
ಬಾಹುಬಲಿ-2 ಬಿಡುಗಡೆಗೆ ತಡೆ ಸರಿಯಲ್ಲ: ರಾಜಮೌಳಿ
Team Udayavani, Apr 17, 2017, 10:15 AM IST

ಬೆಂಗಳೂರು: ಎ.28ಕ್ಕೆ “ಬಾಹುಬಲಿ-2′ ಸಿನೆಮಾ ತೆರೆ ಕಾಣಲಿದೆ. “ಕಟ್ಟಪ್ಪ’ ಪಾತ್ರಧಾರಿ ನಟ ಸತ್ಯರಾಜ್ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಸಿನೆಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಕನ್ನಡ ಸಂಘಟನೆಗಳು ಹೇಳಿರುವುದು ಸರಿಯಲ್ಲ ಎಂದಿದ್ದಾರೆ ನಿರ್ದೇಶಕ ರಾಜಮೌಳಿ. ಸತ್ಯರಾಜ್ 9 ವರ್ಷಗಳ ಹಿಂದೆ ಆಕ್ಷೇಪಾರ್ಹ ಮಾತುಗಳನ್ನಾಡಿದ್ದರೆಂದು ಕನ್ನಡ ಸಂಘಟನೆಗಳ ಆಕ್ಷೇಪವಾಗಿದೆ.
ಸತ್ಯರಾಜ್ ಜತೆಗೆ 5 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಅವರು ಮತ್ತೂಬ್ಬರ ಭಾವನೆಗಳಿಗೆ ಧಕ್ಕೆಯಾಗುವಂತೆ ಮಾತನಾಡುತ್ತಾರೆಂದರೆ ನಂಬಲು ಸಾಧ್ಯವಿಲ್ಲ ಎಂದಿದ್ದಾರೆ ರಾಜಮೌಳಿ. 9 ವರ್ಷಗಳ ಹಿಂದಿನ ಮಾತುಗಳ ಬಳಿಕ ಅವರ 30 ಸಿನೆಮಾಗಳು ಕರ್ನಾಟಕದಲ್ಲಿ ಬಿಡುಗಡೆಯಾಗಿವೆ. ಬಾಹುಬಲಿ 1 ಬಿಡುಗಡೆಯಾದ ಸಂದರ್ಭದಲ್ಲಿಯೂ ಆಕ್ಷೇಪಾರ್ಹ ಮಾತುಗಳ ಬಗ್ಗೆ ಯಾರೂ ಪ್ರಶ್ನಿಸಲಿಲ್ಲ. ಈಗ ಏಕಾಏಕಿ ಹಳೆಯ ವಿವಾದ ಯಾವ ಕಾರಣಕ್ಕಾಗಿ ಪ್ರಸ್ತಾವವಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ ರಾಜಮೌಳಿ. ಜತೆಗೆ ವಿವಾದಕ್ಕೂ ನಮಗೂ ಏನೂ ಸಂಬಂಧವಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.