ಶೆಟ್ಟರ್‌ ಸಿಟ್ಟು, ಹಿರಿಯರ ನಡೆ: ನೂತನ ಸಿಎಂ ಬೊಮ್ಮಾಯಿಗೆ ಸಂಕಟ


Team Udayavani, Jul 31, 2021, 10:25 AM IST

ಶೆಟ್ಟರ್‌ ಸಿಟ್ಟು, ಹಿರಿಯರ ನಡೆ: ನೂತನ ಸಿಎಂ ಬೊಮ್ಮಾಯಿಗೆ ಸಂಕಟ

ಬೆಂಗಳೂರು: ನಾಯಕತ್ವ ಬದಲಾವಣೆಯ ಸಂದರ್ಭದಲ್ಲಿ ತಮ್ಮನ್ನು ಪರಿಗಣಿಸದೆ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಘೋಷಿಸಿರುವುದಕ್ಕೆ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಮುನಿಸಿಕೊಂಡಿದ್ದಾರೆ. ಅದೇ ಕಾರಣಕ್ಕೆ ನೈತಿಕತೆಯ ಅಸ್ತ್ರ ಪ್ರಯೋಗಿಸಿ ಸಂಪುಟದಿಂದ ದೂರ ಉಳಿಯುವ ಸಂದೇಶ ರವಾನಿಸಿದ್ದಾರೆ.

ನಾಯಕತ್ವ ಬದಲಾವಣೆ ಸಂದರ್ಭದಲ್ಲಿ ಹಿರಿತನ ಹಾಗೂ ಅನುಭವದ ಆಧಾರದಲ್ಲಿ ತಮ್ಮನ್ನು ಸಿಎಂ ಸ್ಥಾನಕ್ಕೆ ಪರಿಗಣಿಸಲಾಗುತ್ತದೆ ಎಂಬ ವಿಶ್ವಾಸದಲ್ಲಿದ್ದ ಶೆಟ್ಟರ್‌ ಹೆಸರನ್ನು ಈ ಬಾರಿಯೂ ಪ್ರಸ್ತಾಪಿಸದೇ ಇರುವುದಕ್ಕೆ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯ ನಂತರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶೆಟ್ಟರ್‌ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

2011ರಲ್ಲಿಯೂ ತಮ್ಮನ್ನು ಸಿಎಂ ಸ್ಥಾನಕ್ಕೆ ಪರಿಗಣಿಸದೇ ಸದಾನಂದ ಗೌಡ ಅವರಿಗೆ ಅವಕಾಶ ದೊರೆಯುವಂತೆ ಮಾಡಲಾಗಿತ್ತು. ಈಗಲೂ ತಮ್ಮನ್ನು ಕಡೆಗಣಿಸಿ ಬೊಮ್ಮಾಯಿ ಅವರ ಹೆಸರನ್ನು ಸೂಚಿಸಿದ್ದೀರಿ ಎಂದು ನೇರವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಂಪುಟದಿಂದ ದೂರ ಉಳಿಯುವ ತಂತ್ರ: ತಮಗಿಂತ ಕಿರಿಯರಾದ ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದು ತಮಗೆ ಅವಮಾನ ಮಾಡಿದಂತಾಗಿದೆ ಎಂದು ಶೆಟ್ಟರ್‌, ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗುವುದಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಅವರ ಈ ನಿರ್ಧಾರದ ಹಿಂದೆ ರಾಜಕೀಯ ಲೆಕ್ಕಾಚಾರ ಅಡಗಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಮುಖ್ಯಮಂತ್ರಿಯಾಗಿ ತಾವು ಹೊಂದಿದ್ದಅನುಭವ ಹಾಗೂ ಹಿರಿತನ ಕಡೆಗಣಿಸಲಾಗಿದೆ. ಬೊಮ್ಮಾಯಿಯವರ ಆಯ್ಕೆಯಿಂದ ಹಿರಿಯರಿಗೆ ಮುಜುಗರವಾಗಿದೆ ಎಂಬ ಸಂದೇಶ ರವಾನಿಸುವ ಲೆಕ್ಕಾಚಾರ ಅಡಗಿದೆ ಎಂಬ ಮಾತುಗಳುಕೇಳಿ ಬರುತ್ತಿವೆ.

