ವಿದ್ಯಾರ್ಥಿನಿಯರ ಹಿಂದೆ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಸ್ಥೆ ಕೈವಾಡದೆ: ರೇಣುಕಾಚಾರ್ಯ
Team Udayavani, Feb 10, 2022, 2:12 PM IST
ಬೆಂಗಳೂರು: ಅಮಾಯಕ ವಿದ್ಯಾರ್ಥಿನಿಯರ ಹಿಂದೆ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಸ್ಥೆಗಳ ಕೈವಾಡವಿದೆ. ಇದರ ಜೊತೆಗೆ ಕಾಂಗ್ರೆಸ್ ಕೈವಾಡ ಇದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ದೊಡ್ಡವರು. ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ ತಿಹಾರ್ ಜೈಲಿಗೆ ಹೋಗಿ ಬಂದವರು. ಅವರ ಬಗ್ಗೆ ಮಾತಾಡಲು ನಾನು ಸಣ್ಣವನು, ಕನಕಪುರದ ಬಂಡೆ ಒಡೆದು ಸಾಗಿಸಿ ಭಷ್ಟಾಚಾರ ಮಾಡಿದವರ ಬಗ್ಗೆ ಮಾತಾಡುವಷ್ಟು ನಾನು ದೊಡ್ಡವನಲ್ಲ. ನಾನು ಹಳ್ಳಿ ಹೈದ ಎಂದು ತಿರುಗೇಟು ನೀಡಿದರು.
ನಾನು ಅಲ್ಪಸಂಖ್ಯಾತ ವಿರೋಧಿ ಅಲ್ಲ. ಬಿಜೆಪಿ ಮತ್ತು ಸರ್ಕಾರದ ವರ್ಚಸ್ಸು ಹಾಳು ಮಾಡಲು ಹಿಜಾಬ್ ವಿಚಾರ ತೆಗೆದುಕೊಂಡು ಮುಗ್ದ ವಿದ್ಯಾರ್ಥಿಗಳ ಮನಸ್ಸನ್ನು ಹಾಳು ಮಾಡಲಾಗಿದೆ ಎಂದರು.
ಈಗ ಜಮೀರ್, ಖಾದರ್, ತನ್ವೀರ್ ಸೇಠ್ ಎಲ್ಲರೂ ಮಾತನಾಡುತ್ತಾರೆ. ಹಿಂದೆ ತನ್ವೀರ್ ಸೇಠ್ ತಂದೆ ಅಜೀಜ್ ಸೇಠ್ ಕೋಮು ಗಲಭೆ ಸೃಷ್ಟಿ ಮಾಡಿಸಿ ಅವರ ಪಕ್ಷದ ಸಿಎಂ ಅನ್ನೇ ಕೆಳಗಿಳಿಸಿದರು. ಡಿ.ಕೆ. ಶಿವಕುಮಾರ್ ಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಮಾತಾಡಿದರೆ ಅದಕ್ಕೆ ಏನು ಮಾತಾಡಬೇಕು ಅಂತಾ ನನಗೆ ಚೆನ್ನಾಗಿ ಗೊತ್ತಿದೆ. ವೈಯಕ್ತಿಕ ಟೀಕೆ ಮಾಡಿದರೆ ನಾನು ನನ್ನದೇ ಭಾಷೆಯಲ್ಲಿ ಉತ್ತರ. ಶಿವಕುಮಾರ್ ಭ್ರಮಾಲೋಕದಲ್ಲಿ ಇರುವುದು ಬೇಡ ಎಂದರು.
ಸಮವಸ್ತ್ರ ಮೊದಲಿನಿಂದಲೂ ಇದೆ. ಕೇಸರಿ ಶಾಲು ಖರೀದಿ ಮಾಡುವುದು, ಕೊಡುವುದು ನಮ್ಮ ವೈಯಕ್ತಿಕ ವಿಚಾರ ಕಾಂಗ್ರೆಸ್ ದೇಶ ವಿರೋಧಿಗಳ ಪರವೋ ಅಲ್ಲವೋ ಎಂದು ಡಿಕೆ ಶಿವಕುಮಾರ್ ಸ್ಪಷ್ಟೀಕರಣ ಕೊಡಲಿ ಆಗ್ರಹಿಸಿದರು.
