ಸಭಾಪತಿ ಮೈತ್ರಿ?: ಜೆಡಿಎಸ್‌ನ ಹೊರಟ್ಟಿ ಮಾಹಿತಿ ಪಡೆದ ಜೆ.ಪಿ. ನಡ್ಡಾ
Team Udayavani, Jan 5, 2021, 6:39 AM IST
ಬೆಂಗಳೂರು: “ಜೆಡಿಎಸ್ ಸ್ನೇಹ ಇಲ್ಲ’ ಎಂದು ಬಿಜೆಪಿ, “ಬಿಜೆಪಿ ಮೈತ್ರಿಗೆ ಮನವಿ ಸಲ್ಲಿಸಿಲ್ಲ’ ಎಂದು ಜೆಡಿಎಸ್‌ಹೇಳುತ್ತಿರುವುದರ ನಡುವೆಯೇ ವಿಧಾನ ಪರಿಷತ್ ಸಭಾಪತಿ ವಿಚಾರದಲ್ಲಿ ಎರಡೂ ಪಕ್ಷಗಳ ರಾಷ್ಟ್ರೀಯ ನಾಯಕರು ಸದ್ದಿಲ್ಲದೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಪರಿಷತ್ ಸಭಾಪತಿ ನೇಮಕ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ನಡುವೆ ಮಾತುಕತೆ ನಡೆದಿದೆ. ಜೆಡಿಎಸ್‌ನ ಹಿರಿಯ ಶಾಸಕ ಬಸವರಾಜ್ ಹೊರಟ್ಟಿ ಅವರ ಮಾಹಿತಿಯನ್ನು ಜೆ.ಪಿ. ನಡ್ಡಾ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಕೆಳಗಿಳಿಸಲು ಬಿಜೆಪಿ-ಜೆಡಿಎಸ್ ಒಂದಾಗಿದ್ದು, ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ನೋಟಿಸ್ ನೀಡಿವೆ.
ವಿವರ ಪಡೆದ ನಡ್ಡಾ
ದೇವೇಗೌಡರೊಂದಿಗೆ ನಡೆದಿರುವ ಮಾತುಕತೆ ಆಧಾರದಲ್ಲಿ ಜೆ.ಪಿ. ನಡ್ಡಾ, ಅವರು ಬಸವರಾಜ ಹೊರಟ್ಟಿ ಅವರ ವಿವರ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜೆಡಿಎಸ್ ಮನವಿ ಜೀವಂತ
ಸಭಾಪತಿ ವಿರುದ್ಧ ಬಿಜೆಪಿ ಸದಸ್ಯರು ನೀಡಿದ್ದ ಅವಿಶ್ವಾಸ ನಿರ್ಣಯದ ನೋಟಿಸ್ ನಿಯಮ ಪ್ರಕಾರ ಇಲ್ಲ ಎನ್ನುವ ಕಾರಣಕ್ಕೆ ಅದನ್ನು ತಳ್ಳಿ ಹಾಕಿರು ವುದಾಗಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಕಡತದಲ್ಲಿ ದಾಖಲಿಸಿದ್ದಾರೆ. ಆದರೆ ಡಿ. 15ರಂದು ಪರಿಷತ್ತಿನಲ್ಲಿ ಗಲಭೆ ನಡೆದ ಬಳಿಕ ಜೆಡಿಎಸ್‌ನ 14 ಸದಸ್ಯರು ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ತಮ್ಮ ಬೆಂಬಲ ಇದೆ ಎಂದು ಸಹಿ ಮಾಡಿ ಪರಿಷತ್ ಕಾರ್ಯದರ್ಶಿಗೆ ನೋಟಿಸ್ ನೀಡಿದ್ದರು. ಈ ಬಗ್ಗೆ ಸಭಾಪತಿ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಹೀಗಾಗಿ ಬಿಜೆಪಿ ಸದಸ್ಯರ ನೋಟಿಸ್ ತಿರಸ್ಕೃತ ಗೊಂಡಿದ್ದರೂ ಜೆಡಿಎಸ್ ಸದಸ್ಯರ ಅವಿಶ್ವಾಸ ನಿರ್ಣಯದ ನೋಟಿಸ್ ಆಧಾರದಲ್ಲಿ ಸಭಾಪತಿ ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಅಥವಾ ತಮಗೆ ಬಹುಮತ ಇಲ್ಲ ಎನ್ನುವುದನ್ನು ಮನಗಂಡು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎನ್ನುವುದು ಬಿಜೆಪಿ ಸದಸ್ಯರ ವಾದ.
