ಭಾಸ್ಕರ್ ರಾವ್ ವರ್ಗಾವಣೆ; ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ
Team Udayavani, Jul 31, 2020, 2:30 PM IST
ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಗುಪ್ತದಳ ವಿಭಾಗದ ಹೆಚ್ಚುವರಿ ಪೊಲಿಸ್ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಸರ್ಕಾರ ನೇಮಿಸಿದೆ.
ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ನಿರ್ದೇಶಕರನ್ನಾಗಿ ಸರ್ಕಾರ ನೇಮಿಸಿದೆ.
ಕಮಲ್ ಪಂತ್ ಅವರ ವರ್ಗಾವಣೆ ಕಾರಣದಿಂದ ಗುಪ್ತದಳ ವಿಭಾಗದ ಹೆಚ್ಚುವರಿ ಪೊಲಿಸ್ ಮಹಾನಿರ್ದೇಶಕರನ್ನಾಗಿ ಬಿ. ದಯಾನಂದ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ನಿರ್ದೇಶಕರಾಗಿದ್ದ ಕಮಲ್ ಪಂತ್ ಅವರು 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಶಿವಮೊಗ್ಗ ಇನ್ನಿತರ ಕಡೆಗಳಲ್ಲಿ ಎಸ್ ಪಿಯಾಗಿ, ಕೇಂದ್ರ ವಲಯ ಐಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ನಗರ ಹೆಚ್ಚುವರಿ ಪೊಲೀಸ್ ಆಯಕ್ತರಾಗಿಯೂ ಕೆಲಸ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.