ಸಂದರ್ಶನ ರದ್ದು ಅಧಿಸೂಚನೆ: ಆಕ್ಷೇಪಣೆಗೆ ಆಹ್ವಾನ
Team Udayavani, Jan 25, 2020, 3:00 AM IST
ಬೆಂಗಳೂರು: ಕೆಪಿಎಸ್‌ಸಿಯಿಂದ ನಡೆಸುವ ಎ. ಮತ್ತು ಬಿ ದರ್ಜೆಯ ಆಯ್ದ ಕೆಲವು ಹುದ್ದೆಗಳಿಗೆ ಸಂದರ್ಶನ ರದ್ದುಗೊಳಿಸುವ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿದೆ. ವೈದ್ಯ ಹಾಗೂ ಎಂಜಿನಿಯರ್ ನಂತಹ ಹುದ್ದೆಗಳಿಗೆ ಸರ್ಕಾರದ ವಿವಿಧ ಇಲಾಖೆಗಳಿಗೆ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಕೇವಲ ಲಿಖೀತ ಪರೀಕ್ಷೆ ಮೂಲಕ ಆಯ್ಕೆ ಮಾಡಿ, ಸಂದರ್ಶನವನ್ನು ಕೈ ಬಿಡಲು 2006ರ ಕರ್ನಾಟಕ ಸಿವಿಲ್ ಸೇವೆ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿ ಮತ್ತು ಆಯ್ಕೆ) ಕಾಯ್ದೆಯ ಸಾಮಾನ್ಯ ನಿಯಮಗಳಿಗೆ ತಿದ್ದುಪಡಿ ತರಲು ಸರ್ಕಾರ ನಿರ್ಧರಿಸಿದೆ.
ಈ ತಿದ್ದುಪಡಿಯ ಮೂಲಕ ಕೆಪಿಎಸ್ಸಿ ಮೂಲಕ ನಡೆಸುವ ಎ. ಮತ್ತು ಬಿ ಹುದ್ದೆಗಳಿಗೆ ಸಂದರ್ಭಾನುಸಾರವಾಗಿ ಸಂದರ್ಶನವನ್ನು ನಡೆಸುವ ಅಗತ್ಯವಿಲ್ಲ ಎಂದು ನಿರ್ಣಯಿಸಿ ಸರ್ಕಾರವು ಅಂತಹ ವರ್ಗದ ಹುದ್ದೆಗಳಿಗೆ ಸಂದರ್ಶನದಿಂದ ವಿನಾಯಿತಿ ನೀಡಿ ಅಧಿಸೂಚಿಸಲು ಅವಕಾಶ ಕಲ್ಪಿಸುವ ಕಾನೂನು ತಿದ್ದುಪಡಿಗೆ ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗೆ ಆಹ್ವಾನ ನೀಡಲಾಗಿದೆ. ಆಕ್ಷೇಪಣೆ ಸಲ್ಲಿಕೆ ನಂತರ ರಾಜಪತ್ರ ಹೊರಡಿಸಿದ ದಿನಾಂಕದಿಂದ ತಿದ್ದುಪಡಿ ಕಾಯ್ದೆ ಜಾರಿಗೆ ಬರಲಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.