ದೆಹಲಿ ಭೇಟಿ ಫಲಪ್ರದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Team Udayavani, Apr 7, 2022, 10:34 AM IST
ನವದೆಹಲಿ: ಈ ಬಾರಿಯ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ, ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು.
ಇದನ್ನೂ ಓದಿ:ಮುಂದಿನ ಸಾಂಕ್ರಾಮಿಕಕ್ಕೇ ಶಿಲೀಂಧ್ರವೇ ಮೂಲ? ರೋಗಕಾರಕ ಶಿಲೀಂಧ್ರಗಳಿಂದ ವಿವಿಧ ಸೋಂಕು ಸಾಧ್ಯತೆ
ಏಪ್ರಿಲ್ 16 ಮತ್ತು 17 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡುಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ನನಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯನ್ನು ನೀಡಿದ್ದಾರೆ ಎಂದರು.
ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲ ಚರ್ಚೆ: ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲವಾಗಿ ಚರ್ಚೆಯಾಗಿದೆ. ವರಿಷ್ಠರು ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕಾರ್ಯಕಾರಿಣಿ ಸಭೆಗೆ ಬಂದ ಸಂದರ್ಭದಲ್ಲಿ ಮಿಕ್ಕ ವಿಚಾರಗಳನ್ನು ಮಾತನಾಡುವುದಾಗಿ ತಿಳಿಸಿದ್ದಾರೆ. ಇಲ್ಲಿಯ ವರಿಷ್ಠರು, ನಾಯಕರು, ಸಂಘಟನಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡೋಣ ಎಂದು ತಿಳಿಸಿದ್ದಾರೆ ಎಂದರು.
ಬಜೆಟ್ ಯೋಜನೆಗಳ ಅನುಷ್ಠಾನಕ್ಕೆ ಮಹತ್ವ: ಬೆಂಗಳೂರಿಗೆ ಹಿಂತಿರುಗಿದ ನಂತರ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಆದೇಶಗಳನ್ನು ನೀಡಿ ಅವುಗಳ ಅನುಷ್ಠಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.