ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅ.30ರಿಂದ ಅಂತಾರಾಷ್ಟ್ರೀಯ ಸಮ್ಮೇಳನ
Team Udayavani, Oct 27, 2019, 3:00 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು, ಸಹಯೋಗ ಸಂಸ್ಥೆಗಳ ಜತೆ ಸೇರಿ ಬಡತನ ನಿವಾರಣೆ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ತೊಡಗಿಕೊಂಡಿರುವ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳ ಜತೆಯಲ್ಲಿ ಚರ್ಚಿಸಲು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನವೊಂದನ್ನು ಆಯೋಜಿಸಿದೆ. ಈ ಸಮ್ಮೇಳನ ಅ.30ರಿಂದ ನ.2ರ ವರೆಗೆ ಬೆಂಗಳೂರಿನ ದೇವನಹಳ್ಳಿ ಕ್ಲಾರ್ಕ್ಸ್ ಎಕ್ಸಾಟಿಕಾ ರಿಸಾರ್ಟ್ ಆ್ಯಂಡ್ ಸ್ಪಾದಲ್ಲಿ ನಡೆಯಲಿದೆ.
ಸಮ್ಮೇಳನವನ್ನು ಅ.30ರಂದು ಸಂಜೆ 4.30ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಲಿದ್ದು, ಸಿಎಂ ಯಡಿಯೂರಪ್ಪ ವಸ್ತು ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಅಮೆರಿಕದ ಚಿಕಾಗೋ ನಗರದ ಪ್ರಾಧ್ಯಾಪಕ ಡಾ.ಲ್ಯಾರಿ ರೀಡ್ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸಲಿದ್ದು, ನಬಾರ್ಡ್ ಸಂಸ್ಥೆ ಅಧ್ಯಕ್ಷ ಡಾ. ಹರ್ಷಕುಮಾರ್ ಭಾನ್ವಾಲ ಅವರು ಯೋಜನೆಯ ಸಾಧನಾ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ.
ಅ.31 ಮತ್ತು ನ.1ರಂದು ಏಳು ಪ್ರಮುಖ ಚರ್ಚಾಗೋಷ್ಠಿಗಳಿವೆ. ಅಲ್ಲದೆ, ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಡಾ.ಚಕ್ರವರ್ತಿ ರಂಗರಾಜನ್, ಮಾಜಿ ಉಪರಾಜ್ಯಪಾಲ ಡಾ.ಎಚ್.ಆರ್.ಖಾನ್ ಮತ್ತು ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ವಿಶೇಷ ಅಧಿವೇಶನ ಆಯೋಜಿಸಲಾಗಿದೆ. ನ.1ರಂದು ಸಂಜೆ 4.30ಕ್ಕೆ ನಡೆಯುವ ಸಮಾರೋಪದಲ್ಲಿ ವಿಶ್ವಸಂಸ್ಥೆಯ ಬದಲಿ ಇಂಧನ ವಿಭಾಗದ ಮಾಜಿ ಮುಖ್ಯಸ್ಥ ಡಾ.ಖ್ಯಾಂಡೆ ಯಮ್ಕುಲ್ಲಾ ಸಿಯಾರ ಲಿಯೋನ್ ಅವರು ಪ್ರಧಾನ ಭಾಷಣ ಮಾಡಿ, ಅಂತಾರಾಷ್ಟ್ರೀಯ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ.
ಈ ಸಮ್ಮೇಳನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದ್ದು, ಅಮೆರಿಕ, ಆಸ್ಟ್ರೇಲಿಯ, ಯೂರೋಪ್, ಆಫ್ರಿಕಾ ಮತ್ತು ಏಷ್ಯಾ ಖಂಡದ 80ಕ್ಕೂ ಹೆಚ್ಚಿನ ದೇಶದ ಪ್ರತಿನಿಧಿಗಳು ಈಗಾಗಲೇ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.