ಸಾಂಸ್ಕೃತಿಕ ಉತ್ಸವಕ್ಕೆ ಪ್ರಧಾನಿಗೆ ಆಹ್ವಾನ
Team Udayavani, Aug 4, 2018, 11:27 AM IST
ಹುಬ್ಬಳ್ಳಿ: ವಿಜಯಪುರದಲ್ಲಿ ಡಿ.31ರಂದು ನಡೆಯಲಿರುವ ಭಾರತೀಯ ವಿಕಾಸ ಸಂಗಮದ ಭಾರತೀಯ ಸಾಂಸ್ಕೃತಿಕ ಉತ್ಸವ-5 ಕಾರ್ಯಕ್ರಮಕ್ಕೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಉತ್ಸವದ ಸಂಘಟನಾ ಸಮಿತಿ ಆಹ್ವಾನ ನೀಡಿದೆ.
ನವದೆಹಲಿಯಲ್ಲಿ ಸಂಸದರಾದ ಸುರೇಶ ಅಂಗಡಿ, ಭಗವಂತ ಖೂಬಾ, ರಾಜ್ಯಸಭಾ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇಡಂ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಕಾಸ ಸಂಗಮದ ರಾಜ್ಯ ಸಂಚಾಲಕ ಚಂದ್ರಶೇಖರ ಢವಳಗಿ ಅವರನ್ನೊಳಗೊಂಡ ನಿಯೋಗ ಮೋದಿಯವರನ್ನು ಭೇಟಿ ಮಾಡಿ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿತು.
ಡಿ.31ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಆಗಮಿಸುವಂತೆ ಪ್ರಧಾನಿಗೆ ಮನವಿ ಮಾಡಲಾಗಿದ್ದು, ಇದಕ್ಕೆ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅದೇ ರೀತಿ, ಸಮಾರಂಭದ ಉದ್ಘಾಟನೆಗೆ ಆಗಮಿಸುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೂ ಆಹ್ವಾನ ನೀಡಲಾಗಿದೆ ಎಂದು ಚಂದ್ರಶೇಖರ ಢವಳಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.