ನೂತನ ಎನ್ಇಪಿ ಪಠ್ಯದಲ್ಲಿ ಇಸ್ರೋ, ಬಾಹ್ಯಾಕಾಶ ವಿಜ್ಞಾನದ ಅಂಶಗಳು: ಸಚಿವ ಬಿ.ಸಿ ನಾಗೇಶ್

Team Udayavani, Sep 29, 2021, 5:51 PM IST

ನೂತನ ಎನ್ಇಪಿ ಪಠ್ಯದಲ್ಲಿ ಇಸ್ರೋ, ಬಾಹ್ಯಾಕಾಶ ವಿಜ್ಞಾನದ ಅಂಶಗಳು: ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಸಾರ ರಚನೆಯಾಗುವ ನೂತನ ಪಠ್ಯಕ್ರಮದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಸಾಧನೆಗಳು, ಯೋಜನೆಗಳ ವಿಚಾರಗಳನ್ನು ಸೇರ್ಪಡೆಗೊಳಿಸಲು ಇಸ್ರೋದಿಂದ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಬೆಂಗಳೂರಿನ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಇಸ್ರೋ ಅಂತರಿಕ್ಷ ಭವನದಲ್ಲಿ ಬುಧವಾರ ಇಸ್ರೋ ಅಧ್ಯಕ್ಷ ಡಾ. ಕೆ. ಶಿವನ್ ಹಾಗೂ ಹಿರಿಯ ವಿಜ್ಞಾನಿಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿ ಸಚಿವರು ಮಾತುಕತೆ ನಡೆಸಿದರು.

‘ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಧಾರಿತ ಶಿಕ್ಷಣ, ಸಂಶೋಧನೆ ಮತ್ತು ಅಭಿವೃದ್ಧಿ, ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಮನೋಭಾವ ಮೂಡಿಸುವುದರ ಮೇಲೆ ಭಾರತದ ಭವಿಷ್ಯವಿದೆ. ಶಾಲಾ ಶಿಕ್ಷಣದಲ್ಲಿ ಸರಳವಾಗಿ ಅರ್ಥವಾಗುವಂತೆ ವಿಜ್ಞಾನ, ಗಣಿತವನ್ನು ಪಾಠ ಮಾಡಬೇಕು. ಮಕ್ಕಳಲ್ಲಿ ವಿಜ್ಞಾನದ ಕುರಿತು ಆಸಕ್ತಿ ಮತ್ತು ಕುತೂಹಲ ಮೂಡಿಸುವ ಶಿಕ್ಷಣಕ್ಕೆ ಒತ್ತು ನೀಡಬೇಕಿದೆ ಎಂದು ಡಾ. ಕೆ. ಶಿವನ್ ಅವರು ಹಲವು ಕಾರ್ಯಕ್ರಮಗಳಲ್ಲಿ ಹೇಳಿದ್ದಾರೆ. ಹೀಗಾಗಿ, ಡಾ.ಕೆ ಶಿವನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು. ರಾಜ್ಯದಲ್ಲಿ ಎನ್ಇಪಿ ಜಾರಿಗೆ ಅಗತ್ಯವಾದ ಎಲ್ಲ ರೀತಿಯ ಸಲಹೆ, ಸೂಚನೆ, ಮಾರ್ಗದರ್ಶನವನ್ನು ನೀಡಿ ಸಹಕಾರ ನೀಡುವ ಭರವಸೆಯನ್ನು ಕೆ. ಶಿವನ್ ನೀಡಿದ್ದಾರೆ. ಅದಕ್ಕಾಗಿ ಇಸ್ರೋದಿಂದ ಸಮಿತಿಯೊಂದನ್ನು ರಚಿಸುವುದಾಗಿ ತಿಳಿಸಿದ್ದಾರೆ’ಎಂದು ಸಚಿವ ನಾಗೇಶ್ ತಿಳಿಸಿದರು.

‘ಗ್ರಾಮಾಂತರ ಪ್ರದೇಶಗಳು, ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಅಪಾರ ಪ್ರತಿಭೆ ಇದೆ. ಉತ್ತಮ ವೇದಿಕೆ, ಅವಕಾಶಗಳು, ಜ್ಞಾನಾರ್ಜನೆಗೆ ಬೇಕಾದ ಸೌಕರ್ಯಗಳನ್ನು ಒದಗಿಸಬೇಕು. ವಿಷಯಗಳನ್ನು ಸರಳವಾಗಿ ಅರ್ಥೈಸಬೇಕು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಸರಳವಾಗಿ ಅರ್ಥವಾಗುವಂತೆ ಪಾಠ ಮಾಡಬೇಕು. ಅದಕ್ಕೆ ತಕ್ಕಂತೆ ಪಠ್ಯಗಳನ್ನು ಸಿದ್ದಪಡಿಸಲು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಟಾಸ್ಕ್‌ಫೋರ್ಸ್ ಕಾರ್ಯ ನಿರ್ವಹಿಸುತ್ತಿದೆ ಎಂದು ಸಚಿವ ನಾಗೇಶ್ ತಿಳಿಸಿದರು.

‘ಕೌಶಲ್ಯದ ಶಿಕ್ಷಣ ಇಂದಿನ ಅಗತ್ಯವಾಗಿದೆ. ವಿಜ್ಞಾನ, ಬಾಹ್ಯಾಕಾಶದ ಕುರಿತು ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕು. ಎನ್ಇಪಿ ಜಾರಿ ಕುರಿತು ರಾಜ್ಯ ಸರಕಾರಕ್ಕೆ ಅಗತ್ಯವಿರುವ ಎಲ್ಲ ರೀತಿಯ ನೆರವು, ಸಲಹೆಗಳನ್ನು ನೀಡುತ್ತೇವೆ’ ಎಂದು ಸಚಿವರೊಂದಿಗೆ ಮಾತುಕತೆ ವೇಳೆ ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದರು.

Space on Wheels ರಾಜ್ಯದ ಇತರ ಭಾಗಗಳಿಗೆ:

ಇಸ್ರೋದ ಸಾಧನೆಗಳು, ಭವಿಷ್ಯದ ಯೋಜನೆಗಳು, ಸೌರಮಂಡಲ, ಬಾಹ್ಯಾಕಾಶದ ಕುರಿತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿ, ಆಸಕ್ತಿ ಮೂಡಿಸಲು ಇಸ್ರೋ ಆರಂಭಿಸಿರುವ Space on Wheels ವಾಹನವು ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮಾಂತರ ಭಾಗಗಳ ಶಾಲೆಗಳಿಗೂ ತೆರಳಲಿದೆ.

ಈವರೆಗೆ Space on Wheels ವಾಹನವು ಬೆಂಗಳೂರು ನಗರ ಮತ್ತು ಸುತ್ತ ಮುತ್ತಲಿನ ಭಾಗಗಳಲ್ಲಿ ಮಾತ್ರ ಸಂಚರಿಸುತ್ತಿತ್ತು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.