ಇನ್‌ವೆಸ್ಟ್ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ
Team Udayavani, Oct 22, 2021, 7:33 AM IST
ಬೆಂಗಳೂರು: ಮುಂದಿನ ವರ್ಷದ ನವೆಂಬರ್‌ನಲ್ಲಿ “ಇನ್‌ವೆಸ್ಟ್ ಕರ್ನಾಟಕ’ ಸಮಾವೇಶ ನಡೆಯಲಿದ್ದು, ಹತ್ತು ಲಕ್ಷ ಕೋ.ರೂ. ಬಂಡವಾಳ ಹೂಡಿಕೆ ಆಗುವ ನಿರೀಕ್ಷೆ ಇದೆ. ಈ ಗುರಿ ಸಾಧನೆಗೆ ದುಬಾೖ ಎಕ್ಸ್‌ಪೋ ಸಹಕಾರಿ ಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು.
“ದುಬಾೖ ಎಕ್ಸ್‌ಪೋ-2020’ದಲ್ಲಿ 3 ದಿನಗಳ ಕಾರ್ಯಕ್ರಮ ಯಶಸ್ವಿ ಯಾಗಿದೆ. 190ಕ್ಕೂ ಅಧಿಕ ದೇಶಗಳು ಪಾಲ್ಗೊಂಡಿದ್ದವು. ಅಂದಾಜು 45 ಲಕ್ಷ ಮಂದಿ ಎಕ್ಸ್‌ಪೋಗೆ ಭೇಟಿ ನೀಡಲಿದ್ದಾರೆ. ಎಕ್ಸ್‌ಪೋದಲ್ಲಿ ದುಬಾೖ ಇಸ್ಲಾಮಿಕ್ ಇನ್‌ವೆಸ್ಟರ್ಸ್ ಜತೆ ಒಪ್ಪಂದ ಮಾಡಿ ಕೊಳ್ಳಲಾಗಿದೆ. ಅದು ಬೆಂಗಳೂರಿನಲ್ಲಿ ಕಚೇರಿ ತೆರೆಯಲಿದ್ದು, ಮುಂದಿನ 3 ವರ್ಷಗಳಲ್ಲಿ 3,500 ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ಪ್ರದರ್ಶಿಸಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸಚಿವರು ಹೇಳಿದರು.
ಅ. 17ರಂದು ನಡೆದ ಉದ್ಯಮಿಗಳ ಚರ್ಚೆಯಲ್ಲಿ 180ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. “ಕರ್ನಾಟಕ- ನೌ ಬಿಯಾಂಡ್’ ಕಾರ್ಯಕ್ರಮದ ಮೂಲಕ ಕೊಲ್ಲಿ ಸಹಿತ ವಿಶ್ವದ 200ಕ್ಕೂ ಹೆಚ್ಚು ಪ್ರಮುಖ ಕೈಗಾರಿಕೋದ್ಯಮಿಗಳಿಗೆ ಕರ್ನಾಟಕವು ಹೂಡಿಕೆಗೆ ಪ್ರಶಸ್ತ ಸ್ಥಳ ಎಂದು ಮನದಟ್ಟು ಮಾಡಲಾಗಿದೆ. ರಾಜ್ಯದ ಸಂಸ್ಕೃತಿಯನ್ನೂ ಅನಾವರಣ ಮಾಡಲಾಗಿದೆ ಎಂದರು.
ಐದು ಕಡೆ ಅದಾಲತ್: ಈಚೆಗೆ ನಡೆದ “ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರ ಯಶಸ್ವಿಯಾಗಿದ್ದು, ಕೈಗಾರಿಕಾ ಅದಾಲತ್ ಕೂಡ ಫಲ ನೀಡಿದೆ. ನ. 11 ಮತ್ತು 12ರಂದು ಕಲಬುರಗಿಯಲ್ಲಿ ಕೈಗಾರಿಕಾ ಅದಾಲತ್ ಹಮ್ಮಿಕೊಳ್ಳಲಾಗಿದೆ. ಬಳಿಕ ಬೆಳಗಾವಿ, ಕರಾವಳಿ ಸೇರಿದಂತೆ ಐದು ಕಡೆ ಆಯೋಜಿ ಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.