ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Team Udayavani, Nov 20, 2024, 6:25 PM IST
ಹುಬ್ಬಳ್ಳಿ: ಯಾವುದೇ ಪೂರ್ವಾಪರ ಯೋಚನೆಯಿಲ್ಲದೆ ಜಾರಿಗೊಳಿಸಿದ ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸರಕಾರದಿಂದ ಆಗುತ್ತಿಲ್ಲ. ಹೀಗಾಗಿ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುವ ಕೆಲಸಕ್ಕೆ ರಾಜ್ಯ ಸರಕಾರ ಮುಂದಾಗಿದೆ ಎಂದು ಸಂಸದ ಜಗದೀಶ ಶೆಟ್ಟರ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯ ಸರಕಾರ ಇನ್ನೊಂದು ಮಾರ್ಗದಲ್ಲಿ ನಡೆಯುತ್ತಿದೆ. ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಮೂಲಕ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಸರಕಾರ ಮಾಡುತ್ತಿದೆ. ಅಽಕಾರಕ್ಕೆ ಬಂದು ಒಂದೂವರೆ ವರ್ಷದ ನಂತರ ಅನರ್ಹ ಕಾರ್ಡುಗಳಿವೆ ಎಂಬುವುದು ಗೊತ್ತಾಗಿದೆ ಅನ್ನಿಸುತ್ತಿದೆ. ಎಲ್ಲಾ ಚುನಾವಣೆಗಳು ಮುಗಿದ ನಂತರ ಬಿಪಿಎಲ್ ಕಾರ್ಡುಗಳಿಗೆ ಕೈ ಹಾಕಿರುವುದು ಗ್ಯಾರಂಟಿ ಯೋಜನೆ ನಿಲ್ಲಿಸುವ ಸೂಚನೆಯಾಗಿದೆ ಎಂದು ಆರೋಪಿಸಿದರು.
ಸರಕಾರಕ್ಕೆ ವಾಲ್ಮಿಕಿ ಹಗರಣ, ಮುಡಾ ಹಗರಣದ ಸೇರಿದಂತೆ ಇತರೆ ಅವ್ಯವಹಾರಗಳು ರಾಜ್ಯ ಸರಕಾರಕ್ಕೆ ಕೆಟ್ಟು ಹೆಸರು ಬಂದಿದೆ. ಇದನ್ನು ಮರೆ ಮಾಚುವ ಉದ್ದೇಶದಿಂದ ಬಿಜೆಪಿ ಪಕ್ಷದ ವಿರುದ್ಧ ಆರೋಪ ಮಾಡುವ ಕೆಲಸ ಶುರು ಮಾಡಿಕೊಂಡಿದ್ದಾರೆ. ರಾಜ್ಯ ಸರಕಾರವನ್ನು ಬೀಳಿಸುವ ಕೆಲಸ ಮಾಡಿಲ್ಲ. ಶಾಸಕರ ಖರೀದಿಗೆ ಆಮೀಷವೊಡ್ಡಿದ್ದಾರೆ ಎನ್ನುವ ಆರೋಪ ಮಾಡುತ್ತಿದ್ದಾರೆ. ಇದನ್ನು ಶಾಸಕ ರವಿ ಗಣಿಗ ಅವರ ಮೂಲಕ ಹೇಳಿಸಿದ್ದಾರೆ. ಸರಕಾರದ ಬಳಿ ಈ ಕುರಿತು ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಈ ರೀತಿ ವಿಷಯಾಂತರ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಭೆ ತರುವಂತದಲ್ಲ ಎಂದರು.
ಇದನ್ನೂ ಓದಿ: ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
Mandya: ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.