ಒಳ ಮೀಸಲು: 31ಕ್ಕೆ ಸಿಎಂ ಜತೆ ನಾಯಕರ ಸಭೆ
Team Udayavani, Dec 13, 2017, 9:08 AM IST
ಬೆಂಗಳೂರು: ಒಳ ಮೀಸಲಾತಿಗೆ ಸಂಬಂಧಿಸಿದಂತೆ ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ತೀರ್ಮಾನ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಡಿ.31ರಂದು ಎಡಗೈ ಹಾಗೂ ಬಲಗೈ ನಾಯಕರ ಸಭೆ ಕರೆದಿದ್ದಾರೆ. ಈ ಮೂಲಕ ಎರಡೂ ಸಮುದಾಯದ ನಾಯಕರ ಜತೆ ಸಮಾಲೋಚನೆ ನಡೆಸಿ ಒಮ್ಮತದ ಅಭಿಪ್ರಾಯದೊಂದಿಗೆ ಸದಾಶಿವ ಆಯೋಗದ ವರದಿ ಜಾರಿ ಕುರಿತು ತೀರ್ಮಾನ ಕೈಗೊಳ್ಳಲು ಮುಂದಾಗಿದ್ದಾರೆ.
ಅಂದಿನ ಸಭೆಗೆ ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಸಚಿವರಾದ ಎಚ್.ಸಿ.ಮಹದೇವಪ್ಪ, ಎಚ್.ಆಂಜನೇಯ, ಆರ್.ಬಿ.ತಿಮ್ಮಾಪುರ್, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಸಚಿವರಾದ ಬೋವಿ ಸಮುದಾಯದ ಶಿವರಾಜ್ ತಂಗಡಗಿ,
ಲಂಬಾಣಿ ಸಮುದಾಯದ ರುದ್ರಪ್ಪ ಲಮಾಣಿ ಅವರಿಗೆ ಆಹ್ವಾನ ನೀಡಲಾಗಿದೆ.
ಮಂಗಳವಾರ ಈ ಸಂಬಂಧ ತಮ್ಮನ್ನು ಭೇಟಿಯಾಗಿದ್ದ ಕೆ.ಎಚ್.ಮುನಿಯಪ್ಪ, ಎಚ್ .ಸಿ.ಮಹದೇವಪ್ಪ, ಆಂಜನೇಯ, ತಿಮ್ಮಾಪುರ್
ನಿಯೋಗಕ್ಕೂ, ಡಿ.31ರ ಸಭೆಯಲ್ಲಿ ಎಲ್ಲವನ್ನೂ ಸಮಗ್ರವಾಗಿ ಚರ್ಚಿಸೋಣ. ಎಲ್ಲರ ಒಪ್ಪಿಗೆಯಿಂದಲೇ ಜಾರಿಗೆ ಕ್ರಮ ಕೈಗೊಳ್ಳೋಣ.
ಯಾರೂ ಈ ವಿಚಾರದಲ್ಲಿ ಗೊಂದಲ ಸೃಷ್ಟಿಸುವುದು ಬೇಡ ಎಂದು ಸೂಚಿಸಿದರು ಎನ್ನಲಾಗಿದೆ. ಸೋಮವಾರ ಸದಾಶಿವ ಆಯೊಗದ ವರದಿ ಜಾರಿಗೆ ಆಗ್ರಹಿಸಿ ಹೋರಾಟ ನಡೆಸಿದ ಮಾದಿಗ ದಂಡೋರ ಸಮಿತಿಯ ಪದಾಧಿಕಾರಿಗಳ ಜತೆಯೂ ಸಿದ್ದರಾಮಯ್ಯ ಮಂಗಳವಾರ ಸಮಾಲೋಚನೆ ನಡೆಸಿದರು.
ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮಂಗಳವಾರ ಬೆಳಗ್ಗೆ ದಿಢೀರ್ ಸಚಿವ ಆಂಜನೇಯ ನಿವಾಸಕ್ಕೆ ಆಗಮಿಸಿ ಉಪಾಹಾರ ಸೇವಿಸಿ ಒಂದು ಗಂಟೆ ಕಾಲ ಸಮಾಲೋಚನೆ ನಡೆಸಿದರು. ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಉಭಯ ನಾಯಕರು ಚರ್ಚಿಸಿದರು ಎಂದು ಹೇಳಲಾಗಿದೆ. ಆದರೆ, ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ ಎಂದು ಡಾ.ಜಿ.ಪರಮೇಶ್ವರ್ ಹಾಗೂ ಆಂಜನೇಯ ಇಬ್ಬರೂ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Bengaluru: ಟ್ಯೂಷನ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.