“ಸಾವಿನ ತನಿಖೆಯಾಗಲಿ’
Team Udayavani, Aug 1, 2019, 3:05 AM IST
ಬೆಂಗಳೂರು: ವಿ.ಜಿ. ಸಿದ್ಧಾರ್ಥ ಸಾವು ಎಷ್ಟು ದಾರುಣವೋ ಅದರ ಹಿನ್ನೆಲೆಯೂ ಅಷ್ಟೇ ನಿಗೂಢವಾದುದು. ಅವರನ್ನು ಇಂತಹ ದುರಂತಕ್ಕೆ ತಳ್ಳಿದ ಕಾರಣಗಳು ಮತ್ತು ಅದರ ಹಿಂದಿನ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾದರೆ ಮಾತ್ರ ನಿಜವಾದ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ವಿ.ಜಿ. ಸಿದ್ಧಾರ್ಥ ಅವರ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣವಾಗಿರಬಹುದೆಂಬ ಸಂಶಯ ಹುಟ್ಟಿಸುವಂತಿದೆ.
ಅವರು ಕೊನೆಯಲ್ಲಿ ಬರೆದಿರುವ ಪತ್ರದಲ್ಲಿನ ವಿವರಗಳು, ಕಳೆದ ಐದು ವರ್ಷಗಳಲ್ಲಿ ಐಟಿ ಇಲಾಖೆಯ ಕಾರ್ಯ ನಿರ್ವಹಣೆ ಈ ಸಂಶಯವನ್ನು ಇನ್ನಷ್ಟು ಪುಷ್ಟೀಕರಿಸುತ್ತದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸಿದ್ಧಾರ್ಥ ಸಾವು ದಿಗ್ಬ†ಮೆ ಮೂಡಿಸಿದೆ. ಈ ಸಾವು ಅನ್ಯಾಯ. ಕಳೆದ 30 ವರ್ಷದಿಂದ ಸಿದ್ಧಾರ್ಥನನ್ನು ನೋಡಿದ್ದೇನೆ.
ಸಿದ್ಧಾರ್ಥ ನಿಗೂಢ ಅಂತ್ಯ ಆತಂಕಕಾರಿ. ಅವರ ಅಂತಿಮ ಪತ್ರದ ಆಧಾರದಲ್ಲಿ ಕೇಂದ್ರ ಸರ್ಕಾರವು ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದ ಮೂಲಕ ಬೆದರಿಕೆ, ಕಿರುಕುಳ ನೀಡುತ್ತಿತ್ತೇ? ರಾಜಕೀಯ ಕಾರಣಗಳಿಗೆ ಅವರ ಕುಟುಂಬದ ಮೇಲೆ ಒತ್ತಡ ಹೇರಲಾಗುತ್ತಿತ್ತೆ ? ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು.
-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
ಅವರು ಯಾವ ಒತ್ತಡಕ್ಕೆ ಈ ನಿರ್ಧಾರ ತೆಗೆದುಕೊಂಡರು ಎನ್ನುವುದು ತನಿಖೆಯಾಗಬೇಕಿದೆ. ಬ್ಯಾಂಕಿಂಗ್ ಹಾಗೂ ತೆರಿಗೆ ವ್ಯವಸ್ಥೆಯ ಬಗ್ಗೆ ಚರ್ಚೆಯಾಗಬೇಕು.
-ಎಂ.ಬಿ. ಪಾಟೀಲ್, ಮಾಜಿ ಸಚಿವ
ಸಿದ್ಧಾರ್ಥ ನಮ್ಮ ದೇಶದ ಆಸ್ತಿ. ಇಷ್ಟೊಂದು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿ ಮಾಡಿದ್ದರು. ಆದಾಯ ತೆರಿಗೆ ಇಲಾಖೆ ಏನ್ ಬೇಕಾದರೂ ಮಾತನಾಡಿಕೊಳ್ಳಲಿ. ಎಲ್ಲವನ್ನು ದೇವರು ನೋಡಿಕೊಳ್ಳುತ್ತಾನೆ.
-ಡಿ.ಕೆ.ಶಿವಕುಮಾರ್, ಮಾಜಿ ಸಚಿವ
ಸಿದ್ಧಾರ್ಥ ಅಕಾಲಿಕ ನಿಧನದಿಂದ ಇಡೀ ಕಾಫಿ ಉದ್ಯಮ ಬರಡಾಗಿದೆ. ಕರ್ನಾಟಕ ಕಾಫಿಗೆ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕಾಫಿ ಉದ್ಯಮವನ್ನು ಬೆಳೆಸಿ 50 ಸಾವಿರ ಉದ್ಯೋಗ ಸೃಷ್ಟಿಸಿ ಅವರ ಕುಟುಂಬಗಳಿಗೆ ದಾರಿದೀಪವಾಗಿದ್ದರು.
-ಪ್ರಹ್ಲಾದ ಜೋಶಿ, ಕೇಂದ್ರ ಸಂಸದೀಯ ವ್ಯವಹಾರ ಸಚಿವ
ಕಾಫಿ ಪುಡಿಯನ್ನು ವಿದೇಶಗಳಿಗೆ ರಫ್ತು ಮಾಡಿ ರಾಜ್ಯದ ಹೆಸರನ್ನು ಪ್ರಸಿದ್ಧಿಗೊಳಿಸಿದ್ದರು. 50,000 ಜನರನ್ನು ತಮ್ಮ ಸಂಸ್ಥೆಯಲ್ಲಿ ನೇಮಕ ಮಾಡಿಕೊಂಡು, ಅವರ ಕುಟುಂಬಗಳಿಗೆ ನೆರವಾಗಿದ್ದರು. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ.
-ಜಗದೀಶ ಶೆಟ್ಟರ, ಮಾಜಿ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.