ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುವುದು ಉತ್ತಮ: ಸುರೇಶ್ ಕುಮಾರ್
Team Udayavani, May 23, 2021, 3:10 PM IST
ಬೆಂಗಳೂರು: ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉಚಿತ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಸಚಿವರು, ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ಸಂಪೂರ್ಣವಾಗಿ ತಹಬಂದಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕವಾಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಸ್ತುತ ಕೋವಿಡ್ ಪ್ರಸರಣವು ಎಲ್ಲೆಡೆ ತೀವ್ರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರವು ಯೋಜಿಸಿದೆ ಎಂದರು.
ಇದನ್ನೂ ಓದಿ:ಕೋವಿಡ್ ಹಿನ್ನೆಲೆ : ಅನಾಥ ಮಕ್ಕಳಿಗೆ ವಿರಕ್ತಮಠದಿಂದ ಉಚಿತ ಶಿಕ್ಷಣ
ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳ್ಳಬೇಕೆಂದು ಹಲವರ ಪ್ರತಿಪಾದನೆಯಾಗಿದೆ. ಸರಳೀಕೃತ ಮಾದರಿಯಲ್ಲಿ ಇಡೀ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲು 45 ದಿನಗಳ ಕಾಲಾವಕಾಶ ಅಗತ್ಯವಿದೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯೂ ಕಡಿಮೆ ಅವಧಿಯ ಪರೀಕ್ಷೆಗಳನ್ನು ನಡೆಸುವ ಯೋಜನೆಯನ್ನು ಸಲಹಾತ್ಮಕವಾಗಿ ಹೇಳಿದೆ. ಕರ್ನಾಟಕ ರಾಜ್ಯವು ಕಳೆದ ಸಾಲಿನಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಿದ ಅನುಭವ ಹೊಂದಿದ್ದು, ಈ ಅನುಭವದ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಸಮರ್ಥವಾಗಿ ಆಯೋಜಿಸುವುದು ಹೆಚ್ಚಿನ ಸಮಸ್ಯೆಯಾಗದಿದ್ದರೂ, ವಿದ್ಯಾರ್ಥಿಗಳ ಕಲಿಕೆ, ಪೋಷಕರ ಮನ:ಸ್ಥಿತಿ, ಕೇಂದ್ರ ಸರ್ಕಾರದ ಸಲಹೆಗಳು ಹಾಗೂ ಪ್ರಸ್ತುತ ಪೂರ್ವಸಿದ್ಧತಾ ಕಾರ್ಯಗಳನ್ನು ಸಮಗ್ರವಾಗಿ ಅವಲೋಕಿಸಿ, ಒಟ್ಟಾರೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ದ್ವಿತೀಯ ಪಿಯು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜುಲೈ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ ತಿಂಗಳಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ. ಹಾಗಾಗಿ ನೀಟ್/ಜೆಇಇ/ಸಿಇಟಿ/ಐಸಿಎಆರ್/ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ತಿಂಗಳ ಸೂಕ್ತ ದಿನಾಂಕಗಳಂದು ಆಯೋಜಿಸಬಹುದಾಗಿದೆಯೆಂದೂ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದರು.
ವಿವಿಧ ರಾಜ್ಯಗಳ ಶಿಕ್ಷಣ ಸಚಿವರು ತಮ್ಮ ರಾಜ್ಯಗಳ ಸ್ಥಿತಿಗತಿಗಳನ್ನು ಗಮನಕ್ಕೆ ತಂದರು ಹಾಗೂ ಸಿ.ಬಿ.ಎಸ್.ಇ. ಮಂಡಳಿಯು ಸೇರಿದಂತೆ ಬಹುತೇಕ ರಾಜ್ಯಗಳು ಪರೀಕ್ಷೆ ನಡೆಸುವ ಪರವಾಗಿ ವಿಚಾರ ಮಂಡಿಸಿದರು. ಬಹುಪಾಲು ಸಚಿವರು ಪರೀಕ್ಷೆಗಳನ್ನು ನಡೆಸಲೇಬೇಕೆಂದು ಪ್ರತಿಪಾದಿಸಿದರು. ಇಂದಿನ ಸಭೆಯಲ್ಲಿ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಜವಳಿ ಸಚಿವೆ ಸ್ಮೃತಿ ಇರಾನಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸೇರಿದಂತೆ ಹಲವು ರಾಜ್ಯಗಳ ಶಿಕ್ಷಣ ಸಚಿವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.