ಮೇಕೆದಾಟು, ಮಹದಾಯಿ ಯೋಜನೆಗೆ ಮಧ್ಯಸ್ಥಿಕೆ ವಹಿಸಿ
Team Udayavani, Jun 12, 2019, 3:05 AM IST
ಬೆಂಗಳೂರು: ಮಹದಾಯಿ, ಮೇಕೆದಾಟು ಸಮತೋಲನ ಅಣೆಕಟ್ಟು ಯೋಜನೆ ಸೇರಿ ಅಂತಾರಾಜ್ಯ ಜಲವಿವಾದಗಳನ್ನು ತ್ವರಿತವಾಗಿ ಬಗೆಹರಿಸಲು ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕೆಂದು ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಮಂಗಳವಾರ ನಡೆದ ಜಲ ಸಂರಕ್ಷಣೆ, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಸ್ವತ್ಛ ಭಾರತ ಆಂದೋಲನ ಕುರಿತ ಎಲ್ಲ ರಾಜ್ಯಗಳ ಜಲ ಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಅವರು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರವು ಮಹದಾಯಿ ಹಾಗೂ ಕೃಷ್ಣಾ ಯೋಜನೆಗಳ ಅನುಷ್ಠಾನ ಸಂಬಂಧ ಅಧಿಸೂಚನೆ ಹೊರಡಿಸಬೇಕು. ಅದೇ ರೀತಿ ಮೇಕೆದಾಟು ವಿಸ್ತೃತ ಯೋಜನೆ ವರದಿಗೆ (ಡಿಪಿಆರ್) ಅನುಮತಿ ನೀಡಬೇಕು ಎಂದು ಶಿವಕುಮಾರ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅಂತಾರಾಜ್ಯ ಜಲವಿವಾದಗಳನ್ನು ಬಗೆಹರಿಸಲು ಸಂಬಂಧಪಟ್ಟ ರಾಜ್ಯಗಳ ಸಚಿವರ ಸಭೆಯನ್ನು ಕೇಂದ್ರ ಸರ್ಕಾರ ಶೀಘ್ರ ಕರೆಯಬೇಕು. ಆ ಮೂಲಕ ಎಲ್ಲ ರಾಜ್ಯಗಳ ನಡುವೆ ಸೌಹಾರ್ದಯುತ ಸಂಬಂಧ ಮುಂದುವರಿಯಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಸಮ್ಮೇಳನದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ದೇಶದ ಎಲ್ಲ ರಾಜ್ಯಗಳ ಜಲ ಸಂಪನ್ಮೂಲ ಸಚಿವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.