ಮುಜುಗರ ತಪ್ಪಿಸಲು ತಂತ್ರ?: ಬಸವರಾಜ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಅವಕಾಶ ದೊರೆಯುವುದು ಅನುಮಾನ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿರುವುದರಿಂದ ತಮ್ಮನ್ನು ಸಂಪುಟದಿಂದ ಹೊರಗಿಡುವ ಸಾಧ್ಯತೆಯ ಮುಜುಗರದಿಂದ ತಪ್ಪಿಸಿಕೊಳ್ಳಲು ಶೆಟ್ಟರ್‌ ಈ ರೀತಿಯ ಕಾರ್ಯತಂತ್ರ ರೂಪಿಸಿದ್ದಾರೆ ಎಂಬ ಮಾತುಗಳಿವೆ. ಆದರೆ, ಇದರ ಹಿಂದೆ ಧಾರವಾಡ ಜಿಲ್ಲೆಯಲ್ಲಿ ತಮ್ಮ ವಿರುದ್ಧ ಪರೋಕ್ಷವಾಗಿ ಅರವಿಂದ ಬೆಲ್ಲದ್‌ ಅವರಿಗೆ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂಬ ಅಸಮಾಧಾನವೂ ಶೆಟ್ಟರ್‌ಗೆ ಮೂಡಿದೆ ಎಂಬ ಮಾತುಗಳುಕೇಳಿ ಬರುತ್ತಿವೆ.

ಇದನ್ನೂ ಓದಿ:ಬಿಜೆಪಿಗೆ “ಸಿಡಿ’ ಸಂಕಟ : ಶಾಸಕರಿಗೆ ಆತಂಕ; ಕೋರ್ಟ್‌ ಮೊರೆ ಹೋದ ರೇಣುಕಾಚಾರ್ಯ

ಜಿಲ್ಲೆಯ ಯಾವುದೇ ನಾಯಕರ ನೆರವು ಪಡೆಯದೇ ಅರವಿಂದ ಬೆಲ್ಲದ್‌ ದೆಹಲಿ ಹಾಗೂ ಸಂಘ ಪರಿವಾರದ ಮಟ್ಟದಲ್ಲಿ ವರ್ಚಸ್ಸು ಬೆಳೆಸಿಕೊಂಡು ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದರಿಂದ ಭವಿಷ್ಯದಲ್ಲಿ ತಮಗೆ ಬೆಲ್ಲದ ಪೈಪೋಟಿ ನೀಡುತ್ತಾರೆ ಎಂಬ ಲೆಕ್ಕಾಚಾರದಲ್ಲಿ ಶೆಟ್ಟರ್‌ ಇದ್ದಾರೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಬೊಮ್ಮಾಯಿ ಸಂಪುಟದಲ್ಲಿ ಧಾರವಾಡ ಜಿಲ್ಲೆಯಲ್ಲಿ ಬೆಲ್ಲದ ಬದಲು ನವಲಗುಂದ ಶಾಸಕ ಶಂಕರ ಪಾಟೀಲ್‌ ಮುನೇನಕೊಪ್ಪ ಅವರನ್ನು ಸಚಿವರನ್ನಾಗಿ ಮಾಡಿಸಲು ಕೆಲ ನಾಯಕರು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾತುಗಳುಕೇಳಿ ಬರುತ್ತಿವೆ.

ಜಗದೀಶ್‌ ಶೆಟ್ಟರ್‌ ಹೇಳಿಕೆ ನೂತನ ಸಿಎಂ ಬೊಮ್ಮಾಯಿಗೆ ಒಂದು ರೀತಿಯ ಸವಾಲಾದಂತಾಗಿದೆ. ಸಂಪುಟದಿಂದ ಹಿರಿಯರನ್ನು ಕೈಬಿಡುತ್ತಾರೆ ಎಂಬ ಆತಂಕ ಕೆಲವು ಹಿರಿಯ ಶಾಸಕರಲ್ಲಿದ್ದು, ಬಹುತೇಕರು ಸಂಪುಟದಿಂದ ದೂರ ಉಳಿಯುವ ಬಗ್ಗೆ ಚಿಂತಿಸುತ್ತಿದ್ದಾರೆ ಎನ್ನಲಾಗಿದೆ. ವಿ.ಸೋಮಣ್ಣ ಕೂಡ, ತಾವೂ ಬೊಮ್ಮಾಯಿ ಸಂಪುಟದಲ್ಲಿ ಸೇರದಿರುವ ಬಗ್ಗೆ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶಂಕರ ಪಾಗೋಜಿ

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.