ಇದನ್ನೂ ಓದಿ:ಹೈಕೋರ್ಟ್ ಮೊದಲು ನಿರ್ಧರಿಸಲಿ; ಹಿಜಾಬ್ ಕೇಸ್ ಪ್ರವೇಶಕ್ಕೆ ನಿರಾಕರಿಸಿದ ಸುಪ್ರೀಂ
ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದರೆಂದು ಕಾಂಗ್ರೆಸ್ ಹಸಿ ಸುಳ್ಳು ಹೇಳಿತು. ಸಾಂದರ್ಭಿಕವಾಗಿ ಮುಗ್ಧ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದಾರೆ ದೇಶಪ್ರೇಮದಿಂದ ಕೇಸರಿ ಧ್ವಜ ಹಾರಿಸಿರಬಹುದು. ಮಕ್ಕಳಿಗೆ ಅರ್ಥ ಆಗಿಲ್ಲ. ಖಾಲಿ ಕಂಬಕ್ಕೆ ಕೇಸರಿ ಧ್ವಜ ಹಾರಿಸಿದ್ದಾರೆ. ಅದು ತಪ್ಪು ಅಂತಾ ನಾನು ಹೇಳಲಾಗದು. ರಾಷ್ಟ್ರ ಧ್ವಜದ ಗೌರವವನ್ನು ವಿದ್ಯಾರ್ಥಿಗಳು ಕಡಿಮೆ ಮಾಡಿಲ್ಲ. ಮುಗ್ಧ ಮಕ್ಕಳು ಏನೂ ಅರಿವಾಗದೇ ಕೇಸರಿ ಧ್ವಜ ಹಾರಿಸಿದ್ದಾರೆ. ಅದು ತಪ್ಪು ಸರಿಯೆಂದು ಹೇಳಲಾಗಲ್ಲ. ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಮುಗ್ಧರು. ಅಮಾಯಕ ವಿದ್ಯಾರ್ಥಿಗಳ ಶಿಕ್ಷಣ ಹಾಳಾಗಬಾರದು, ಸಮವಸ್ತ್ರ ಧರಿಸಿ ಶಾಲೆಗೆ ಬನ್ನಿ ಎಂದರು.
ಸಚಿವ ಸ್ಥಾನದ ವಿಚಾರದ ಬಗ್ಗೆ ಮಾತನಾಡಿದ ಅವರು, ಕಾದು ನೋಡೋಣ. ನಮ್ಮ ನಾಯಕರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಾತಾಡಿದ್ದೇನೆ. ನಾಲ್ಕು ಗೋಡೆಯ ನಡುವಿನ ಮಾತುಕತೆ ಬಹಿರಂಗವಾಗಿ ಹೇಳಲ್ಲ ಎಂದರು.
ಪ್ರಿಯಾಂಕಾ ಗಾಂಧಿ ಬಿಕಿನಿ ಎಂದು ಮಾತನಾಡಿದ್ದು ತಪ್ಪು, ಅದರ ಬಗ್ಗೆ ಮಾತಾಡಿದ್ದೇನೆ. ಉಡುಪು ಮಹಿಳೆಯರ ವೈಯಕ್ತಿಕ ವಿಚಾರ, ಅದರ ಬಗ್ಗೆ ಮಾತನಾಡುವುದಿಲ್ಲ. ನಿನ್ನೆ ಮಾತಾಡುವಾಗ ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದೇನೆ. ಸ್ತ್ರೀಯರ ಬಗ್ಗೆ ಬಿಜೆಪಿಗೆ, ಸರ್ಕಾರಕ್ಕೆ, ನನಗೆ ಅಪಾರ ಗೌರವ ಇದೆ ಎಂದು ರೇಣುಕಾಚಾರ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.