರುದಾರ ಗಂಗರಾಜು ಕೋರ್ಟ್ ಮೊರೆ ಹೋಗಿದ್ದರು. ಬಿ ರಿಪೋರ್ಟ್ ರದ್ದುಗೊ ಳಿಸಿ, ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಈಗ ಪ್ರಕರಣ ವಿಚಾರಣೆ ಹಾಗೂ ಸಮನ್ಸ್ ರದ್ದು ಕೋರಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.