IPS Officer: ಹಾಸನದಲ್ಲಿ ಜೀಪ್ ಅಪಘಾತ; ಪ್ರೊಬೇಷನರಿ ಐಪಿಎಸ್ ಅಧಿಕಾರಿ ಸಾವು
ಇಂದು ಎಎಸ್‌ಪಿ ಆಗಿ ಅಧಿಕಾರ ವಹಿಸಿಕೊಳ್ಳಬೇಕಿತ್ತು
Team Udayavani, Dec 2, 2024, 10:52 AM IST
ಹಾಸನ: ಪೊಲೀಸ್ ಬೊಲೆರೋ ಜೀಪ್ ಅಪಘಾತಕ್ಕೀಡಾಗಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ರ್ಷವರ್ಧನ್ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ಭಾನುವಾರ (ಡಿ.1 ರಂದು) ರಾತ್ರಿ ನಡೆದಿದೆ.
ಮಧ್ಯಪ್ರದೇಶದ ಜಬಲ್‌ಪುರ ಮೂಲದ ಕರ್ನಾಟಕದ ಸೇವೆಗೆ ಆಯ್ಕೆಯಾಗಿದ್ದ 2023ನೇ ಸಾಲಿನ ಐಪಿಎಸ್ ಅಧಿಕಾರಿ ರ್ಷವರ್ಧನ್, ಮೈಸೂರಿನ ಪೊಲೀಸ್ ತರಬೇತಿ ಕೇಂದ್ರದಲ್ಲಿ ತರಬೇತಿ ಪೂರ್ಣಗೊಳಿಸಿ, ಹಾಸನ ಜಿಲ್ಲಾ ಎಎಸ್ಪಿಯಾಗಿ ಸೋಮವಾರ ಕಾರ್ಯಭಾರ ವಹಿಸಿಕೊಳ್ಳಬೇಕಿತ್ತು. ಅವರನ್ನು ಹಾಸನದ ಡಿಎಆರ್ ಕಾನ್ಸ್‌ಟೇಬಲ್ ಮಂಜೇಗೌಡ ಮೈಸೂರಿ ನಿಂದ ಹಾಸನಕ್ಕೆ ಕರೆತರುತ್ತಿದ್ದಾಗ ಕಿತ್ತಾನೆ ಗಡಿಯಲ್ಲಿ ಬೊಲೆರೋ ಜೀಪ್ ಟೈರ್ ಸ್ಫೋಟಗೊಂಡು, ಪಲ್ಟಿಯಾಗಿದೆ. ಜೀಪ್ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಅವ ರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲ ಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸಿಎಂ ಸಂತಾಪ: ಹರ್ಷವರ್ಧನ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು.
ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು.
ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ… pic.twitter.com/VwU86Irabi
— Siddaramaiah (@siddaramaiah) December 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Munirathna: ಮುನಿರತ್ನ ವಿರುದ್ಧದ ಮತ್ತೂಂದು ಕೇಸ್ ಎಸ್‌ಐಟಿಗೆ ವರ್ಗಾವಣೆ?
Adjustment Politcs: ಬಿವೈವಿ ಹೊಂದಾಣಿಕೆ ದಾಖಲೆ ಬಿಡುಗಡೆ ಮಾಡಲೇ: ಶಾಸಕ ಯತ್ನಾಳ್
Local Body Election: ಫೆಬ್ರವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಡಿಸಿಎಂ ಡಿಕೆಶಿ ಸುಳಿವು
Adjustment Evidence: ಏಕೆ ಕಾಯುತ್ತೀರಿ, ಈಗಲೇ ಬಿಡುಗಡೆ ಮಾಡಿ: ಬಿ.ವೈ.ವಿಜಯೇಂದ್ರ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Illegal Gun Purchase case: ಬೈಡನ್ ಬೇಷರತ್ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!
Kollur: ರಸ್ತೆಯುದ್ದಕ್ಕೂ ಪ್ಲಾಸ್ಟಿಕ್ ಬಾಟಲಿಗಳ ತ್ಯಾಜ್ಯ
Mangaluru: ಸ್ಮಾರ್ಟ್‌ಸಿಟಿಯಿಂದ ಬೀಚ್ ಸ್ವಚ್ಛತೆಗೆ ಆದ್ಯತೆ
Investigative Authorities: ಕುಸಿಯುತ್ತಿದೆ ತನಿಖಾ ಪ್ರಾಧಿಕಾರಗಳ ವಿಶ್ವಾಸಾರ್ಹತೆ !
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.