Congress ಪಾರ್ಟಿಯಲ್ಲಿ ಇಂದಿರಾ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನುವ ಮಾತಿತ್ತು: ಶೆಟ್ಟರ್
ಸಿದ್ದರಾಮಯ್ಯ ಅವರು ಕಾಂಗ್ರೆಸ್ ಇತಿಹಾಸ ತೆಗೆದು ನೋಡಲಿ...
Team Udayavani, Feb 25, 2024, 6:15 PM IST
ಹುಬ್ಬಳ್ಳಿ: ”ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ವರ್ಷಗಳ ಹಿಂದಷ್ಟೇ ಕಾಂಗ್ರೆಸ್ಗೆ ಹೋಗಿದ್ದಾರೆ. ಹೀಗಾಗಿ ಅವರು ಕಾಂಗ್ರೆಸ್ ಇತಿಹಾಸ ತೆಗೆದು ನೋಡಲಿ. ಏಕೆಂದರೆ, ಕಾಂಗ್ರೆಸ್ನಲ್ಲಿ ಇಂದಿರಾ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನುವ ಮಾತಿತ್ತು” ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವಿವಾರ ಕುಟುಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್,ಅಮಿತ್ ಶಾ ಹೇಳಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಕೋಲೆ ಬಸವನಂತೆ ತಲೆ ಅಲ್ಲಾಡಿಸುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.
ಮುಂದಿನ ಒಂಬತ್ತು ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿ, ಯಾರು ಬೇಕಾದರೂ ಬಂದು ಕಾಂಗ್ರೆಸ್ ಸೇರಿ ಅಂತಾ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳುತ್ತಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಹೋಗುವವರು ಯಾರಿದ್ದಾರೆ. ಅಲ್ಲದೆ, ಮೂಲ ಕಾಂಗ್ರೆಸ್ಸಿಗರೇ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರುತ್ತಿದ್ದಾರೆ.ಶಿವಕುಮಾರ್ ಭ್ರಮೆಯಲ್ಲಿದ್ದಾರೆ. ಇದು ಕಾಂಗ್ರೆಸ್ನ ಕೊನೆಯ ಸರ್ಕಾರ. ಮುಂದೆ ಯಾವತ್ತೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.
ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ಇನ್ನು ಅಧಿಕೃತವಾಗಿ ಯಾವುದೇ ಘೋಷಣೆ ಆಗಿಲ್ಲ. ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಟಿಕೆಟ್ ಬೇಡಿಕೆ ಸೇರಿದಂತೆ ಇತರೆ ಗೊಂದಲಗಳ ವಿಚಾರ ಕೇವಲ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತೆ ಅಷ್ಟೇ. ಸದ್ಯದಲ್ಲೇ ಎಲ್ಲವೂ ಇತ್ಯರ್ಥವಾಗಲಿದೆ ಎಂದರು.
ಈ ಮಾಸಾಂತ್ಯದಲ್ಲಿ 100 ಸೀಟು ಘೋಷಣೆ ವಿಚಾರ ಕೇವಲ ಮಾಧ್ಯಮ ಸೃಷ್ಟಿ ಅಷ್ಟೇ. ಅಲ್ಲಿಯವರೆಗೂ ಕಾದು ನೋಡಬೇಕು ಎಂದರು.
ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರ ವಿಜಯೋತ್ಸವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಸರ್ವ ಪಕ್ಷದಿಂದ ಸ್ಪಷ್ಟ ನಿರ್ಧಾರವಾದಾಗ ಮಾತ್ರ ಎಲ್ಲವೂ ಬಗೆ ಹರಿಯಲಿದೆ ಎಂದರು.
ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟನೆಗೆ ಗೈರಾದ ಬಗ್ಗೆ ಸ್ಪಷ್ಟನೆ ನೀಡಿ, ನಾನು ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ ಅಂತಾ ಮೊದಲೇ ಹೇಳಿದ್ದೆ. ಇನ್ನೊಂದು ವಾರದಲ್ಲಿ ಎಲ್ಲ ಗೊಂದಲಗಳಿಗೂ ತೆರೆ ಬೀಳುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.