ಅ.11ರಿಂದ ಶಾಲಾ ಮಕ್ಕಳಿಗೆ ಮಧ್ಯಂತರ ರಜೆ
Team Udayavani, Sep 23, 2017, 9:14 AM IST
ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಾಲೆಯ 2017-18ನೇ ಸಾಲಿನ ಶೈಕ್ಷಣಿಕ ಅವಧಿಯ ಮಧ್ಯಂತರ ರಜೆ ಮೈಸೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆ ಹೊರತುಪಡಿಸಿ ಬೇರೆಲ್ಲ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅಕ್ಟೋಬರ್ 11ರಿಂದ 25ರ ತನಕ ಇರಲಿದೆ.
ದಸರಾ ನಿಮಿತ್ತ ಜಿಲ್ಲಾಧಿಕಾರಿಗಳ ವಿಶೇಷ ಕೋರಿಕೆ ಪತ್ರದ ಅನ್ವಯ ಮೈಸೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ಸೆ.21ರಿಂದಲೇ ಮಧ್ಯಂತರ ರಜೆ ಆರಂಭವಾಗಿದ್ದು, ಅ.5ರ ತನಕ ಇರಲಿದೆ. ಶೈಕ್ಷಣಿಕ ಅವಧಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮೇ 29ರಂದು ಆರಂಭವಾಗಿದ್ದು, 2018ರ ಏ.10ಕ್ಕೆ ಕೊನೆಯಾಗಲಿದೆ. ಬೇಸಿಗೆ ರಜೆಯು ಎಲ್ಲಾ ಜಿಲ್ಲೆಯಲ್ಲೂ 2018ರ ಏ.11ರಿಂದ ಆರಂಭವಾಗಿ ಮೇ 27ಕ್ಕೆ ಮುಗಿಯಲಿದೆ. ಏ.14ರಂದು ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಕಡ್ಡಾಯವಾಗಿ ಶಾಲೆಗೆ ಹೋಗಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಬೇಕು. ಕನ್ನಡ ರಾಜ್ಯೋತ್ಸವ ಆಚರಿಸುವ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಮಧ್ಯಂತರ ರಜೆಯನ್ನು ಅವಶ್ಯಕತೆಗೆ ಅನುಗುಣವಾಗಿ
ಮಾರ್ಪಡಿಸಿ, ಇಲಾಖೆಗೆ ವರದಿ ಸಲ್ಲಿಸಬೇಕು.
ಶಾಲಾವಧಿಯಲ್ಲಿ ಮುಷ್ಕರ ಅಥವಾ ಇನ್ನಿತರ ಕಾರಣಗಳಿಂದ ಜಿಲ್ಲಾ ವ್ಯಾಪ್ತಿಯಲ್ಲಿ ರಜೆ ಘೋಷಿಸಿದ್ದಲ್ಲಿ, ಅಂತಹ ಅಪವ್ಯಯವನ್ನು ರಜಾದಿನಗಳಲ್ಲಿ ಸರಿದೂಗಿಸಿಕೊಳ್ಳುವಂತೆ ಆಯಾ ಜಿಲ್ಲಾ ಉಪನಿರ್ದೇಶಕರಿಗೆ ಇಲಾಖೆ ಸೂಚಿಸಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.