ಅರಸು ಟ್ರಕ್ ಟ್ರಮಿನಲ್‌ನಲ್ಲಿ ಅಕ್ರಮ ; ವಾರ್ತಾ ಇಲಾಖೆ ಅಧಿಕಾರಿ ಸೆರೆ
Team Udayavani, May 28, 2024, 11:06 PM IST
ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟ್ರಮಿನಲ್‌ನಲ್ಲಿ ನಡೆದಿದ್ದ 47.10 ಕೋಟಿ ರೂ. ಅಕ್ರಮ ಪ್ರಕರಣದಲ್ಲಿ ಅಧಿಕಾರಿಗಳು ಡಿಡಿಯುಟಿಟಿಎಲ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್. ಶಂಕರಪ್ಪ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಸೋಮವಾರ ಶಂಕರಪ್ಪನನ್ನು ಬಂಧಿಸಿದ್ದ ಸಿಐಡಿ ಅಧಿಕಾರಿಗಳು, ಮಂಗಳವಾರ ಕೋರ್ಟ್‌ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಎರಡು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾಣಿಜ್ಯ ಪ್ರಚಾರ ಶಾಖೆಯ ಉಪನಿರ್ದೇಶಕರಾಗಿರುವ ಎಸ್. ಶಂಕರಪ್ಪ, ಈ ಹಿಂದೆ ಡಿಡಿಯುಟಿಟಿಎಲ್‌ನಲ್ಲಿ ಎಂ.ಡಿ. ಆಗಿದ್ದರು. ಈ ಅವಧಿಯಲ್ಲಿ 47.10 ಕೋಟಿ ರೂ. ಅಕ್ರಮ ನಡೆದಿತ್ತು. ಈ ಸಂಬಂಧ ದೊರೆತ ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆೆ. ಡಿಡಿಯುಟಿಟಿಎಲ್‌ನಲ್ಲಿ 2021ರಿಂದ 2023ರ ಅವಧಿಯಲ್ಲಿ ನಡೆದಿದ್ದ ಅಕ್ರಮದ ಬಗ್ಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಅವರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟೆಂಬರ್ 23ರಂದು ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸರಕಾರ ಸಿಐಡಿಗೆ ವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.