ಸರ್ಕಾರದ ಬೊಕ್ಕಸ ಖಾಲಿ: ಈಶ್ವರ್ ಖಂಡ್ರೆ ಆರೋಪ
ರಾಜ್ಯ ಸರ್ಕಾರದಲ್ಲಿ ಆರ್ಥಿಕ ಸಂಕಷ್ಟ ಇದ್ದರೂ ಕೇಂದ್ರ ಸರ್ಕಾರ ರಾಜ್ಯದತ್ತ ತಿರುಗಿ ನೋಡಿಲ್ಲ ಎಂದು ಆರೋಪ
Team Udayavani, May 15, 2020, 6:45 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿದ್ದು, ತನ್ನ ನೌಕರರಿಗೆ ವೇತನ ಬಿಡುಗಡೆ ಮಾಡಿಲ್ಲ. ಯಾವುದೇ ಕೆಲಸಗಳಿಗೂ ಹಣ ಬಿಡುಗಡೆಯಾಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಆರ್ಥಿಕ ಸಂಕಷ್ಟ ಇದ್ದರೂ ಕೇಂದ್ರ ಸರ್ಕಾರ ರಾಜ್ಯದತ್ತ ತಿರುಗಿ ನೋಡಿಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನ ವನ್ನೇ
ನೀಡಿಲ್ಲ. ಕೇಂದ್ರ ಇತ್ತೀಚೆಗೆ ಅನುದಾನ ಬಿಡುಗಡೆ ಮಾಡಿದ ರಾಜ್ಯಗಳಲ್ಲಿ ಕರ್ನಾಟಕದ ಹೆಸರಿಲ್ಲ ಎಂದರು. ಕೋವಿಡ್ ಪರಿಹಾರ ವಿತರಣೆಯಲ್ಲಿ ಕೇಂದ್ರ ಸಂಪೂರ್ಣ ವಿಫಲವಾಗಿದೆ. ಬೆಟ್ಟ ಅಗೆದು ಇಲಿ ಹಿಡಿ ದಂತಾಗಿದೆ. ಬರೀ ಮಾಯಾಬಜಾರ್ ತೋರಿಸಿ ಜನರನ್ನು ಯಾಮಾರಿಸುವ ಕೆಲಸ ವಾಗುತ್ತಿದೆ ಎಂದು ಟೀಕಿಸಿದರು. ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವುದು ಆರ್ಥಿಕತೆಯ ಮೇಲೆ ಹೊಡೆತ ನೀಡಲಿದೆ. ಸದನದಲ್ಲಿ ಚರ್ಚೆಯಾಗದೆ ಕಾಯ್ದೆ ಜಾರಿ ಮಾಡಬಾರದು.
ಬಹುರಾಷ್ಟ್ರೀಯ ಕಂಪನಿಗಳ ಪರ ಕೇಂದ್ರ ನಿಂತಿದೆ. ರೈತರ ವಿರುದ್ಧ ನೀತಿಗಳನ್ನ ಜಾರಿಗೆ ತರುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.