ಪ್ರಧಾನಿ ಮೋದಿಗೆ ಕರೆ
ಸಭಾಪತಿ ಬದಲಾಯಿಸಲು ಬಿಜೆಪಿ ನಾಯಕರು ಜೆಡಿಎಸ್ ಬೆಂಬಲ ಕೋರಿದಾಗ ಸದಸ್ಯರು, “ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ನೀಡುವುದಾದರೆ ಮಾತ್ರ ಬಿಜೆಪಿ ನಡೆಯನ್ನು ಬೆಂಬಲಿಸಬೇಕು’ ಎಂದು ವರಿಷ್ಠ ದೇವೇಗೌಡರನ್ನು ಆಗ್ರಹಿಸಿದ್ದರು. ಹೀಗಾಗಿ ದೇವೇಗೌಡರು ಈ ವಿಚಾರವಾಗಿ ಚರ್ಚಿಸಲು ಪ್ರಧಾನಿ ಮೋದಿ ಅವರಿಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಪ್ರಧಾನಿ ಮೋದಿ ಈ ವಿಷಯದ ಕುರಿತು ನಡ್ಡಾ ಅವರೊಂದಿಗೆ ಚರ್ಚಿಸಲು ಸೂಚಿಸಿದ್ದರು ಎನ್ನಲಾಗಿದೆ.
ಸಿಎಂ ವಿರುದ್ಧ ಶಾಸಕರು ಗರಂ
ಬೆಂಗಳೂರು: ಬಜೆಟ್ ಮಂಡನೆಗೆ ಮುನ್ನ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕರೆದ ವಿಭಾಗವಾರು ಶಾಸಕರ ಸಭೆಯಲ್ಲಿ ಸಿಎಂ ಯಡಿಯೂರಪ್ಪ ವಿರುದ್ಧವೇ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಸಿಎಂ ಬಿಎಸ್‌ವೈ ಆಡಳಿತಕ್ಕೆ ಚುರುಕು ನೀಡಿ ಅಭಿವೃದ್ಧಿ ವೇಗ ಹೆಚ್ಚಿಸುವ ಭರವಸೆ ನೀಡಿದ್ದಾರೆ.
ಸೋಮವಾರ ಬಿಎಸ್‌ವೈ ಅವರು ಕರಾವಳಿ, ಕಲ್ಯಾಣ ಕರ್ನಾಟಕ, ಮುಂಬಯಿ ಕರ್ನಾಟಕ, ಮತ್ತು ಮಧ್ಯ ಕರ್ನಾಟಕ ಭಾಗದ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಯಡಿಯೂರಪ್ಪ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಮತ್ತು ಆಡಳಿತದಲ್ಲಿ ಇತರರ ಹಸ್ತಕ್ಷೇಪ ಹೆಚ್ಚಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ, ಕರುಣಾಕರ ರೆಡ್ಡಿ ಸಹಿತ ಕೆಲವು ಹಿರಿಯ ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಈ ನಡುವೆ ಶಾಸಕರ ಸಭೆ ಕರೆದಿರುವುದಕ್ಕೆ ಹಲವು ಶಾಸಕರು ಸಂತಸ ವ್ಯಕ್ತಪಡಿಸಿದ್ದಾರೆ.
ನಮ್ಮನ್ನು ನಿರ್ಲಕ್ಷಿಸಬೇಡಿ: ಕರಾವಳಿ ಶಾಸಕರ ಮನವಿ
ಕರಾವಳಿ ಶಾಸಕರು ಸರಕಾರಕ್ಕೆ ಮುಜುಗರ ತರುವುದಿಲ್ಲ. ಆದರೆ ನಮ್ಮನ್ನು ನಿರ್ಲಕ್ಷ್ಯ ಮಾಡ ಬಾರದು ಎಂದು ದಕ್ಷಿಣ ಕನ್ನಡ, ಉಡುಪಿಯ ಬಿಜೆಪಿ ಶಾಸಕರು ಸಿಎಂಗೆ ಮನವಿ ಮಾಡಿದ್ದಾರೆ. ನಾವು ಶಿಸ್ತಿನಿಂದ ಇರುತ್ತೇವೆ ಎಂಬ ಕಾರಣಕ್ಕೆ ಹಲವು ಬಾರಿ ನಮ್ಮನ್ನು ನಿರ್ಲಕ್ಷಿಸಲಾಗಿದೆ. ಆದರೆ ಎಲ್ಲದಕ್ಕೂ ಸುಮ್ಮನೆ ಇರುತ್ತೇವೆ ಎಂದು ಅರ್ಥ ಅಲ್ಲ. ಕರಾವಳಿ ಭಾಗಕ್ಕೆ ವಿಶೇಷ ಯೋಜನೆ, ಅನುದಾನ ನೀಡ ಬೇಕು ಎಂದು ಮನವಿ ಮಾಡಿದ್ದಾರೆ.
ಕರಾವಳಿಯ ರಾ.ಹೆ. ಯೋಜನೆಗಳಿಗೆ ರಾಜ್ಯದ ಪಾಲಿನ ಹಣ ಬಿಡುಗಡೆಗೊಳಿಸಬೇಕು. ರಾ.ಹೆ. ಪ್ರಾಧಿ ಕಾರದ ಅಧಿಕಾರಿಗಳ ಜತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ; ಕರಾವಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸುವಂತೆ, ಡೀಮ್ಡ್ ಫಾರೆಸ್ಟ್, ಕುಮ್ಕಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೆ ಸಿಎಂ ಅಗತ್ಯ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.